ಕಲ್ಪ ಮೀಡಿಯಾ ಹೌಸ್ | ಹೈದರಾಬಾದ್ |
ತೆಲುಗು ಚಿತ್ರರಂಗಕ್ಕೆ ಯಾಕೋ ಒಂದರ ಹಿಂದೆ ಒಂದರಂತೆ ಆಘಾತಕರ ಘಟನೆಗಳು ನಡೆಯುತ್ತಲೇ ಇವೆ.
ಖ್ಯಾತ ಹಿರಿಯ ನಟ ಕೋಟ ಶ್ರೀನಿವಾಸ ರಾವ್ ವಿಧಿವಶರಾದ ಬೆನ್ನಲ್ಲೇ, ಟಾಲಿವುಡ್ ಖ್ಯಾತ ಖಳ ಹಾಗೂ ಹಾಸ್ಯ ನಟ ಫಿಶ್ ವೆಂಕಟ್ ನಿಧನರಾಗಿದ್ದಾರೆ.
ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗಿದೆ ಇಂದು ಕೊನೆಯುಸಿರೆಳೆದಿದ್ದಾರೆ.
ಫಿಶ್ ವೆಂಕಟ್ ಅವರು ಟಾಲಿವುಡ್‌ನಲ್ಲಿ ಹಲವು ಚಿತ್ರಗಳಲ್ಲಿ ಖಳನಟನಾಗಿ, ಹಾಸ್ಯ ಖಳ ನಟನಾಗಿ, ಹಾಸ್ಯನಟನಾಗಿ ನಟಿಸಿ ನಗೆಯ ಹೊಳೆಯನ್ನೇ ಹರಿಸಿದ್ದರು.
ದಶಕಗಳ ಕಾಲ ಅಭಿಮಾನಿಗಳನ್ನು ರಂಜಿಸಿದ್ದ ವೆಂಕಟ್, ಅನಾರೋಗ್ಯ ಕಾರಣದಿಂದಾಗಿ ಕಳೆದ ಕೆಲವು ಕಾಲದಿಂದ ಸಿನಿಮಾಗಳಿಂದ ದೂರ ಉಳಿದಿದ್ದರು.
ಮೂತ್ರಪಿಂಡ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಫಿಶ್ ವೆಂಕಟ್ ಅವರು, ಕಾಯಿಲೆ ಉಲ್ಬಣಗೊಂಡು ಎರಡೂ ಮೂತ್ರಪಿಂಡಗಳು ಹಾಳಾದ ಕಾರಣ ಡಯಾಲಿಸಿಸ್ ಚಿಕಿತ್ಸೆಗೆ ಒಳಗಾಗಿದ್ದರು.
ಇದಾದ ಕೆಲ ದಿನಗಳ ಬಳಿಕ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ ಎನ್ನಲಾಗಿತ್ತು. ಆದರೆ, ಮತ್ತೆ ಆರೋಗ್ಯದಲ್ಲಿ ಏರುಪೇರಾದ ಕಾರಣ ಆಸ್ಪತ್ರೆಗೆ ದಾಖಲಿಸಲಾಗಿತ್ತು.
2000ರಲ್ಲಿ ʼಸಮ್ಮಕ್ಕ ಸಾರಕ್ಕʼ ಚಿತ್ರದ ಮೂಲಕ ಚಿತ್ರರಂಗಕ್ಕೆ ಕಾಲಿಟ್ಟ ಫಿಶ್ ವೆಂಕಟ್ ನೂರಾರು ಸಿನಿಮಾಗಳಲ್ಲಿ ನಟಿಸಿದ್ದಾರೆ. ಎಲ್ಲಾ ಸ್ಟಾರ್ ಹೀರೋಗಳೊಂದಿಗೆ ತೆರೆ ಹಂಚಿಕೊಂಡಿದ್ದರು.
ಫಿಶ್ ವೆಂಕಟ್ ತಮ್ಮ ವಿಶಿಷ್ಟ ತೆಲಂಗಾಣ ಉಪಭಾಷೆ ಮತ್ತು ನಿಷ್ಪಾಪ ಹಾಸ್ಯ ಸಮಯಪ್ರಜ್ಞೆಗೆ ಹೆಸರುವಾಸಿಯಾಗಿದ್ದರು. ಇದು ಪ್ರೇಕ್ಷಕರಿಂದ ವ್ಯಾಪಕ ಮೆಚ್ಚುಗೆಯನ್ನು ಗಳಿಸಿತು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post