ಕಲ್ಪ ಮೀಡಿಯಾ ಹೌಸ್ | ರಾಷ್ಟ್ರೀಯ ಸುದ್ದಿ |
ಮಕ್ಕಳನ್ನು ಕರೆದೊಯ್ಯುತ್ತಿದ್ದ ಶಾಲಾ ಬಸ್ಸಿಗೆ ಪ್ಯಾಸೆಂಜರ್ ರೈಲೊಂದು ಢಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಶಾಲಾ ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತಪಟ್ಟ ಘಟನೆ ತಮಿಳುನಾಡಿನ ಕಡಲೂರು ಬಳಿಯ ಸೆಮ್ಮಂಕುಪ್ಪಂನಲ್ಲಿ ನಡೆದಿದೆ.
ಮಂಗಳವಾರ ಬೆಳಿಗ್ಗೆ 7:45ರ ಸುಮಾರಿಗೆ ಮಕ್ಕಳನ್ನು ಕರೆದೊಯ್ಯುತ್ತಿದ್ದ ಶಾಲಾ ಬಸ್ಸು ಕಡಲೂರು ಜಿಲ್ಲೆಯ ರೈಲ್ವೆ ಲೆವೆಲ್ ಕ್ರಾಸಿಂಗ್’ನಲ್ಲಿ ಹಳಿ ದಾಟುತ್ತಿದ್ದ ಸಂದರ್ಭ ಪ್ಯಾಸೆಂಜರ್ ರೈಲು ಡಿಕ್ಕಿ ಹೊಡೆದಿದೆ.
ಘಟನೆ ಪರಿಣಾಮ ಬಸ್ಸು ಕೆಲ ದೂರ ಎಸೆಯಲ್ಪಟ್ಟಿದ್ದು ಘಟನೆಯಲ್ಲಿ ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತಪಟ್ಟರೆ, ನಾಲ್ಕು ಮಂದಿ ಗಂಭೀರ ಗಾಯಗೊಂಡಿದ್ದು ಅವರನ್ನು ಕಡಲೂರು ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಘಟನೆಗೆ ಸಂಬಂಧಿಸಿ ರೈಲ್ವೆ ಇಲಾಖೆ ಮತ್ತು ಸ್ಥಳೀಯ ಪೊಲೀಸರು ಜಂಟಿಯಾಗಿ ತನಿಖೆ ಆರಂಭಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 





















