ಕಲ್ಪ ಮೀಡಿಯಾ ಹೌಸ್ | ಕೋಲಾರ |
ಭೀಕರ ರಸ್ತೆ ಅಪಘಾತದಲ್ಲಿ #Accident ಗರ್ಭಿಣಿ ಮಹಿಳೆಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಅವರ ಪತಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಕೋಲಾರ ಜಿಲ್ಲೆಯ ಮಾಲೂರು ತಾಲ್ಲೂಕಿನ ಭಾವನಹಳ್ಳಿಯಲ್ಲಿ ಸಂಭವಿಸಿದ
ಅರ್ಚನಾ (25) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಅವರ ಪತಿಯನ್ನು ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆ ನಡೆದಾಗ ಕಾರು ವೇಗವಾಗಿ ಚಲಿಸುತ್ತಿತ್ತು ಎನ್ನಲಾಗಿದ್ದು, ಚಾಲಕನ ನಿರ್ಲಕ್ಷ್ಯದಿಂದ ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿಯಲ್ಲಿದ್ದ ಮಾವಿನ ಮರಕ್ಕೆ ಅಪ್ಪಳಿಸಿದೆ. ಡಿಕ್ಕಿಯ ರಭಸಕ್ಕೆ ಗರ್ಭಿಣಿ ಅರ್ಚನಾ ಅವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.
ಅಪಘಾತದ ಮಾಹಿತಿ ತಿಳಿದ ತಕ್ಷಣ ಮಾಲೂರು ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರೆಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post