ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಯೋಗ ಕೇವಲ ವ್ಯಾಯಾಮವಲ್ಲ; ಇದು ಮನಸ್ಸು, ದೇಹ ಹಾಗೂ ಆತ್ಮದ ಸಮನ್ವಯವಾಗಿರುವ ದಾರಿಯಾಗಿದೆ ಎಂದು ಮೆಡಿಕವರ್ ಆಸ್ಪತ್ರೆ ಕೃಷ್ಣಮೂರ್ತಿ ಹೇಳಿದರು.
ಬೆಂಗಳೂರಿನ ವೈಟ್ಫೀಲ್ಡ್ನ ಮೆಡಿಕವರ್ ಆಸ್ಪತ್ರೆಯಲ್ಲಿ #Medicover Hospital ಇಂದು ಅಂತರಾಷ್ಟ್ರೀಯ ಯೋಗ ದಿನವನ್ನು #International Yoga Day ವಿಜೃಂಭಣೆಯಿಂದ ಆಚರಿಸಲಾಯಿತು. ಸಮಾರಂಭದಲ್ಲಿ ಸಕ್ರಿಯವಾಗಿ ಪಾಲ್ಗೊಂಡರು ಹಾಗೂ ಎಲ್ಲಾ ವಿಭಾಗಗಳ ಸಿಬ್ಬಂದಿಯೊಂದಿಗೆ ಯೋಗದಲ್ಲಿ ಭಾಗವಹಿಸಿದರು. ಮೆಡಿಕವರ್ ಆಸ್ಪತ್ರೆ ಸಮಗ್ರ ಆರೋಗ್ಯ ಸೇವೆಗೆ ಬದ್ಧವಾಗಿದೆ, ಈ ಕಾರ್ಯಕ್ರಮ ಅದನ್ನು ಪ್ರತಿಬಿಂಬಿಸುತ್ತದೆ ಎಂದರು.
ಯೋಗಗುರು ಡಾ. ನಾಗರಾಜ್ ಅವರ ಮಾರ್ಗದರ್ಶನದಲ್ಲಿ ವೈದ್ಯರು, ನರ್ಸ್ಗಳು ಮತ್ತು ಸಿಬ್ಬಂದಿ ವರ್ಗ ಯೋಗ ಅಭ್ಯಾಸದಲ್ಲಿ ಭಾಗವಹಿಸಿದರು. ದೈನಂದಿನ ಜೀವನದಲ್ಲಿ ಯೋಗದ ಮಹತ್ವವನ್ನು ಪ್ರಚಾರ ಮಾಡುವ ಉದ್ದೇಶದಿಂದ ಈ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಆಸ್ಪತ್ರೆಯ ಎಲ್ಲಾ ಸಿಬ್ಬಂದಿಯು ಯೋಗದಲ್ಲಿ ಭಾಗವಹಿಸಿ, ಶಾಂತಿಯುತ ವಾತಾವರಣವನ್ನು ಸೃಷ್ಟಿಸಿದರು ಮತ್ತು ಸಮೂಹ ಮನೋಭಾವವನ್ನು ಮೆರೆದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post