ಕಲ್ಪ ಮೀಡಿಯಾ ಹೌಸ್ | ಕಾರ್ಕಳ |
ಇಲ್ಲಿನ ಕ್ರೈಸ್ಟ್‌ಕಿಂಗ್ #Christ King ಆಂಗ್ಲಮಾಧ್ಯಮ ಪ್ರೌಢಶಾಲೆಯ ಒಂಬತ್ತನೇ ತರಗತಿಯ ವಿದ್ಯಾರ್ಥಿನಿ ಶಗುನ್ ಎಸ್ ವರ್ಮ ಹೆಗ್ಡೆ ರಾಷ್ಟ್ರೀಯ ಸ್ಕೂಲ್ ಗೇಮ್ಸ್ ಫೆಡರೇಶನ್‌ನವರು ನಡೆಸುವ 15ರ ವಯೋಮಿತಿಯ ಬಾಲಕಿಯರ ವಿಭಾಗದ ರಾಷ್ಟ್ರೀಯ ವಾಲಿಬಾಲ್ ಪಂದ್ಯಾಟದ #Volleyball Tournament ಕರ್ನಾಟಕ ತಂಡಕ್ಕೆ ಆಯ್ಕೆಯಾಗಿದ್ದಾಳೆ.
ಕರ್ನಾಟಕದ ಎಲ್ಲಾ ಜಿಲ್ಲೆಗಳ ಆಟಗಾರರು ಭಾಗವಹಿಸಿದ್ದು ಅದರಲ್ಲಿ ಎಂಟು ಆಟಗಾರರು ಆಯ್ಕೆಯಾಗಿದ್ದರು. ಇದರಲ್ಲಿ ಉಡುಪಿ ಜಿಲ್ಲೆಯಿಂದ ಏಕೈಕ ಆಟಗಾರಳಾಗಿ ಶಗುನ್ ಆಯ್ಕೆಯಾಗಿದ್ದಾಳೆ.
ಭಾರತವನ್ನು ಪ್ರತಿನಿಧಿಸುವ ರಾಷ್ಟೀಯ ತಂಡದ ಆಯ್ಕೆ ಪ್ರಕ್ರಿಯೆ ಮಹಾರಾಷ್ಟ್ರದ ಪುಣೆಯಲ್ಲ್ಲಿ ನಡೆಯಲಿದ್ದು ಇಲ್ಲಿ ಆಯ್ಕೆಯಾದ ತಂಡವು ಮುಂದಿನ ಅಂತರಾಷ್ಟ್ರೀಯ ಪಂದ್ಯವನ್ನು ಚೀನಾದ ಶಾಂಗ್ಲೋದಲ್ಲಿ ಆಡಲಿದೆ. ಈಕೆ ಕಲ್ಲೊಟ್ಟೆ ನಿವಾಸಿ ಸಂದೇಶ್ ವರ್ಮಾ ಹಾಗೂ ಶ್ರುತಿರಾಜ್ ದಂಪತಿಗಳ ಪುತ್ರಿಯಾಗಿದ್ದಾಳೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post