ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಸಂಸದರೂ, ಅಭಿವೃದ್ಧಿಯ ಹರಿಕಾರರು ಹಾಗೂ ಪಿಇಎಸ್ ಟ್ರಸ್ಟ್ನ ಅಧ್ಯಕ್ಷರೂ ಆದ ಬಿ.ವೈ. ರಾಘವೇಂದ್ರ ಅವರ ಹುಟ್ಟುಹಬ್ಬದ ಅಂಗವಾಗಿ ಪಿಇಎಸ್ ಟ್ರಸ್ಟ್’ನಲ್ಲಿ ಆಯೋಜಿಸಲಾಗಿದ್ದ ಬೃಹತ್ ರಕ್ತದಾನ ಶಿಬಿರ ಯಶಸ್ವಿಯಾಯಿತು.
ಪಿಇಎಸ್ ಟ್ರಸ್ಟ್ ಮುಖ್ಯಕಾರ್ಯನಿರ್ವಾಹಕ ಅಧಿಕಾರಿಗಳಾದ ಉಮಾದೇವಿ ಮಾತನಾಡಿ, ಈ ದಿನ ನೀವೆಲ್ಲರೂ ರಕ್ತದಾನದಲ್ಲಿ ಪಾಲ್ಗೊಳ್ಳುವ ಮೂಲಕ ಜೀವ ಉಳಿಸುವ ಪವಿತ್ರಕಾರ್ಯವನ್ನು ಮಾಡಿದ್ದೀರಿ. ತಮಗೆಲ್ಲರಿಗೂ ಹಾರ್ದಿಕ ಅಭಿನಂದನೆಗಳು ಎಂದು ಶುಭ ಕೋರಿದರು.
ಪಿಇಎಸ್ ಟ್ರಸ್ಟ್ ಮುಖ್ಯಕಾರ್ಯನಿರ್ವಹಣಾಧಿಕಾರಿಗಳಾದ ಬಿ.ಆರ್. ಸುಭಾಷ್ ಮಾತನಾಡಿ, ತಮ್ಮ ತಂದೆಯವರ ಹುಟ್ಟುಹಬ್ಬದ ಸಂದರ್ಭದಲ್ಲಿ ನೀವೆಲ್ಲರೂ ರಕ್ತದಾನ ಕಾರ್ಯದಲ್ಲಿ ಪಾಲ್ಗೊಂಡಿದ್ದು ನಮಗೆ ಸಂತಸವನ್ನು ತಂದಿದೆ ಎಂದು ಎಲ್ಲರಿಗೂ ಅಭಿನಂದನೆಗಳನ್ನು ತಿಳಿಸಿದರು.

ಕಾರ್ಯಕ್ರಮದಲ್ಲಿ ಪಿಇಎಸ್ ಟ್ರಸ್ಟ್ ಮುಖ್ಯ ಆಡಳಿತ ಸಂಯೋಜನಾಧಿಕಾರಿಗಳಾದ ಡಾ.ಆರ್. ನಾಗರಾಜ, ಇಎಸ್ಐಟಿಎಂನ ಪ್ರಾಂಶುಪಾಲರಾದ ಡಾ.ಡಿ.ಆರ್. ಸ್ವಾಮಿ, ಪಿಇಎಸ್ಐಎಎಂಎಸ್ ಕಾಲೇಜಿನ ಪ್ರಾಂಶುಪಾಲರಾದ ಡಾ.ಜಿ.ಎಂ.ಸುದರ್ಶನ್, ಪಿಇಎಸ್ ಪಾಲಿಟೆಕ್ನಿಕ್ ಕಾಲೇಜಿನ ಪ್ರಾಂಶುಪಾಲರಾದ ಎಂ.ವಿ. ಸುಜಯ್, ಪಿಇಎಸ್ಐಟಿಎಂ ರಾಸೇಯೋ ಕಾರ್ಯಕ್ರಮಾಧಿಕಾರಿಗಳಾದ ಪ್ರೊ.ಶಿವಾನಂದ ಮರಡಿ, ಪಿಇಎಸ್ಐಎಎಂಎಸ್ ಕಾಲೇಜಿನ ರಾಸೇಯೋ ಕಾರ್ಯಕ್ರಮಾಧಿಕಾರಿಗಳಾದ ವಿ. ಭವ್ಯ, ಯುವರೆಡ್ ಕ್ರಾಸ್ ಘಟಕದ ಕಾರ್ಯಕ್ರಮಾಧಿಕಾರಿಗಳಾದ ಪ್ರದೀಪ್ ಪಿ. ಶೆಟ್ಟಿ ಹಾಗೂ ಪಿಇಎಸ್ ಸಂಸ್ಥೆಯ ವಿವಿಧ ವಿಭಾಗಗಳ ಮುಖ್ಯಸ್ಥರುಗಳು, ಅಧ್ಯಾಪಕ ಮತ್ತು ಅಧ್ಯಾಪಕೇತರ ವೃಂದದವರು ಭಾಗವಹಿಸಿದ್ದರು.
ಶಿವಮೊಗ್ಗದ ರೋಟರಿ ರಕ್ತನಿಧಿ ಸಂಸ್ಥೆಯ ಡಾ.ಗಣೇಶ್, ಡಾ.ತರುಣ್ ಹಾಗೂ ಸಿಬ್ಬಂದಿ ವರ್ಗದವರು ರಕ್ತದಾನ ಶಿಬಿರವನ್ನು ನೆರವೇರಿಸಿಕೊಟ್ಟರು. ಕಲರವ ವೇದಿಕೆ ಸಂಚಾಲಕರಾದ ಡಾ.ಎನ್. ಪ್ರವೀಣಚಂದ್ರ ಕಾರ್ಯಕ್ರಮವನ್ನು ನಿರೂಪಿಸಿದರು. ಒಟ್ಟು105 ಯುನಿಟ್ಗಳಷ್ಟು ರಕ್ತವನ್ನು ಸಂಗ್ರಹಿಸಲಾಯಿತು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post