ಕಲ್ಪ ಮೀಡಿಯಾ ಹೌಸ್ | ಕಾರ್ಕಳ |
ದೈನಂದಿನ ಜೀವನದಲ್ಲಿ ಎಲ್ಲರೂ ಯೋಗ ಮಾಡುವ ಅಭ್ಯಾಸವನ್ನು ರೂಢಿಸಿಕೊಳ್ಳಬೇಕು, ಆರೋಗ್ಯ ಎನ್ನುವುದು ಬದುಕಿರುವವರೆಗೆ ಬಹಳ ಮುಖ್ಯ, ಆರೋಗ್ಯಭರಿತ ಸುಖ ಜೀವನ ನಡೆಸಲು ಯೋಗ ಅಗತ್ಯ ಎಂದು ಕಾರ್ಕಳ ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿಯ ಸದಸ್ಯರಾದ ವಿನಾಯಕ ಕುಡ್ವ ಹೇಳಿದರು.
ಇಲ್ಲಿನ ಕ್ರೈಸ್ಟ್‌ಕಿಂಗ್ ಶಿಕ್ಷಣ ಸಂಸ್ಥೆಗಳಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು #International Yoga Day ಅರ್ಥಪೂರ್ಣವಾಗಿ ಆಚರಿಸಲಾಯಿತು. ಅವರು ಮುಖ್ಯ ಅತಿಥಿಗಳಾಗಿ ಆಗಮಿಸಿ ಯೋಗದ ಮಹತ್ವವನ್ನು ಹಾಗೂ ಅದನ್ನು ದೈನಂದಿನ ಜೀವನದಲ್ಲಿ ಹೇಗೆ ಅಳವಡಿಸಿಕೊಳ್ಳಬೇಕು ಎಂಬುದನ್ನು ತಿಳಿಸಿದರು.
ಸಂಸ್ಥೆಯ ಪ್ರಾಥಮಿಕ ವಿಭಾಗದ ಮುಖ್ಯೋಪಾಧ್ಯಾಯರಾದ ರುಡಾಲ್ಫ್ ಕಿಶೋರ್ ಲೋಬೊ ಅವರು ಮಾತನಾಡಿ, ಯೋಗ ಎಂದರೆ ಕೇವಲ ವ್ಯಾಯಾಮವಲ್ಲ, ನಾವು ಶ್ರದ್ಧಾ ಭಕ್ತಿಯಿಂದ ನಮ್ಮ ದೇಹಕ್ಕೆ ಕೆಲಸವನ್ನು ಕೊಡುತ್ತಾ ಪರಮಾತ್ಮನಲ್ಲಿ ಲೀನವಾಗಬೇಕು. ಅದುವೆ ನಿಜವಾದ ಯೋಗ ಎಂದು ಹೇಳಿದರು.
ಸಂಸ್ಥೆಯ ಹಿರಿಯ ವಿದ್ಯಾರ್ಥಿ ರಾಜ್ಯಮಟ್ಟದ ಯೋಗಪಟು ನಿಖಿಲ್ ಪೂಜಾರಿ ಯೋಗ ಪ್ರಾತ್ಯಕ್ಷಿಕೆಗಳನ್ನು ನೀಡಿದರು. ಸಂಸ್ಥೆಯ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳು ಯೋಗದ ವಿವಿಧ ಆಸನಗಳನ್ನು ಪ್ರದರ್ಶಿಸಿದರು.
ಯೋಗ ಶಿಕ್ಷಕಿ ನೃತ್ಯ, ಪ್ರೌಢ ಶಾಲಾ ಪ್ರಭಾರ ಮುಖ್ಯ ಶಿಕ್ಷಕಿ ಜೋಸ್ನಾ ಸ್ನೇಹಲತಾ ಉಪಸ್ಥಿತರಿದ್ದರು. ದೈಹಿಕ ಶಿಕ್ಷಣ ಶಿಕ್ಷಕರುಗಳಾದ ಕೃಷ್ಣಪ್ರಸಾದ್, ಪ್ರಕಾಶ್ ನಾಯ್ಕ್ ಹಾಗೂ ಕು.ಲಾವಣ್ಯ ಉಪಸ್ಥಿತರಿದ್ದರು. ಸಂಸ್ಥೆಯ ಪ್ರೌಢಶಾಲಾ ಶಿಕ್ಷಕಿಯಾದ ಅಶ್ವಿನಿ ಪೈ ಅವರು ಕಾರ್ಯಕ್ರಮ ನಿರೂಪಿಸಿ ನಿರ್ವಹಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post