ಕಲ್ಪ ಮೀಡಿಯಾ ಹೌಸ್ | ಹುಬ್ಬಳ್ಳಿ |
ಕಾರ್ಗಿಲ್ ವಿಜಯ ದಿವಸ #Kargil Vihaya Diwas ಹಾಗೂ ಆಸ್ಪತ್ರೆಯ ಸಂಸ್ಥಾಪನಾ ದಿನಾಚರಣೆ ಅಂಗವಾಗಿ ನೈಋತ್ಯ ರೈಲ್ವೆ ಕೇಂದ್ರೀಯ ಆಸ್ಪತ್ರೆಯು SDJCM ರಾಷ್ಟ್ರೋತ್ಥಾನ ರಕ್ತ ನಿಧಿ ಕೇಂದ್ರ ಹುಬ್ಬಳ್ಳಿ ಇವರ ಸಹಯೋಗದಲ್ಲಿ ಇಂದು ರೈಲ್ವೆ ಆಸ್ಪತ್ರೆಯಲ್ಲಿ ರಕ್ತದಾನ ಶಿಬಿರ #Blood Donation Camp ನಡೆಯಿತು.
ನೈಋತ್ಯ ರೈಲ್ವೆ ಪ್ರಧಾನ ವ್ಯವಸ್ಥಾಪಕ ಮುಕುಲ್ ಸರನ್ ಮಾಥುರ್ ಅವರು ಮಾತನಾಡಿ, ರಕ್ತದಾನ ಒಂದು ಪ್ರಮುಖ ಸೇವೆಯಾಗಿದ್ದು, ತುರ್ತು ಹಾಗೂ ಅಪಘಾತದ ಸಂದರ್ಭದಲ್ಲಿ ರಕ್ತದ ಅವಶ್ಯಕತೆ ಸಾಕಷ್ಟು ಇರುತ್ತದೆ. ರಕ್ತದಾನ ಮಾಡುವ ಮೂಲಕ ಜೀವದ ಉಳಿವಿಕೆಗೆ ನೆರವಾಗಬೇಕು. ಪ್ರತಿ ರಕ್ತದ ಹನಿಯೂ ಜೀವ ಉಳಿಸುವಲ್ಲಿ ಸಂಜೀವಿನಿ ಆಗಿದೆ ಎಂದರು.
ಶಿಬಿರದಲ್ಲಿ ರಕ್ತದಾನ ಬಗ್ಗೆ ಜಾಗೃತಿ ಮೂಡಿಸಲು ರಂಗೋಲಿ, ಕ್ರಾಫ್ಟ್ ಹಾಗು ಚಿತ್ರಕಲೆ ಪ್ರದರ್ಶನ ನಡೆಯಿತು. ಈ ಕಾರ್ಯಕ್ರಮದಲ್ಲಿ ರಕ್ತದಾನಿಗಳಿಗೆ ಪ್ರಮಾಣಪತ್ರ ವಿತರಣೆ ಮಾಡಲಾಯಿತು.
ಶಿಬಿರದಲ್ಲಿ ರೈಲ್ವೆ ಉದ್ಯೋಗಿಗಳು ಹಾಗೂ ಸಾರ್ವಜನಿಕರು ಭಾಗವಹಿಸಿ ರಕ್ತದಾನ ಮಾಡಿದರು. ಹೆಚ್ಚುವರಿ ವ್ಯವಸ್ಥಾಪಕ ಕೆ.ಎಸ್. ಜೈನ, ಹುಬ್ಬಳ್ಳಿ ವಿಭಾಗೀಯ ಹೆಚ್ಚುವರಿ ವ್ಯವಸ್ಥಾಪಕರುಗಳಾದ ಟಿ.ವಿ. ಭೂಷಣ್ ಮತ್ತು ಪ್ರೇಮ್ ಚಂದ್ ಹರಿಜನ್ , ಮುಖ್ಯ ವೈದ್ಯಕೀಯ ಅಧೀಕ್ಷಕರು ಡಾ. ರಾಮಕೃಷ್ಣ ಮಾನೆ, ಹೆಚ್ಚುವರಿ ವೈದ್ಯಕೀಯ ಅಧೀಕ್ಷಕರು ಡಾ. ಸುರೇಶ ಬಾಬು, ಡಾ. ಮಾಲತಿ ಸೇರಿದಂತೆ ಹಲವಾರು ಹಿರಿಯ ಅಧಿಕಾರಿಗಳು, ವೈದ್ಯಾಧಿಕಾರಿಗಳು ಮತ್ತು ಸಿಬ್ಬಂದಿವರ್ಗದವರು ಈ ಶಿಬಿರದಲ್ಲಿ ಸಕ್ರಿಯವಾಗಿ ಭಾಗವಹಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post