ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಶೇಷಾದ್ರಿಪುರದ ಫ್ಲಾಟ್ ಫಾರ್ಮ್ ರಸ್ತೆಯಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದ ವಾರ್ಷಿಕೋತ್ಸವ ಹಾಗೂ ಶ್ರೀ ಜಯತೀರ್ಥರ ಆರಾಧನೆಯ ನಿಮಿತ್ತ ಜುಲೈ 15 ರಂದು ಶ್ರೀಮಠದಲ್ಲಿ ವಿಶೇಷ ಕಾರ್ಯಕ್ರಮ ಜರುಗಿತು.
ಪರಮಪೂಜ್ಯ ಶ್ರೀ ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶದಂತೆ ಬೆಳಗ್ಗೆ ಪಂಚಾಮೃತ ಅಭಿಷೇಕ, ವಿಶೇಷ ಅಲಂಕಾರ, ಕನಕಾಭಿಷೇಕ, ಗಿರಿನಗರದ ಶೃತಿ ಸಂಗೀತ ಶಾಲೆಯ ಸದಸ್ಯರುಗಳಿಂದ ದಾಸರ ಪದಗಳ ಗಾಯನ, ರಥೋತ್ಸವ, ಮಹಾಮಂಗಳಾರತಿ ಹಾಗೂ ಅಲಂಕಾರ ಪಂಕ್ತಿ ಸೇವಾ ಕಾರ್ಯಕ್ರಮಗಳು ನಡೆಯಿತು.
ಸಂಜೆಯ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಕುಮಾರಿ ದಿವ್ಯಶ್ರೀ ರಂಗನಾಥನ್ ಮತ್ತು ಸಂಗಡಿಗರಿಂದ ಸ್ಯಾಕ್ಸೋಫೋನ್ ವಾದನ ಕಾರ್ಯಕ್ರಮ ಆಯೋಜಿಸಲಾಗಿತ್ತು ಎಂದು ಶ್ರೀಮಠದ ವಿಚಾರಣಾಕರ್ತ ಸುಬ್ಬುನರಸಿಂಹ ತಿಳಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post