ಕಲ್ಪ ಮೀಡಿಯಾ ಹೌಸ್ | ಥಾಣೆ |
ಕಿಕ್ಕಿರಿದು ತುಂಬಿದ್ದ ರೈಲಿನಿಂದ ಬಿದ್ದು ಐವರು ಪ್ರಯಾಣಿಕರು ಸಾವನ್ನಪ್ಪಿರುವ #Train accident in Thane ಘಟನೆ ಮಹಾರಾಷ್ಟ್ರದ ಥಾಣೆ ಜಿಲ್ಲೆಯಲ್ಲಿ ನಡೆದಿದೆ.
ಸೋಮವಾರ ಬೆಳಗ್ಗೆ ಸಂಭವಿಸಿದ ಈ ದುರ್ಘಟನೆಯಲ್ಲಿ ಹಲವು ಮಂದಿ ಗಾಯಗೊಂಡಿದ್ದಾರೆ. ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್ ರೈಲು ನಿಲ್ದಾಣದಿಂದ ಕಾಸರ ಕಡೆಗೆ ಹೋಗುತ್ತಿದ್ದ ಜನರಿಂದ ತುಂಬಿ ತುಳುಕುತ್ತಿದ್ದ ಲೋಕಲ್ ರೈಲಿನಿಂದ ಕೆಳಗೆ ಬಿದ್ದು ಕೆಲ ಪ್ರಯಾಣಿಕರು ಸಾವನ್ನಪ್ಪಿರುವುದಾಗಿ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಬೆಳಗ್ಗೆ 9.30ರ ಸುಮಾರಿನಲ್ಲಿ ರೈಲ್ವೆ ಹಳಿ ಮೇಲೆ ಬಿದ್ದ ಪ್ರಯಾಣಿಕರ ಬಗ್ಗೆ ಕಾಸರಕ್ಕೆ ತೆರಳುತ್ತಿದ್ದ ರೈಲಿನ ಸಿಬ್ಬಂದಿ ನಿಯಂತ್ರಣ ಕೊಠಡಿಗೆ ಮಾಹಿತಿ ನೀಡಿದರು. ತದನಂತರ ಗಾಯಗೊಂಡ ಪ್ರಯಾಣಿಕರನ್ನು ಸಮೀಪದ ಆಸ್ಪತ್ರೆಗೆ ರವಾನಿಸಲಾಯಿತು ಎಂದು ರೈಲ್ವೆಯ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಸ್ವಪ್ನಿಲ್ ನಿಲಾ ತಿಳಿಸಿದ್ದಾರೆ.
ಜಿಲ್ಲೆಯ ಮುಂಬ್ರಾ ಠಾಣೆ ಬಳಿ ಈ ಘಟನೆ ನಡೆದಿದ್ದು, ಸುದ್ದಿ ತಿಳಿದ ಕೂಡಲೇ ಥಾಣೆ GRP ಹಿರಿಯ ಪೊಲೀಸ್ ಇನ್ಸ್‌ಪೆಕ್ಟರ್ ಅರ್ಚನಾ ದುಸಾನೆ ಸ್ಥಳಕ್ಕೆ ದೌಡಾಯಿಸಿದರು. ಪ್ರಕರಣಕ್ಕೆ ಸಂಬಂಧಪಟ್ಟಂತೆ ತನಿಖೆ ಮುಂದುವರೆದಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news












Discussion about this post