ಕಲ್ಪ ಮೀಡಿಯಾ ಹೌಸ್ | ದಾವಣಗೆರೆ |
ಅಂತರ್ಜಾತಿ ಸಾಮೂಹಿಕ ವಿವಾಹಗಳು ಹೆಚ್ಚೆಚ್ಚು ಆದರೆ ಜಾತ್ಯತೀತ ಸಮಾಜ ನಿರ್ಮಾಣ ಸಾಧ್ಯ ಎಂದು ಸಿಎಂ ಸಿದ್ದರಾಮಯ್ಯ #CM Siddaramaiah ಅವರು ನುಡಿದರು.
ಹಿರಿಯ ಕಾಂಗ್ರೆಸ್ ಮುಖಂಡ ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ #Shamanuru Shivashankarappa ಅವರ 95 ನೇ ಜನ್ಮದಿನದ ಪ್ರಯುಕ್ತ ಆಯೋಜಿಸಿದ್ದ ಸಾಮೂಹಿಕ ವಿವಾಹ ಮಹೋತ್ಸವದಲ್ಲಿ ಮಾತನಾಡಿದರು.
ಲಿಂಗ ತಾರತಮ್ಯ, ಜಾತಿ ತಾತತಮ್ಯ ನಿವಾರಣೆ ಆಗಬೇಕಾದರೆ ಇಂಥಾ ಸಾಮೂಹಿಕ ವಿವಾಹಗಳು , ಅಂತರಜಾತಿ ವಿವಾಹಗಳು ಹೆಚ್ಚೆಚ್ಚು ನಡೆಯಬೇಕು. ನಮ್ಮ ಸರ್ಕಾರ ಮಹಿಳೆಯರೂ ಆರ್ಥಿಕವಾಗಿ, ಸಾಮಾಜಿಕವಾಗಿ ಸಬಲರನ್ನಾಗಿಸಲು ಕಾರ್ಯಕ್ರಮಗಳನ್ನು, ಗ್ಯಾರಂಟಿಗಳನ್ನು ರೂಪಿಸಿ ಜಾರಿ ಮಾಡಿದೆ ಎಂದರು.
ಜಾತಿ, ವರ್ಗ ಇಲ್ಲದ ಸಮಾಜ ನಿರ್ಮಾಣ ಬಸವಣ್ಣ ಮತ್ತು ಬಸವಾದಿ ಶರಣರ ಆಶಯವಾಗಿತ್ತು. ನಮ್ಮ ಸರ್ಕಾರ ಈ ದಿಕ್ಕಿನಲ್ಲಿ ಕಾರ್ಯಕ್ರಮಗಳನ್ನು ರೂಪಿಸುತ್ತಿದೆ ಎಂದರು.
ಶಾಮನೂರು ಶಿವಶಂಕರಪ್ಪ ಅವರು ಆರೋಗ್ಯವಾಗಿದ್ದು ಶತಾಯುಷಿ ಆಗಲಿದ್ದಾರೆ. ಇವರ ಉತ್ಸಾಹ, ಕ್ರಿಯಾಶೀಲತೆ ನೋಡಿದರೆ ಮತ್ತೊಂದು ಚುನಾವಣೆಗೆ ನಿಲ್ಲಬಹುದು. ಇವರು ಉತ್ಸಾಹ ತೋರಿಸಿದರೆ ಪಕ್ಷ ಮತ್ತೆ ಟಿಕೆಟ್ ಕೊಡಲು ಸಿದ್ದವಿದೆ ಎಂದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post