ಕಲ್ಪ ಮೀಡಿಯಾ ಹೌಸ್ | ತೀರ್ಥಹಳ್ಳಿ |
ಬಾಳೆಬೈಲಿನ ಡಿಗ್ರಿ ಕಾಲೇಜಿನಲ್ಲಿ ಮೊದಲ ವರ್ಷದ ಬಿಬಿಎ ಓದುತ್ತಿದ್ದ ವಿದ್ಯಾರ್ಥಿನಿ ವಿ*ಷ ಸೇವಿಸಿ ಆತ್ಮಹ*ತ್ಯೆ ಮಾಡಿಕೊಂಡಿದ್ದಾಳೆ.
ಅಶ್ವಿನಿ ( 19 ವರ್ಷ) ಮೃತಪಟ್ಟ ವಿದ್ಯಾರ್ಥಿನಿ. ಯಡೂರಿನಿಂದ ತೀರ್ಥಹಳ್ಳಿಗೆ ವಿದ್ಯಾಭ್ಯಾಸಕ್ಕಾಗಿ ಬರುತ್ತಿದ್ದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಳ್ಳಲು ಕಾರಣವೇನು?ಎಂಬುದಾಗಿ ನಿಖರವಾಗಿ ತಿಳಿದು ಬಂದಿಲ್ಲ. ವಿ*ಷ ಸೇವನೆ ಮಾಡಿದ್ದರ ಪರಿಣಾಮ ಮೊದಲಿಗೆ ತೀರ್ಥಹಳ್ಳಿ ಜೆಸಿ ಆಸ್ಪತ್ರೆಗೆ ಸೇರಿಸಲಾಗಿತ್ತು. ಆ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮೆಗ್ಗಾನ್ ಆಸ್ಪತ್ರೆಗೆ ರವಾನೆ ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಅಶ್ವಿನಿ ಮೃತಪಟ್ಟಿದ್ದಾಳೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post