ಕಲ್ಪ ಮೀಡಿಯಾ ಹೌಸ್ | ರಿಪ್ಪನ್‌ಪೇಟೆ |
ಕಾರು ಚಲಾಯಿಸುತ್ತಿದ್ದ ವೇಳೆ ಹೃದಯಾಘಾತ #Heart Attack ಸಂಭವಿಸಿದ್ದರಿಂದ, ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಶುಕ್ರವಾರ ಸಂಜೆ ಆಯನೂರು ಬಳಿ ನಡೆದಿದೆ.
ಪಟ್ಟಣದ ಹೊಸನಗರ ರಸ್ತೆಯ ನಿವಾಸಿ ಕಬೀರ್ (54) ಮೃತರು.
ಕೆಲಸದ ನಿಮಿತ್ತ ರಿಪ್ಪನ್‌ಪೇಟೆಯಿಂದ ಸ್ನೇಹಿತನೊಂದಿಗೆ ಶಿವಮೊಗ್ಗಕ್ಕೆ ಕಾರಿನಲ್ಲಿ ಅವರು ತೆರಳುತ್ತಿದ್ದರು. ಮಾರ್ಗಮಧ್ಯೆ ಅವರಿಗೆ ತೀವ್ರ ಎದೆನೋವು ಕಾಣಿಸಿಕೊಂಡು ಕುಸಿದುಬಿದ್ದರು ಎನ್ನಲಾಗಿದೆ. ಜೊತೆಗಿದ್ದವರು ತಕ್ಷಣ ಅವರನ್ನು ಬೇರೊಂದು ವಾಹನದಲ್ಲಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಕರೆದೊಯ್ದರು. ಅವರು ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ವೈದ್ಯರು ಖಚಿತಪಡಿಸಿದರು ಎಂದು ತಿಳಿದುಬಂದಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post