ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಸ್ವಾತಂತ್ರ್ಯ ದಿನಾಚರಣೆಯ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿವಾರಿಸಲು, ನೈಋತ್ಯ ರೈಲ್ವೆಯು ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ಮತ್ತು ಬೀದರ್ ನಡುವೆ ಪ್ರತಿ ದಿಕ್ಕಿನಲ್ಲಿ ಒಂದು ಟ್ರಿಪ್ ವಿಶೇಷ ಎಕ್ಸ್ ಪ್ರೆಸ್ ರೈಲು ಸೇವೆಯನ್ನು ಒದಗಿಸಲಿದೆ.
ರೈಲು ಸಂಖ್ಯೆ 06519 ಎಸ್ಎಂವಿಟಿ ಬೆಂಗಳೂರು – ಬೀದರ್ ವಿಶೇಷ ಎಕ್ಸ್ ಪ್ರೆಸ್ ರೈಲು #Bangalore-Bidar Special Express Train ಆಗಸ್ಟ್ 14, 2025 (ಗುರುವಾರ) ರಂದು ಎಸ್ಎಂವಿಟಿ ಬೆಂಗಳೂರಿನಿಂದ ರಾತ್ರಿ 9:15ಕ್ಕೆ ಹೊರಟು, ಮರುದಿನ ಬೆಳಗ್ಗೆ 11:30ಕ್ಕೆ ಬೀದರ್ ತಲುಪಲಿದೆ. ಮರು ಪ್ರಯಾಣದಲ್ಲಿ, ರೈಲು ಸಂಖ್ಯೆ 06520 ಬೀದರ್ – ಎಸ್ಎಂವಿಟಿ ಬೆಂಗಳೂರು ವಿಶೇಷ ಎಕ್ಸ್ ಪ್ರೆಸ್ ರೈಲು ಆಗಸ್ಟ್ 15, 2025 (ಶುಕ್ರವಾರ) ರಂದು ಬೀದರ್ನಿಂದ ಮಧ್ಯಾಹ್ನ 2:30ಕ್ಕೆ ಹೊರಟು, ಮರುದಿನ ಬೆಳಗಿನ ಜಾವ 4:30ಕ್ಕೆ ಎಸ್ಎಂವಿಟಿ ಬೆಂಗಳೂರು ತಲುಪಲಿದೆ.
ಮಾರ್ಗದಲ್ಲಿ, ರೈಲು ಸಂಖ್ಯೆ 06519 ಎಸ್ಎಂವಿಟಿ ಬೆಂಗಳೂರು – ಬೀದರ್ ವಿಶೇಷ ರೈಲು ಯಲಹಂಕ, ಹಿಂದೂಪುರ, ಧರ್ಮಾವರಂ, ಅನಂತಪುರ, ಗುಂತಕಲ್, ಆದೋನಿ, ಮಂತ್ರಾಲಯಂ ರೋಡ್, ರಾಯಚೂರು, ಕೃಷ್ಣ, ಯಾದಗಿರಿ, ವಾಡಿ, ಶಹಬಾದ್, ಕಲಬುರಗಿ, ಹುಮನಾಬಾದ್ ನಿಲ್ದಾಣಗಳಲ್ಲಿ ನಿಲುಗಡೆ ನೀಡಲಿದೆ. ರೈಲು ಸಂಖ್ಯೆ 06520 ಇದೇ ನಿಲ್ದಾಣಗಳಲ್ಲಿ ಹಿಮ್ಮುಖ ಕ್ರಮದಲ್ಲಿ ನಿಲ್ಲಲಿದೆ.
ಈ ವಿಶೇಷ ರೈಲು 20 ಸೆಕೆಂಡ್ ಕ್ಲಾಸ್ ಸ್ಲೀಪರ್ ಬೋಗಿಗಳು ಮತ್ತು 2 ಸೆಕೆಂಡ್ ಕ್ಲಾಸ್ ಲಗೇಜ್ ಕಮ್ ದಿವ್ಯಾಂಗ ಸ್ನೇಹಿ ಬೋಗಿಗಳು ಸೇರಿದಂತೆ ಒಟ್ಟು 22 ಬೋಗಿಗಳನ್ನು ಒಳಗೊಂಡಿರುತ್ತದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post