ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಜಿಲ್ಲೆಗೆ ವಿವಿಧ ರೈಲ್ವೆ ಕಾಮಗಾರಿಗಳನ್ನು ಮಂಜೂರು ಮಾಡಿಸಿ ಮಲೆನಾಡಿನಲ್ಲಿ ರೈಲ್ವೆ ಕ್ರಾಂತಿ ಸೃಷ್ಠಿಸಿರುವ ಸಂಸದ ಬಿ.ವೈ. ರಾಘವೇಂದ್ರ #MP B Y Raghavendra ಅವರು ಈಗ ವಿವಿಧ ಯೋಜನೆಗಳ ಕುರಿತಾಗಿ ಮಾಹಿತಿ ಹಂಚಿಕೊಂಡಿದ್ದಾರೆ.
ಪ್ರಮುಖವಾಗಿ, ಬಹಳ ವರ್ಷಗಳ ಕಾಲದಿಂದ ಬೇಡಿಕೆಯಿರುವ ತಾಳಗುಪ್ಪ – ಹೊನ್ನಾವರ ರೈಲು #Talaguppa-HonnavaraTrain ಮಾರ್ಗದ ಸರ್ವೆ ಮುಗಿದಿದೆ. ಇಲ್ಲಿಶೇ.73ರಷ್ಟು ಅರಣ್ಯ ಬರುವುದರಿಂದ ಸರಕಾರ ಅಂತಿಮ ನಿರ್ಧಾರ ತೆಗೆದುಕೊಳ್ಳಬೇಕಾಗುತ್ತದೆ ಎಂದಿದ್ದಾರೆ.
ಇನ್ನು, ತಾಳಗುಪ್ಪದಿಂದ ಹುಬ್ಬಳ್ಳಿ ಸಂಪರ್ಕಕ್ಕೆ ಸಿದ್ದಾಪುರ, ಶಿರಸಿ, ಮುಂಡಗೋಡು ತಡಸ ನಡುವೆ 150 ಕಿ.ಮೀ. ಉದ್ದದ ರೈಲು ಮಾರ್ಗ ನಿರ್ಮಾಣಕ್ಕೆ ಸರ್ವೆ ಆಗಿದೆ. ಈ ಮಾರ್ಗದಲ್ಲಿ195 ಹೆಕ್ಟೇರ್ ಖುಷ್ಕಿ ಭೂಮಿ, 317 ಹೆಕ್ಟೇರ್ ನೀರಾವರಿ, 190 ಹೆಕ್ಟೇರ್ ಅರಣ್ಯ ಭೂಮಿ ಬರುತ್ತದೆ. ಅರಣ್ಯ ಭೂಮಿಗೆ ಬದಲಿ ಭೂಮಿ ಕೊಡುವ ಕಾರ್ಯ ಆರಂಭವಾಗಿದೆ ಎಂದಿದ್ದಾರೆ.
ಇದೇ ವೇಳೆ, ಚಿಕ್ಕಮಗಳೂರು ಬೇಲೂರು ಹಾಸನ ನೂತನ ಮಾರ್ಗಕ್ಕೆ ಸರ್ವೆ ಆರಂಭವಾಗಿದೆ. ಬೀರೂರು ಶಿವಮೊಗ್ಗ ಡಬ್ಲಿಂಗ್’ಗೆ 1900 ಕೋಟಿ ರೂ. ಅನುಮೋದನೆ ನೀಡಲಾಗಿದ್ದು ಈ ವರ್ಷಾಂತ್ಯದೊಳಗೆ ಕಾಮಗಾರಿ ಆರಂಭವಾಗಲಿದೆ ಎಂದಿದ್ದಾರೆ.
ಭದ್ರಾವತಿ – ಚಿಕ್ಕಜಾಜೂರು ನಡುವೆ 73 ಕಿ.ಮೀ. ರೈಲು ಮಾರ್ಗ ಸರ್ವೆಗೆ ಟೆಂಡರ್ ಆಗಿದೆ. ಇದು ವಿಐಎಸ್’ಎಲ್’ಗೆ ಅದಿರು ಸಾಗಿಸಲು ಅನುಕೂಲವಾಗುತ್ತದೆ ಎಂದು ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post