ಕಲ್ಪ ಮೀಡಿಯಾ ಹೌಸ್ | ಬಳ್ಳಾರಿ |
ನಗರದ ಟಿ.ಬಿ.ಸ್ಯಾನಿಟೋರಿಯಂ ಬಳಿ ಕಳೆದ ಎರಡು ದಿನಗಳ ಹಿಂದೆ ಕಾಣಿಸಿಕೊಂಡಿದ್ದ ಕರಡಿಯನ್ನು ಬುಧವಾರ ಮುಂಜಾನೆ ಅರಣ್ಯ ಇಲಾಖೆಯ ಅರಣ್ಯಾಧಿಕಾರಿ ಹಾಗೂ ಸಿಬ್ಬಂದಿಗಳ ನಿರಂತರ ಕಾರ್ಯಾಚರಣೆಯಿಂದ ಯಶಸ್ವಿಯಾಗಿ ಸೆರೆ ಹಿಡಿದು ರಕ್ಷಿಸಲಾಗಿದೆ ಎಂದು ಬಳ್ಳಾರಿ ಪ್ರಾದೇಶಿಕ ವಿಭಾಗದ ಉಪಅರಣ್ಯ ಸಂರಕ್ಷಣಾಧಿಕಾರಿ ಡಾ.ಬಸವರಾಜ ಕೆ.ಎನ್ ಅವರು ತಿಳಿಸಿದ್ದಾರೆ.
ಜು.28 ಸೋಮವಾರ ರಾತ್ರಿ 11 ಗಂಟೆಗೆ ಟಿ.ಬಿ.ಸ್ಯಾನಿಟೋರಿಯಂ ಬಳಿ ಕರಡಿ ಕಾಣಿಸಿಕೊಂಡಿರುವ ಬಗ್ಗೆ ಮಾಹಿತಿ ಮೇರೆಗೆ ಅರಣ್ಯ ಇಲಾಖೆಯ ಅಧಿಕಾರಿ, ಸಿಬ್ಬಂದಿ ತಕ್ಷಣ ಸ್ಥಳಕ್ಕೆ ಧಾವಿಸಿ ಕರಡಿಯ ಚಲನ ವಲನಗಳ ಮೇಲೆ ನಿಗಾವಹಿಸಿ ಯಾವುದೇ ಅವಘಡಗಳು ಸಂಭವಿಸದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ಹಲವು ತಂಡಗಳನ್ನು ರಚಿಸಿ ಸೆರೆಹಿಡಿಯಲು ಯೋಜನೆ ರೂಪಿಸಲಾಗಿತ್ತು.

ಸೆರೆ ಹಿಡಿದಿರುವ ಕರಡಿಯು ಅಂದಾಜು ಐದು ವರ್ಷದ ಹೆಣ್ಣು ಕರಡಿಯಾಗಿದ್ದು, ಪಶು ವೈದ್ಯರ ತಂಡವು ಪ್ರಾಥಮಿಕವಾಗಿ ಪರೀಕ್ಷಿಸಿ ಕರಡಿಯ ಗುರುತಿಗಾಗಿ ಮೈಕ್ರೋ ಚಿಪ್ ಅಳವಡಿಸುವಿಕೆ, ಹೆಚ್ಚಿನ ಚಿಕಿತ್ಸೆ ಮತ್ತು ಪರೀಕ್ಷೆಗಾಗಿ ಕಮಲಾಪುರದ ಅಟಲ್ ಬಿಹಾರಿ ವಾಜಪೇಯಿ ಮೃಗಾಲಯಕ್ಕೆ ಕಳುಹಿಸಲಾಗಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news












Discussion about this post