No Result
View All Result
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ
English Articles

SWR Opens Makajipalli–Dharmavaram Double Line Project

by ಕಲ್ಪ ನ್ಯೂಸ್
February 23, 2026
0

Kalpa Media House  |  Hubli  | South Western Railway has successfully commissioned the 30.04 km doubling section between Makajipalli and...

Read moreDetails
Samruddhi Kundapura: The Rising Pole Star of Coastal Talent

Samruddhi Kundapura: The Rising Pole Star of Coastal Talent

February 23, 2026
Bharat gen unveils ‘Sutra’ at India AI Impact Summit, an initiative to enhance News Accessibility

Bharat gen unveils ‘Sutra’ at India AI Impact Summit, an initiative to enhance News Accessibility

February 20, 2026
Nava Carnataka Vaibhavam-Neo Carnatic Soundscapes

Nava Carnataka Vaibhavam-Neo Carnatic Soundscapes

February 20, 2026
HOSMAT Hospitals Partners with South United Football Club as Official Sports Medicine & Medical Services Leader

HOSMAT Hospitals Partners with South United Football Club as Official Sports Medicine & Medical Services Leader

February 15, 2026
  • Advertise With Us
  • Grievances
  • About Us
  • Contact Us
Tuesday, February 24, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಈಶ್ವರಪ್ಪನವರ 77ನೇ ಜನ್ಮದಿನ ಹಿನ್ನೆಲೆ: ಜೂನ್ 10, 11ರಂದು ವಿಶೇಷ ಧಾರ್ಮಿಕ ಕಾರ್ಯಕ್ರಮ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
June 6, 2025
in ಶಿವಮೊಗ್ಗ
0
ಈಶ್ವರಪ್ಪನವರ 77ನೇ ಜನ್ಮದಿನ ಹಿನ್ನೆಲೆ: ಜೂನ್ 10, 11ರಂದು ವಿಶೇಷ ಧಾರ್ಮಿಕ ಕಾರ್ಯಕ್ರಮ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಹಿರಿಯ ರಾಜಕಾರಣಿ, ಮಾಜಿ ಉಪಉಖ್ಯಮಂತ್ರಿ ಕೆ.ಎಸ್. ಈಶ್ವರಪ್ಪನವರ #K S Eshwarappa 77ನೇ ವರ್ಷದ ಹುಟ್ಟು ಹಬ್ಬವನ್ನು ನಗರದ ಹೆಸರಾಂತ ಸಾಂಸ್ಕೃತಿಕ ಸಂಸ್ಥೆ ಶ್ರೀಗಂಧ ವತಿಯಿಂದ ಜೂನ್ 10 ಮತ್ತು 11ರಂದು ಎರಡು ದಿನಗಳ ಕಾಲ ಹೋಮ, ಹವನ, ಯಾಗಗಳ ಜೊತೆಗೆ ಧಾರ್ಮಿಕ ಸಭೆ ಮತ್ತು ಪ್ರತಿಭಾಪುರಸ್ಕಾರಗಳ ಮೂಲಕ ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಗಿದೆ ಎಂದು ಕಾರ್ಯಕ್ರಮದ ರೂವಾರಿಗಳು ಆದ ವಿಕಾಸ ವಿದ್ಯಾಸಂಸ್ಥೆಯ ಕಾರ್ಯದರ್ಶಿ ಎ.ಜೆ. ರಾಮಚಂದ್ರ ತಿಳಿಸಿದರು.

ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಹಿರಿಯರಾದ ಕೆ.ಎಸ್. ಈಶ್ವರಪ್ಪನವರು ಕೇವಲ ರಾಜಕಾರಣವಲ್ಲದೆ, ಧಾರ್ಮಿಕ, ಸಾಂಸ್ಕೃತಿಕ, ಸಾಹಿತ್ಯ ಕ್ಷೇತ್ರವೂ ಸೇರಿ ಎಲ್ಲಾ ರಂಗಗಳಲ್ಲೂ ತಮ್ಮದೆ ಕೊಡುಗೆ ನೀಡಿರುವ ಹಿನ್ನೆಲೆಯಲ್ಲಿ ಎಲ್ಲರೂ ಸೇರಿ ಕೆ.ಎಸ್. ಈಶ್ವರಪ್ಪನವರ ಹುಟ್ಟು ಹಬ್ಬವನ್ನು ವಿನೋಬನಗರದ ಶುಭಮಂಗಳ ಕಲ್ಯಾಣ ಮಂಟಪದ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.

ಹಿರಿಯರೆಲ್ಲರೂ ಸೇರಿ ತಂದೆಯವರ ಹುಟ್ಟು ಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಿದ್ಧಾರೆ. ಇದು ನಮ್ಮ ಕುಟುಂಬದ ಸೌಭಾಗ್ಯವೇ ಆಗಿದೆ. ಅವರೆಲ್ಲರೂ ತಂದೆಯವರ ಮೇಲಿಟ್ಟ, ಪ್ರೀತಿ, ವಿಶ್ವಾಸಕ್ಕೆ ನಾನು ಅಭಾರಿಯಾಗಿದ್ದೇನೆ. ಎಲ್ಲಾ ಕಾರ್ಯಕ್ರಮಗಳನ್ನು ಯಶಸ್ವಿಗೊಳಿಸುವ ನಿಟ್ಟಿನಲ್ಲಿ ನಾನು ಅವರೊಂದಿಗಿದ್ದು, ಶ್ರಮಿಸಲಿದ್ದೇನೆ. ಜನರ ಸಹಕಾರವೂ ಇದಕ್ಕೆ ಅಗತ್ಯ.
– ಕೆ.ಈ. ಕಾಂತೇಶ್, ಶ್ರೀಗಂಧ ಸಂಸ್ಥೆಯ ಕಾರ್ಯದರ್ಶಿ

ಈಶ್ವರಪ್ಪ ನವರ ಹುಟ್ಟು ಹಬ್ಬದ ಅಂಗವಾಗಿ ಜೂನ್ 10 ರಂದು ನಡೆಯುವ ಶತ ಚಂಡಿಕಾ ಯಾಗದ ಕುರಿತು ಶನೈಶ್ವರ ದೇವಸ್ಥಾನದ ಪ್ರಧಾನ ಆರ್ಚಕ ಸಂದೇಶ್‍ಉಪಾಧ್ಯ ಅವರು ಮಾಹಿತಿ ನೀಡಿದರು. ಜೂ.10ರಂದು ಮಂಗಳವಾರ ಬೆಳಿಗ್ಗೆ 8 ಗಂಟೆಯಿಂದ ಶುಭಮಂಗಳ ಸಮುದಾಯ ಭವನದಲ್ಲಿ ಶ್ರೀ ಲಲಿತಾ ಸಹಸ್ರನಾಮ ಪಾರಾಯಣ, ಶ್ರೀ ವಿಷ್ಣು ಸಹಸ್ರನಾಮ ಪಾರಾಯಣ, ಸಹಸ್ರ ಚಂಡಿಕಾ ಯಾಗ, ಮಹಾರುದ್ರ ಹೋಮಗಳು ನಡೆಯಲಿವೆ. ಸಹಸ್ರ ಚಂಡಿಕಾ ಯಾಗದಲ್ಲಿ 100 ಪಾರಾಯಣ, ಸಾವಿರ ಲೀಟರ್ ಹಾಲಿನ ಅಭಿಷೇಕ, 35 ಕೆ.ಜಿ. ತುಪ್ಪ, 1 ಕ್ವಿಂಟಾಲ್ ಪರಮನ್ನಾ, 1 ಟನ್ ಹಲಸಿನ ಚಕ್ಕೆ ಬಳಕೆ ಮಾಡಲಾಗುವುದು. ಹಾಗೆಯೇ ಅತೀರುದ್ರ ಯಾಗವನ್ನು 200 ಮಂದಿ ಪುರೋಹಿತರು ನಡೆಸಿಕೊಡಲಿದ್ದಾರೆ. ಇದಾದ ಬಳಿಕ ಬೆಳಗ್ಗೆ 11 ಗಂಟೆಗೆ ಪೂರ್ಣಾಹುತಿ ಇರುತ್ತದೆ. ಇದೇ ವೇಳೆ 1008 ಮಹಿಳೆಯರಿಗೆ ಬಾಗಿನ ಅರ್ಪಣೆ ಕಾರ್ಯಕ್ರಮವಿದೆ ಎಂದರು.
ಜಿಲ್ಲಾ ಬ್ರಾಹ್ಮಣ ಮಹಾಸಭಾದ ಅಧ್ಯಕ್ಷ ನಟರಾಜ್ ಭಾಗವತ್ ಮಾತನಾಡಿ, ಹೋಮ, ಹವನ, ಯಾಗದ ಪೂರ್ಣಹುತಿ ನಂತರ ನಡೆಯಲಿರುವ ಧಾರ್ಮಿಕ ಸಭೆಯ ವಿವರ ನೀಡಿದರು. ಈಶ್ವರಪ್ಪನವರು ಗುರುಪರಂಪರೆಯನ್ನು ಅತ್ಯಂತ ಪೂಜಾಭಾವದಿಂದ ಕಂಡವರು. ನಾಡಿನ ಮಠಾಧೀಶರ ಜತೆಗೆ ಉತ್ತಮ ಒಡನಾಟ ಇಟ್ಟುಕೊಂಡು ಅವರ ಆಶೀರ್ವಾದದೊಂದಿಗೆ ಧರ್ಮದ ಉಳಿವಿಗೂ ಶ್ರಮಿಸುತ್ತಾ ಬಂದಿದ್ದಾರೆ. ಈ ಹಿನ್ನೆಲೆಯಲ್ಲಿ ಧಾರ್ಮಿಕ ಸಭೆ ನಡೆಯಲಿದ್ದು, ಇದರ ಅಧ್ಯಕ್ಷತೆಯನ್ನು ಕೆ.ಎಸ್. ಈಶ್ವರಪ್ಪನವರು ವಹಿಸಲಿದ್ದಾರೆಂದು ತಿಳಿಸಿದರು.

ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ, ಬೆಕ್ಕಿನ ಕಲ್ಮಠದ ಶ್ರೀ ಮಲ್ಲಿಕಾರ್ಜುನ ಮುರುಘರಾಜೇಂದ್ರ ಮಹಾಸ್ವಾಮೀಜಿ, ಕೂಡ್ಲಿ ಶ್ರೀ ಶೃಂಗೇರಿ ಶಂಕರ ಮಠದ ಶ್ರೀ ಅಭಿನವ ಶಂಕರ ಭಾರತಿ ಮಹಾಸ್ವಾಮೀಜಿ, ಚಿತ್ರದುರ್ಗದ ಶ್ರೀ ಬಸವಮೂರ್ತಿ ಮಾದಾರ ಚೆನ್ನಯ್ಯ ಮಹಾಸ್ವಾಮೀಜಿ, ಹೊಸದುರ್ಗ ಕಾಗಿನೆಲೆ ಗುರುಪೀಠದ ಶ್ರೀ ಈಶ್ವರಾನಂದಪುರಿ ಸ್ವಾಮೀಜಿ ಹಾಗೂ ಶಿವಮೊಗ್ಗದ ಆದಿಚುಂಚನಗಿರಿ ಮಠದ ಶ್ರೀ ಸಾಯಿನಾಥ ಸ್ವಾಮೀಜಿಗಳು ಈ ಧಾರ್ಮಿಕ ಸಭೆಯ ದಿವ್ಯ ಸಾನ್ನಿಧ್ಯ ವಹಿಸಲಿದ್ದಾರೆಂದರು.
ವಿಶೇಷವಾಗಿ ಕೆ.ಎಸ್. ಈಶ್ವರಪ್ಪನವರು ರಾಷ್ಟ್ರೀಯ ಸ್ವಯಂ ಸೇವಕ ಸಂಘದಿಂದ ಬಂದವರು. ಬಾಲ್ಯದಿಂದಲೂ ಸಂಘದ ಒಡನಾಟದಲ್ಲಿ ಬೆಳೆದು ಬಂದು ಸಂಘದ ಬೆಳವಣಿಗೆಯಲ್ಲೂ ಅಪಾರವಾಗಿ ದುಡಿದಿದ್ದಾರೆ. ಈಗಲೂ ಸಂಘದ ಜತೆಗೆ ನಿಕಟ ಸಂಪರ್ಕ ಹೊಂದಿದ್ದಾರೆ. ಈ ಹಿನ್ನೆಲೆಯಲ್ಲಿಯೇ ಅವರು ತಮ್ಮ ಹುಟ್ಟು ಹಬ್ಬದ ಅಂಗವಾಗಿ ಸಂಘಕ್ಕೆ ಮಂಗಳ ನಿಧಿ ಸಮರ್ಪಣೆ ಮಾಡಲು ನಿರ್ಧರಿಸಿದ್ದಾರೆ. ಈ ಕಾರ್ಯಕ್ರಮ ಅಂದು ಮಧ್ಯಾಹ್ನ 12:30ಕ್ಕೆ ನಡೆಯಲಿದ್ದು, ರಾಷ್ಟ್ರೀಯ ಸ್ವಯಂಸೇವಕ ಸಂಘದ ಜ್ಯೇಷ್ಠ ಪ್ರಚಾರಕರಾದ ಸು. ರಾಮಣ್ಣ ಅವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು, ಮಾತನಾಡಲಿದ್ದಾರೆಂದು ತಿಳಿಸಿದರು.

ಅದೇ ದಿನ ಸಂಜೆ 6 ಗಂಟೆಗೆ ನಡೆಯುವ ಸ್ವಾಭಿಮಾನಿ ಕಾರ್ಯಕ್ರಮದ ಕುರಿತು ಶ್ರೀಗಂಧ ಸಂಸ್ಥೆಯ ಪದಾಧಿಕಾರಿ ವಿನಯ್ ಮಾಹಿತಿ ನೀಡಿದರು. ಈಶ್ವರಪ್ಪನವರು ರಾಷ್ಟ್ರ ಭಕ್ತಿಯಲ್ಲಿ ಮುಂಚೂಣಿಯಲ್ಲಿರುವ ನಾಯಕ. ದೇಶ, ಭಾಷೆ ಅಂದ್ರೆ ಅವರು ಸದಾ ಮುಂದಿದ್ದು, ಶ್ರಮಿಸುತ್ತಾರೆ. ಅದೇ ಕಾರಣಕ್ಕೆ ಅಂದು ಸಂಜೆ 6 ಗಂಟೆಗೆ ಸ್ವಾಭಿಮಾನಿ ಭಾರತ ಎಂಬ ವಿಷಯವಾಗಿ ವಿಶೇಷ ದಿಕ್ಸೂಚಿ ಭಾಷಣ ಕಾರ್ಯಕ್ರಮವಿದ್ದು, ಖ್ಯಾತ ವಾಗ್ಮಿ ಹಾಗೂ ಚಿಂತಕ ಚಕ್ರವರ್ತಿ ಸೂಲಿಬೆಲೆ ಅವರು ಮಾತನಾಡಲಿದ್ದಾರೆ. ಮುಖ್ಯ ಅತಿಥಿಗಳಾಗಿ ಲೋಕಮಾನ್ಯ ಬಾಲಗಂಗಾಧರ ತಿಲಕ್ ಅವರ ಮರಿ ಮಗ ಹಾಗೂ ಕೇಸರಿ ಪತ್ರಿಕೆ ಸಂಪಾದಕ ಶೈಲೇಶ್ ತಿಲಕ್ ಆಗಮಿಸುವರು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೆ.ಎಸ್. ಈಶ್ವರಪ್ಪ ವಹಿಸಲಿದ್ದಾರೆ. ಈ ಕಾರ್ಯಕ್ರಮಕ್ಕೂ ಪ್ರಹ್ಲಾದ ದೀಕ್ಷಿತ್, ಗುರುಗುಹ ನಾಗರಾಜ್ ಹಾಗೂ ಅರುಣ ಇವರ ತಂಡದವರಿಂದ ದೇಶಭಕ್ತಿ ಗೀತೆ ಗಾಯನ ಕಾರ್ಯಕ್ರಮ ಇರುತ್ತದೆ ಎಂದರು.
ಪ್ರತಿಭಾ ಪುರಸ್ಕಾರದ ಕುರಿತು ಶ್ರೀಗಂಧ ಸಂಸ್ಥೆಯ ರಾಜು ಹಾಗೂ ಶ್ರೀಕಾಂತ್ ಅವರು ಮಾಹಿತಿ ನೀಡಿದರು. ಜೂನ್ 11ರ ಬುಧವಾರ ಸಂಜೆ 6 ಗಂಟೆಗೆ 2024-25ನೇ ಸಾಲಿನಲ್ಲಿ ನಡೆದ ಎಸ್.ಎಸ್.ಎಲ್.ಸಿ. ಮತ್ತು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ ಸುಮಾರು 1500 ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ತಲಾ ರೂ. 1000 ದಂತೆ ವಿದ್ಯಾ ಪೆÇ್ರೀತ್ಸಾಹ ನಿಧಿ ನೀಡಿ ಸನ್ಮಾನಿಸಲಾಗುವುದು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೆ.ಎಸ್. ಈಶ್ವರಪ್ಪನವರು ವಹಿಸಲಿದ್ದು, ದಿವ್ಯ ಸಾನ್ನಿಧ್ಯವನ್ನು ವಹಿಸಿ ಆಶೀರ್ವಚನ ನೀಡಲು ಮಹಾರಾಷ್ಟ್ರ ಕೊಲ್ಲಾಪುರದ ಸಿದ್ದಗಿರಿ ಮಠದ ಶ್ರೀ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮಿಗಳು ಹಾಗೂ ಕವಲಗುಡ್ಡ ಗುರುಪೀಠದ ಶ್ರೀ ಅಮರೇಶ್ವರ ಮಹಾಸ್ವಾಮಿಗಳು ಆಗಮಿಸಲಿದ್ದಾರೆ. ಮೂಡಬಿದರೆಯ ಆಳ್ವಾಸ್ ಸಮೂಹ ಶಿಕ್ಷಣ ಸಂಸ್ಥೆಯ ಮುಖ್ಯಸ್ಥರಾದ ಡಾ. ಮೋಹನ ಆಳ್ವ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು ಎಂದರು.

ಈ ಎಲ್ಲಾ ಕಾರ್ಯಕ್ರಮಗಳೂ ಶುಭಮಂಗಳ ಕಲ್ಯಾಣ ಮಂಟಪದ ಆವರಣದಲ್ಲಿಯೇ ನಡೆಯಲಿದ್ದು, ಸಧಭಿರುಚಿಯ ನಾಗರೀಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕೆಂದು ಶ್ರೀಗಂಧ ಸಂಸ್ಥೆಯ ಪದಾಧಿಕಾರಿಗಳೆಲ್ಲರೂ ಮನವಿ ಮಾಡಿದರು.

ಗೋಷ್ಠಿಯಲ್ಲಿ ಕೆ.ಈ. ಕಾಂತೇಶ್, ಸುಬ್ರಹ್ಮಣ್ಯ ಭಟ್, ರವೀಂದ್ರ ಭಟ್, ಉಮೇಶ್ ಆರಾಧ್ಯ, ಕೆ.ಜಿ. ಕೃಷ್ಣಾನಂದ, ಟಿ.ಆರ್. ಆಶ್ವತ್ಥ್ ನಾರಾಯಣ ಶೆಟ್ಟಿ, ಸುವರ್ಣ ಶಂಕರ್, ಬಾಲು ಮತ್ತಿತರರು ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

Tags: K S EshwarappaKannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsNews_in_KannadaNews_KannadaShimogaShivamoggaNewsಕೆ.ಎಸ್. ಈಶ್ವರಪ್ಪಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share196Tweet123Send
Previous Post

Doctor’s Timely Diagnosis Saves Patient’s Life Despite Scan Showing No Cancer

Next Post

ಶಿವಮೊಗ್ಗ | ಅಂತರರಾಜ್ಯ ಕಳ್ಳನ ಕಾಲಿಗೆ ಗುಂಡೇಟು

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಗುಂಡಿನ ದಾಳಿ | ಮಲಗಿದ್ದಲ್ಲೇ 7 ಕಾರ್ಮಿಕರ ಭೀಕರ ಹತ್ಯೆ | ಘಟನೆ ನಡೆದಿದ್ದೆಲ್ಲಿ?

ಶಿವಮೊಗ್ಗ | ಅಂತರರಾಜ್ಯ ಕಳ್ಳನ ಕಾಲಿಗೆ ಗುಂಡೇಟು

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
ಸಿನೆಮಾ ಕಥೆಗಾರರಿಗೆ ರಾಷ್ಟ್ರಮಟ್ಟದ ಅವಕಾಶ | ಜೀ ಕಿರುಚಿತ್ರ ಸ್ಪರ್ಧೆ | ಪ್ರತಿಭೆ ಪ್ರದರ್ಶಿಸಲು ಇಲ್ಲಿದೆ ಸುವರ್ಣಾವಕಾಶ

ಸಿನೆಮಾ ಕಥೆಗಾರರಿಗೆ ರಾಷ್ಟ್ರಮಟ್ಟದ ಅವಕಾಶ | ಜೀ ಕಿರುಚಿತ್ರ ಸ್ಪರ್ಧೆ | ಪ್ರತಿಭೆ ಪ್ರದರ್ಶಿಸಲು ಇಲ್ಲಿದೆ ಸುವರ್ಣಾವಕಾಶ

February 23, 2026
ಮಾರಿಕಾಂಬೆ ಜಾತ್ರೆ | ಯಶವಂತಪುರ–ತಾಳಗುಪ್ಪ ನಡುವೆ ವಿಶೇಷ ರೈಲು

ಮಾರಿಕಾಂಬೆ ಜಾತ್ರೆ | ಯಶವಂತಪುರ–ತಾಳಗುಪ್ಪ ನಡುವೆ ವಿಶೇಷ ರೈಲು

February 23, 2026
Mysore – Shivamogga Express Big Update on this Date | Must Read

ಯಶವಂತಪುರ–ಶಿವಮೊಗ್ಗ ಎಕ್ಸ್ ಪ್ರೆಸ್ ರೈಲು ತಾಳಗುಪ್ಪದವರೆಗೆ ವಿಸ್ತರಣೆ

February 23, 2026
ಫೆ.25ರಂದು ಶ್ರೀ ರಾಮಚಂದ್ರಾಪುರ ಮಠದಲ್ಲಿ ಕೃಷ್ಣಾರ್ಪಣಮ್, ಗೋದೀಪ ಮಹೋತ್ಸವ

ಫೆ.25ರಂದು ಶ್ರೀ ರಾಮಚಂದ್ರಾಪುರ ಮಠದಲ್ಲಿ ಕೃಷ್ಣಾರ್ಪಣಮ್, ಗೋದೀಪ ಮಹೋತ್ಸವ

February 23, 2026
ಯುವಜನತೆಯ ಕನಸು ನನಸಾಗಿಸುವಲ್ಲಿ ಉದ್ಯೋಗಮೇಳ ಯಶಸ್ವಿ: ವಿವೇಕ್ ಆಳ್ವ ವಿಶ್ವಾಸ

ಯುವಜನತೆಯ ಕನಸು ನನಸಾಗಿಸುವಲ್ಲಿ ಉದ್ಯೋಗಮೇಳ ಯಶಸ್ವಿ: ವಿವೇಕ್ ಆಳ್ವ ವಿಶ್ವಾಸ

February 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL