ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ತುಂಗಾ ಜಲಾಶಯದ ಒಳ ಮತ್ತು ಹೊರ ಹರಿವು ಹೆಚ್ಚಳವಾಗಿದ್ದು, ತುಂಗಾನದಿ #Tunga River ಮೈದುಂಬಿ ಹರಿಯುತ್ತಿದೆ. ಶಿವಮೊಗ್ಗ ನಗರದ ಕೋರ್ಪಲಯ್ಯನ ಛತ್ರದ ಬಳಿ ಇರುವ ಮಂಟಪ ಮುಕ್ಕಾಲು ಭಾಗ ಮುಳುಗಿದೆ.
ಜಲಾಶಯದ ಭಾಗದಲ್ಲಿ ಭಾರೀ ಮಳೆಯಾಗುತ್ತಿರುವುದರಿಂದ ತುಂಗಾ ಜಲಾಶಯ ಈಗಾಗಲೇ ಭರ್ತಿಯಾಗಿದ್ದು, ಜಲಾಶಯಕ್ಕೆ 31 ಸಾವಿರ ಕ್ಯೂಸೆಕ್ ಒಳಹರಿವು ಇದ್ದು, 27 ಸಾವಿರ ಕ್ಯೂಸೆಕ್ ನೀರನ್ನು ಹೊರಕ್ಕೆ ಬಿಡಲಾಗುತ್ತಿದೆ.

ಜಿಲ್ಲೆಯಲ್ಲಿ ನಿನ್ನೆಯಿಂದ ಎಡೆಬಿಡದೆ ಮಳೆ ಸುರಿಯುತ್ತಿದ್ದು, ಸಾಗರ, ಹೊಸನಗರ, ತೀರ್ಥಹಳ್ಳಿ, ಆಗುಂಬೆ ಭಾಗದಲ್ಲಿ ಭಾರೀ ಪ್ರಮಾಣದಲ್ಲಿ ಮಳೆಯಾಗುತ್ತಿದೆ. ಈ ಹಿನ್ನಲೆಯಲ್ಲಿ ಜೋಗ ಜಲಪಾತಕ್ಕೆ ಪ್ರವಾಸಿಗರ ತಂಡ ಹರಿದು ಬರುತ್ತಿದೆ.
ವಾರಾಂತ್ಯದಲ್ಲಿ ಎರಡು ದಿನ ರಜೆ ಇದ್ದುದರಿಂದ ದೊಡ್ಡ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುತ್ತಿದ್ದು, ಜೋಗ ಜಲಪಾತದ ವೈಭವ ಮತ್ತೆ ಮರುಕಳಿಸಿದೆ. ರಾಜಾ, ರಾಣಿ, ರೋರರ್ ಮತ್ತು ರಾಕೇಟ್ ಜಲಪಾತಗಳು ಮೈದುಂಬಿಕೊಂಡಿವೆ.
ಪ್ರವಾಸಿಗರು ಸೆಲ್ಫಿಫೋಟೋ ಕ್ಲಿಕ್ಕಿಸಿಕೊಳ್ಳಲು ದೊಡ್ಡ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುತ್ತಿದ್ದು, ಪ್ರವಾಸಿಗರಲ್ಲಿ ಸಂತಸ ತಂದಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news













Discussion about this post