ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಇತ್ತೀಚಿನ ಮಕ್ಕಳಿಗೆ ಅರಣ್ಯ, ಪರಿಸರದ ಬಗ್ಗೆ ಕಾಳಜಿ ಕಡಿಮೆಯಾಗುತ್ತಿದ್ದು, ಅರಣ್ಯಗಳ ಮಹತ್ವ, ಪರಿಸರ ಸಂರಕ್ಷಣೆಯ ಕಾಳಜಿಯನ್ನು ಬೆಳೆಸುವುದು ಚಿಣ್ಣರ ವನ ದರ್ಶನ ಉದ್ದೇಶವಾಗಿದೆ ಎಂದು ಶಂಕರ ವಲಯ ಅರಣ್ಯಾಧಿಕಾರಿ ವಿಜಯ್‌ಕಮಾರ್ ಜೆ. ಅವರು ತಿಳಿಸಿದರು.
ಅವರು ಅರಣ್ಯ ಇಲಾಖೆಯ ಶಂಕರ ವಲಯದ ವತಿಯಿಂದ ಆಯೋಜಿಸಿದ್ದ ಕೊಮ್ಮನಾಳು ಸರ್ಕಾರಿ ಶಾಲಾ ಮಕ್ಕಳಿಗೆ ’ಚಿಣ್ಣರ ವನ ದರ್ಶನ’ ಕಾರ್ಯಕ್ರಮದಲ್ಲಿ ಮಾತನಾಡಿದರು.
ಅರಣ್ಯ ಮತ್ತು ವನ್ಯಜೀವಿಗಳನ್ನು ರಕ್ಷಿಸುವ ಬಗ್ಗೆ ಅರಿವು ಮೂಡಿಸುವುದರ ಜೊತೆಗೆ, ಅವುಗಳ ಸಂರಕ್ಷಣೆಯ ಜವಾಬ್ದಾರಿಯನ್ನು ಮಕ್ಕಳಿಗೆ ಮನದಟ್ಟು ಮಾಡಿಕೊಡುವುದು. ಪರಿಸರದ ಬಗ್ಗೆ ಕಾಳಜಿ ಬೆಳೆಸಿ, ಭವಿಷ್ಯದಲ್ಲಿ ಪರಿಸರ ಸ್ನೇಹಿ ನಿರ್ಧಾರಗಳನ್ನು ತೆಗೆದುಕೊಳ್ಳುವಂತೆ ಪ್ರೇರೇಪಿಸುವುದು ಚಿಣ್ಣರ ವನ ದರ್ಶನ ಕಾರ್ಯಕ್ರಮದ ಉದ್ದೇಶವಾಗಿದೆ ಎಂದರು.
ಸರ್ಕಾರಿ ಶಾಲೆಯ ಮಕ್ಕಳಿಗೆ ಆಯೋಜಿಸಿದ್ದ ಎರಡು ದಿನಗಳ ಚಿಣ್ಣರ ವನ ದರ್ಶನ ಕಾರ್ಯಕ್ರಮದಲ್ಲಿ ಶಂಕರ ವಲಯದ ಕಛೇರಿ, ಸಿಂಹಧಾಮ, ಸಾಗರದಲ್ಲಿನ ನರ್ಸರಿ, ಮುಪ್ಪಾನೆ ಪ್ರಕೃತಿ ಶಿಬಿರದಲ್ಲಿ ರಸಪ್ರಶ್ನೆ, ಪ್ರಬಂಧ ಬರವಣಿಗೆ, ಚಿತ್ರಕಲೆ, ಪ್ರಕೃತಿ ನಡಿಗೆಯಲ್ಲಿ ಮಕ್ಕಳಿಗೆ ಪ್ರಕೃತಿಯಲ್ಲಿನ ವೈವಿಧ್ಯತೆ, ಪರಿಸರ ವ್ಯವಸ್ಥೆಗಳು ಮತ್ತು ಸಂರಕ್ಷಣೆಯ ಮಾಹಿತಿಯನ್ನು ತಿಳಿಸಿಕೊಡುವುದರ ಜೊತೆಗೆ ವಿಶ್ವ ವಿಖ್ಯಾತ ಜೋಗ ಜಲಪಾತವನ್ನು ಮಕ್ಕಳು ಕಣ್ತುಂಬಿಕೊಳ್ಳುವಂತೆ ಮಾಡಲಾಯಿತು.
ಈ ಕಾರ್ಯಕ್ರಮದಲ್ಲಿ ಅರಣ್ಯ ಗಸ್ತು ಪಾಲಕ ಕೊಟ್ರೇಶ್ ದಾನಮ್ಮನವರ್, ಇಲಾಖೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post