ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ವಿದ್ಯಾರ್ಥಿಗಳಿಗೆ ತೌಲನಿಕ ಅಧ್ಯಯನ ಬಹಳ ಮುಖ್ಯ ಎಂದು ಕುವೆಂಪು ವಿವಿ ಕುಲಪತಿ ಪ್ರೊ. ಶರತ್ ಅನಂತಮೂರ್ತಿ #Prof. Sharath AnanthaMurthy ಹೇಳಿದರು.
ಅವರು ಇಂದು ಕರ್ನಾಟಕ ಸಾಹಿತ್ಯ ಅಕಾಡೆಮಿ, ಸಹ್ಯಾದ್ರಿ ಕಲಾ ಕಾಲೇಜ್ ಇವರ ಸಂಯುಕ್ತಾಶ್ರಯದಲ್ಲಿ ಸಹ್ಯಾದ್ರಿ ಕಾಲೇಜಿನ ಸಭಾಂಗಣದಲ್ಲಿ ಚಕೋರ ಸಾಹಿತ್ಯ ವಿಚಾರ ವೇದಿಕೆ ವತಿಯಿಂದ ಆಯೋಜಿಸಿದ್ದ ಬಹುಮುಖಿ ಪ್ರಕಾಶನದ ‘ನೀವು ಕಂಡರಿಯದ ಕುದ್ಮಲ್ ರಂಗರಾವ್’ ಪುಸ್ತಕ ಕುರಿತ ಚರ್ಚೆ ಹಾಗೂ ಉಪನ್ಯಾಸ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಕುದ್ಮಲ್ ರಂಗರಾವ್ ಪುಸ್ತಕ ಕುರಿತು ವಿಶೇಷ ಉಪನ್ಯಾಸ ನೀಡಿದ ಚಿಂತಕ ಹಾಗೂ ವಕೀಲ ಸುಧೀರ್ ಕುಮಾರ್ ಮುರೊಳ್ಳಿ, ಕುದ್ಮಲ್ ರಂಗರಾವ್ ಅವರು ಸಾಮಾಜಿಕ ಸುಧಾಕರು. ಒಂದು ಗೌರವ ಸಮಾಜದಿಂದ ಬಂದ ಅವರು ಕೆಳಸಮಾಜದ ಬಗ್ಗೆ ಯೋಚಿಸುವುದು ಈ ನೆಲದ ಶಕ್ತಿಯಾಗಿದೆ. ಅವರು ಚಿತ್ತಾರ ಸಾರಸತ್ವ ಬ್ರಾಹ್ಮಣ ಸಮಾಜದಿಂದ ಬಂದವರಾದರೂ ದಲಿತ ಪ್ರಜ್ಞೆಯನ್ನು ಬೆಳೆಸಿಕೊಂಡವರು. ಅವರ ಕಾಲದಲ್ಲಿನ ಹಿಂದೂ ಧರ್ಮದ ಮೌಢ್ಯಗಳನ್ನು ತೊರೆಯಲು ಹೋರಾಟ ಮಾಡಿದವರು. ಗಾಂಧಿ ಮತ್ತು ಅಂಬೇಡ್ಕರ್ ಸಾಲಿನಲ್ಲಿ ನಿಲ್ಲುವ ಅವರು ಅವರಿಗಿಂತ ಮೊದಲೇ ಸಮಾನತೆ ಸಮಾಜದ ಬಗ್ಗೆ ಯೋಚಿಸಿದವರು ಎಂದರು.

ಕಾರ್ಯಕ್ರಮದಲ್ಲಿ ಸಹ್ಯಾದ್ರಿ ಕಲಾ ಕಾಲೇಜಿನ ಪ್ರಾಂಶುಪಾಲ ಡಾ.ಎಸ್. ಸಿರಾಜ್ ಅಹಮ್ಮದ್ ಅಧ್ಯಕ್ಷತೆ ವಹಿಸಿದ್ದರು.
ಸಾಹಿತ್ಯ ಅಕಾಡೆಮಿ ಸದಸ್ಯೆ ಡಾ.ಪಿ. ಚಂದ್ರಿಕಾ, ಸಂಚಾಲಕ ಶಂಕರ್ ಸಿಹಿಮೊಗೆ, ವಿದ್ಯಾರ್ಥಿ ಕ್ಷೇಮಾಧಿಕಾರಿ ಡಾ.ಕೆ.ಎನ್. ಮಂಜುನಾಥ್ ಮುಂತಾದವರು ಉಪಸ್ಥಿತರಿದ್ದರು. ನಂತರ ನಡೆದ ಸಂವಾದ ಗೋಷ್ಠಿಯಲ್ಲಿ ಡಾ. ಮಹಾದೇವಸ್ವಾಮಿ, ಡಾ. ಪ್ರಸನ್ನಕುಮಾರ್, ಡಾ.ಎಂ.ಹೆಚ್. ಪ್ರಹ್ಲಾದಪ್ಪ ಇದ್ದರು. ವಿದ್ಯಾರ್ಥಿಗಳು ಪುಸ್ತಕಗಳ ಕುರಿತು ಪ್ರಬಂಧ ಮಂಡಿಸಿದರು. ನಂತರ ಸಂವಾದ ಕಾರ್ಯಕ್ರಮ ನಡೆಯಿತು. ಪ್ರಣತಿ ಪ್ರಾರ್ಥಿಸಿದರು, ಸಿಂಚನಾ ನಿರೂಪಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post