ಕಲ್ಪ ಮೀಡಿಯಾ ಹೌಸ್ | ಕಾರ್ಕಳ |
ನಾಳೆಗಳಿಗೆ ಕಾಯದೆ ಜೀವನದಲ್ಲಿ ಇಂದು ಬರುವ ಅವಕಾಶಗಳನ್ನು ಉಪಯೋಗಿಸಿಕೊಳ್ಳಬೇಕು. ಯಶಸ್ಸಿನ ಬೆನ್ನು ಹತ್ತಬೇಕಾದರೆ ಆತ್ಮವಿಶ್ವಾಸ ಬಹಳ ಮುಖ್ಯ ಎಂದು ಉದ್ಯೋಗ ಮತ್ತು ಕೌಶಲ್ಯ ತರಬೇತುದಾರ ಚಂದನ್ ರಾವ್ ಹೇಳಿದರು.
ಇಲ್ಲಿನ ಕ್ರೈಸ್ಟ್‌ಕಿಂಗ್ ಪದವಿಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾಗಿದ್ದ ಸಿಎ ಮತ್ತು ಸಿಎಸ್ ಮಾಹಿತಿ ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ ಅವರು ವಿದ್ಯಾರ್ಥಿಗಳಿಗೆ ತರಬೇತಿ ನೀಡಿ ಮಾತನಾಡಿ, ಸಿಎ, ಸಿಎಸ್ ಪರೀಕ್ಷೆಗಳಿಗೆ ಮಾಡಬೇಕಾದ ತಯಾರಿ ಹಾಗೂ ಯೋಜನೆಗಳ ಕುರಿತು ಸಮಗ್ರ ಮಾಹಿತಿ ನೀಡಿದರು.
ವಾಣಿಜ್ಯ ವಿಭಾಗದ ಮಕ್ಕಳಿಗೆ ಅವಕಾಶಗಳು ಹೇರಳವಾಗಿವೆ. ಆದರೆ ಸಾಧಿಸಬೇಕಾದರೆ ಗುರಿಯನ್ನು ಇಟ್ಟುಕೊಂಡು ಕಾರ್ಯಪ್ರವೃತ್ತರಾಗಬೇಕು ಎಂದರು.
ಸಂಸ್ಥೆಯ ಉಪ ಪ್ರಾಚಾರ್ಯ ಹಾಗೂ ವಾಣಿಜ್ಯ ವಿಭಾಗ ಮುಖ್ಯಸ್ಥ ಡಾ.ಪ್ರಕಾಶ್ ಭಟ್, ಸಂಸ್ಥೆಯ ಸಿಎ, ಸಿಎಸ್ ಸಂಯೋಜಕರಾದ ಅರ್ಥಶಾಸ್ತ್ರ ಉಪನ್ಯಾಸಕಿ ಅಭಿನಯ ವೇದಿಕೆಯಲ್ಲಿ ಉಪಸ್ಥಿತರಿದ್ದರು. ದ್ವಿತೀಯ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಾದ ಜಿತೇಶ್ ಸ್ವಾಗತಿಸಿ ದಿಶಾ ಶೆಟ್ಟಿ ಅತಿಥಿಗಳನ್ನು ಪರಿಚಯಿಸಿದರು. ಮದಿಹಾ ಫಾತಿಮ ಕಾರ್ಯಕ್ರಮ ನಿರೂಪಿಸಿ ಪ್ರಜ್ವಲ್ ಶೆಟ್ಟಿ ವಂದಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 





















