ಕಲ್ಪ ಮೀಡಿಯಾ ಹೌಸ್ | ಮಡಿಕೇರಿ |
ಜಿಲ್ಲೆಯಲ್ಲಿ ಸೋಮವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 48.80 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 0.28 ಮಿ.ಮೀ. ಮಳೆಯಾಗಿತ್ತು. ಜನವರಿಯಿಂದ ಇಲ್ಲಿಯವರೆಗಿನ ಮಳೆ 913.84 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 488.06 ಮಿ.ಮೀ ಮಳೆಯಾಗಿತ್ತು.
ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 80.55 ಮಿ.ಮೀ. ಕಳೆದ ವರ್ಷ ಇದೇ ದಿನ 0.85 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 1383.07 ಮಿ.ಮೀ, ಕಳೆದ ವರ್ಷ ಇದೇ ಅವಧಿಯಲ್ಲಿ 679.07 ಮಿ.ಮೀ. ಮಳೆಯಾಗಿತ್ತು.

ಪೊನ್ನಂಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 48.49 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 0.00 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 831.03 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 464.94 ಮಿ.ಮೀ. ಮಳೆಯಾಗಿತ್ತು.
ಸೋಮವಾರಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 53.60 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 0.25 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 812.17 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 410.53 ಮಿ.ಮೀ. ಮಳೆಯಾಗಿತ್ತು.
ಕುಶಾಲನಗರ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 13.40 ಮಿ.ಮೀ. ಮಳೆಯಾಗಿದೆ. ಕಳೆದ ವರ್ಷ ಇದೇ ದಿನ 0.30 ಮಿ.ಮೀ. ಜನವರಿಯಿಂದ ಇಲ್ಲಿಯವರೆಗಿನ ಮಳೆ 589.84 ಮಿ.ಮೀ. ಕಳೆದ ವರ್ಷ ಇದೇ ಅವಧಿಯಲ್ಲಿ 449.90 ಮಿ.ಮೀ. ಮಳೆಯಾಗಿತ್ತು.

ಹಾರಂಗಿ ಜಲಾಶಯದ ನೀರಿನ ಮಟ್ಟ (16-06-2025) ವರದಿ
ಹಾರಂಗಿ ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳು, ಇಂದಿನ ನೀರಿನ ಮಟ್ಟ 2851.78 ಅಡಿಗಳು. ಕಳೆದ ವರ್ಷ ಇದೇ ದಿನ 2827.81 ಅಡಿಗಳು. ಹಾರಂಗಿಯಲ್ಲಿ ಬಿದ್ದ ಮಳೆ 11.20 ಮಿ.ಮೀ., ಕಳೆದ ವರ್ಷ ಇದೇ ದಿನ 3.40 ಮಿ.ಮೀ., ಇಂದಿನ ನೀರಿನ ಒಳಹರಿವು 4736 ಕ್ಯುಸೆಕ್, ಕಳೆದ ವರ್ಷ ಇದೇ ದಿನ 331 ಕ್ಯುಸೆಕ್., ಇಂದಿನ ನೀರಿನ ಹೊರ ಹರಿವು ನದಿಗೆ 4583 ಕ್ಯುಸೆಕ್. ಕಳೆದ ವರ್ಷ ಇದೇ ದಿನ ನೀರಿನ ಹೊರ ಹರಿವು ನದಿಗೆ 200 ಕ್ಯುಸೆಕ್.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news












Discussion about this post