ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ನಗರದ ವಿವಿಧೆಡೆ ದೇವಸ್ಥಾನ ಹಾಗು ಶಾಲೆಗಳಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಶನಿವಾರ ವಿಜೃಂಭಣೆಯಿಂದ ಆಚರಿಸಲಾಯಿತು. ವಿವಿಧ ಕ್ರೀಡೆಗಳು ಹಾಗು ಶ್ರೀ ಕೃಷ್ಣ-ರಾಧೆ ವೇಷ ಪ್ರದರ್ಶನಗಳನ್ನು ಆಯೋಜಿಸಲಾಗಿತ್ತು.
ನಗರದ ನ್ಯೂಟೌನ್ ಶ್ರೀ ಕೃಷ್ಣ ದೇವಸ್ಥಾನದಲ್ಲಿ ತಾಲೂಕು ಗೊಲ್ಲ-ಯಾದವ ಸಂಘದ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿವಿಧ ಧಾರ್ಮಿಕ ಆಚರಣೆಗಳು ಜರುಗಿದವು. ಕ್ಷೀರಾಭಿಷೇಕ, ಗೋದಾನ ಮತ್ತು ಉಯ್ಯಾಲೆ ಸೇವೆ ಸೇರಿದಂತೆ ವಿಶೇಷ ಸೇವೆಗಳನ್ನು ನೆರವೇರಿಸಲಾಯಿತು.

ಅನನ್ಯ ಶಿಕ್ಷಣ ಸಂಸ್ಥೆಯಲ್ಲಿ ಶ್ರೀ ಕೃಷ್ಣ-ರಾಧೆ ವೇಷ ಪ್ರದರ್ಶನನಗರದ ಅಪ್ಪರ್ ಹುತ್ತಾ, ಅನನ್ಯ ವಿದ್ಯಾಸಂಸ್ಥೆಯ ಅನನ್ಯ ಹ್ಯಾಪಿ ಹಾರ್ಟ್ಸ್ನಲ್ಲಿ ಶ್ರೀ ಕೃಷ್ಣ ಜನ್ಮಾಷ್ಠಮಿ ವಿಶಿಷ್ಟವಾಗಿ ಹಾಗು ಶ್ರೀ ಕೃಷ್ಣನ ಕುರಿತ ಭಾಷಣ, ಹಾಡು ಹಾಗು ನೃತ್ಯ ಮತ್ತು ವೇಷ ಪ್ರದರ್ಶನದ ಮೂಲಕ ಅರ್ಥಗರ್ಭಿತವಾಗಿ ಆಚರಿಸಲಾಯಿತು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post