ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಇಲ್ಲಿನ ಕಲಾಸಿಪಾಳ್ಯ ಬಸ್ ನಿಲ್ದಾಣದ ಶೌಚಾಲಯದಲ್ಲಿ ಸ್ಪೋಟಕ ವಸ್ತುಗಳು ಇರುವ ಬ್ಯಾಗ್ ಪತ್ತೆಯಾಗಿದ್ದು, ಆತಂಕಕ್ಕೆ ಕಾರಣವಾಗಿದೆ.
ಬಸ್ ನಿಲ್ದಾಣದ ಶೌಚಾಲಯದಲ್ಲಿ ಬ್ಯಾಗ್ ಪತ್ತೆಯಾಗಿದೆ. ಸ್ಥಳಕ್ಕೆ ಪೊಲೀಸರು, ಶ್ವಾನ ದಳ, ಬಾಂಬ್ ಪತ್ತೆ ಹಾಗೂ ಬಾಂಬ್ ನಿಷ್ಕ್ರಿಯ ದಳ ದೌಡಾಯಿಸಿ ಪರಿಶೀಲನೆ ನಡೆಸಿದೆ.
ಬಸ್ ನಿಲ್ದಾಣಕ್ಕೆ ಜಿಲೆಟಿನ್ ಕಡ್ಡಿ ತಂದಿಟ್ಟಿದ್ದು ಯಾರು? ಯಾವ ಉದ್ದೇಶಕ್ಕಾಗಿ ಇದನ್ನು ತರಲಾಗಿತ್ತು ಎಂಬುದರ ಬಗ್ಗೆ ತನಿಖೆ ನಡೆಸಲಾಗುತ್ತಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news






















