ಕಲ್ಪ ಮೀಡಿಯಾ ಹೌಸ್ | ಹಾಸನ |
ಜಿಲ್ಲೆಯಲ್ಲಿ ಹೃದಯಾಘಾತಕ್ಕೆ ಇಂದು ಒಂದೇ ದಿನ ಮೂವರು ಮೃತಪಟ್ಟಿದ್ದು, ಇದರಿಂದಾಗಿ ಜನರಲ್ಲಿ ಆತಂಕ ಮೂಡಿದೆ.
ಹೊಳೆನರಸೀಪುರದ ಮಹಿಳೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಇಂಗ್ಲಿಷ್ ಪ್ರೊಫೆಸರ್ ಮುತ್ತಯ್ಯ (58) ಹೃದಯಾಘಾತಕ್ಕೆ ಮೃತಪಟ್ಟಿದ್ದಾರೆ.

ಇದೇ ವೇಳೆ, ಚನ್ನರಾಯಪಟ್ಟಣದ ನಿವಾಸಿಯಾಗಿದ್ದ ಮುತ್ತಯ್ಯ ಇಂದು ಬೆಳಗ್ಗೆ ಕಾಲೇಜಿಗೆ ಬಂದಿದ್ದರು. ಈ ವೇಳೆ ಬೈಪಾಸ್ ರಸ್ತೆಯಲ್ಲಿ ಟೀ ಕುಡಿಯುತ್ತಿದ್ದಾಗ ಕುಸಿದು ಬಿದ್ದಿದ್ದಾರೆ. ಕೂಡಲೇ ಅವರನ್ನು ತಾಲ್ಲೂಕು ಆಸ್ಪತ್ರೆಗೆದಾಖಲಿಸಲಾಗಿತ್ತು. ಅಷ್ಟರಲ್ಲಿ ಮುತ್ತಯ್ಯ ಅವರು ಕೊನೆಯುಸಿರೆಳೆದಿದ್ದರು.

ಚನ್ನರಾಯಪಟ್ಟಣ ತಾಲ್ಲೂಕಿನ, ಕೆಂಬಾಳು ಗ್ರಾಮದ ಲೋಹಿತ್ ಅಲಿಯಾಸ್ ಪುಚ್ಚಿ (38) ರಜೆ ಹಿನ್ನೆಲೆಯಲ್ಲಿ ಊರಿಗೆ ಬಂದಿದ್ದರು. 18 ವರ್ಷಗಳಿಂದ ಸೈನಿಕರಾಗಿ ದೇಶ ಸೇವೆ ಸಲ್ಲಿಸುತ್ತಿದ್ದ ಲೋಹಿತ್ ಜುಲೈ 3 ರಂದು ರಜೆ ಮುಗಿಸಿ ಕರ್ತವ್ಯಕ್ಕೆ ಮರಳಬೇಕಿತ್ತು. ಆದರೆ ಇಂದು ಹೃದಯಾಘಾತಕ್ಕೆ ಮೃತಪಟ್ಟಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post