ಕಲ್ಪ ಮೀಡಿಯಾ ಹೌಸ್ | ಹೊಸನಗರ |
ಪ್ರವಾಸಕ್ಕೆಂದು ಬಂದಿದ್ದ ಯುವಕನೊಬ್ಬ ಕಾಲುಜಾರಿ ಬಿದ್ದು ನೀರಿನಲ್ಲಿ ಕಾಣೆಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಅಬ್ಬಿ ಜಲಪಾತದಲ್ಲಿ ನಡೆದಿದೆ.
ತಾಲೂಕಿನ ಮಾಸ್ತಿಕಟ್ಟೆ ಸಮೀಪದ ಯಡೂರು ಅಬ್ಬಿ ಜಲಪಾತದಲ್ಲಿ ಈಜಲು ಹೋಗಿದ್ದ ಯುವಕನೋರ್ವ ನೀರು ಪಾಲಾಗಿರುವ ದುರ್ಘಟನೆ ನಡೆದಿದೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಸ್ಥಳೀಯರು ಮತ್ತು ಪೊಲೀಸರು ಕೂಡಲೇ ಸ್ಥಳಕ್ಕೆ ಧಾವಿಸಿ ಹುಡುಕಾಟ ನಡೆಸಿದ್ದಾರೆ. ರಮೇಶ್ ಅವರ ಪತ್ತೆಗೆ ಪರಿಶ್ರಮ ನಡೆಯುತ್ತಿದ್ದು, ಇನ್ನಷ್ಟು ಮಾಹಿತಿ ನಿರೀಕ್ಷಿಸಲಾಗಿದೆ.











Discussion about this post