ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ಇಸ್ರೇಲ್, ಇರಾನ್ ನಡುವಿನ ಸಂಘರ್ಷ ದಿನೇ ದನೇ ಹೆಚ್ಚುತ್ತಿದ್ದು, , ಯುದ್ಧಪೀಡಿತ ರಾಷ್ಟ್ರಗಳಲ್ಲಿ ಸಿಲುಕಿರುವ ಭಾರತೀಯರನ್ನು ಸ್ವದೇಶಕ್ಕೆ ಕರೆತರಲು ಕೇಂದ್ರ ಸರ್ಕಾರ ಪ್ರಯತ್ನಿಸುತ್ತಿದ್ದು, ಇದರ ಮೊದಲ ಭಾಗವಾಗಿ 110 ಭಾರತೀಯ ವಿದ್ಯಾರ್ಥಿಗಳನ್ನು ಹೊತ್ತ ಮೊದಲ ವಿಮಾನ ಬುಧವಾರ ತಡರಾತ್ರಿ ನವದೆಹಲಿಗೆ ಬಂದಿಳಿದಿದೆ.
ಈ ಕಾರ್ಯಾಚರಣೆಗೆ ಕೇಂದ್ರ ಸರ್ಕಾರ ‘ಆಪರೇಷನ್ ಸಿಂಧು’ ಎಂದು ಹೆಸರಿಟ್ಟಿದ್ದು, ಇಸ್ರೇಲ್-ಇರಾನ್ ನಡುವಿನ ಸಂಘರ್ಷ ಕ್ಷಣಕ್ಷಣಕ್ಕೂ ಹೆಚ್ಚುತ್ತಿರುವ ನಡುವೆ ಇರಾನ್ ರಾಜಧಾನಿ ಟೆಹ್ರಾನ್‌ನಲ್ಲಿರುವ ಭಾರತೀಯ ವಿದ್ಯಾರ್ಥಿಗಳನ್ನು ಮೊದಲು ನಗರದಿಂದ ಹೊರಗೆ ಸ್ಥಳಾಂತರಿಸಲಾಗಿತ್ತು.
ಈ ಪೈಕಿ 110 ಮಂದಿ ಇರಾನ್ ಗಡಿ ದಾಟಿ ನೆರೆಯ ಅರ್ಮೇನಿಯಾ ದೇಶಕ್ಕೆ ತೆರಳಿದ್ದರು. ಈ ವಿದ್ಯಾರ್ಥಿಗಳನ್ನು ಇರಾನ್ ನಲ್ಲಿರುವ ಭಾರತೀಯ ರಾಯಭಾರ ಕಚೇರಿಯ ನೆರವಿನೊಂದಿಗೆ ಸ್ವದೇಶಕ್ಕೆ ಕರೆಲಾಗಿದೆ.
ಇರಾನ್ ನಲ್ಲಿರುವ ಭಾರತೀಯರು ಟೆಹ್ರಾನ್ ನಲ್ಲಿರುವ ಭಾರತೀಯ ರಾಯಭಾರ ಕಚೇರಿಯ ತುರ್ತು ಸಹಾಯವಾಣಿ ಸಂಪರ್ಕಿಸುವಂತೆ ಕೋರಿದೆ. ದೂರವಾಣಿ ಸಂಖ್ಯೆ: +989010144557, +989128109115; +989128109109.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post