ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ತಾಲೂಕಿನ ಹೊಳೆಹೊನ್ನೂರಿನಲ್ಲಿ ತಂಬಾಕು ನಿಯಂತ್ರಣ ಕಾನೂನುಗಳನ್ನು ಉಲ್ಲಂಘಿಸುವವರ ವಿರುದ್ಧ ದಾಳಿ ಹಮ್ಮಿಕೊಳ್ಳಲಾಯಿತು. ಒಟ್ಟು 63 ಪ್ರಕರಣಗಳನ್ನು ದಾಖಲಿಸಿ 4800 ರೂ ದಂಡವನ್ನು ಸಂಗ್ರಹಿಸಲಾಯಿತು.
ತಂಡದಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಹೇಮಂತ್ ರಾಜ್ ಅರಸ್, ಜಿಲ್ಲಾ ಸಲಹೆಗಾರರು, ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮ, ರವಿರಾಜ್ ಜಿ ಕೆ, ಸಮಾಜ ಕಾರ್ಯಕರ್ತರು ತಾಲೂಕು ಆರೋಗ್ಯ ಅಧಿಕಾರಿಗಳ ಕಚೇರಿಯಿಂದ ಆನಂದಮೂರ್ತಿ ಹಿರಿಯ ಆರೋಗ್ಯ ನಿರೀಕ್ಷಕರು, ಹೊಳೆ ಹೊನ್ನೂರು ಸಮುದಾಯ ಆರೋಗ್ಯ ಕೇಂದ್ರದ ವ್ಯಾಪ್ತಿಯ ಆರೋಗ್ಯ ನಿರೀಕ್ಷಣಾಧಿಕಾರಿಗಳು, ಆರೋಗ್ಯ ಇಲಾಖೆ ಹಾಗೂ ಪೊಲೀಸ್ ಇಲಾಖೆ ಸಿಬ್ಬಂದಿಗಳು ಭಾಗವಹಿಸಿದ್ದರು.
ಈ ಸಂದರ್ಭದಲ್ಲಿ ತಂಬಾಕು ಮಾರಾಟಗಾರರಿಗೆ ಹಾಗೂ ಸಾರ್ವಜನಿಕರಿಗೆ ತಂಬಾಕು ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳು ಹಾಗೂ COTPA ಕಾಯ್ದೆ ಕುರಿತು ಮಾಹಿತಿ ನೀಡಲಾಯಿತು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post