No Result
View All Result
Kotak Mahindra Bank Announces Results
English Articles

Kotak Mahindra Bank Announces Results

by ಕಲ್ಪ ನ್ಯೂಸ್
May 4, 2026
0

Kalpa Media House  |  Bengaluru  | The Board of Directors of Kotak Mahindra Bank (“the Bank”) approved the audited standalone...

Read moreDetails
Landmark Heart Surgery in Davanagere | SS Narayana hospital completes first modified Bentall procedure

Landmark Heart Surgery in Davanagere | SS Narayana hospital completes first modified Bentall procedure

May 2, 2026
KRCS Shikaripura Achieves 100% Result in CBSE Class X Board Exams

KRCS Shikaripura Achieves 100% Result in CBSE Class X Board Exams

April 16, 2026
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
  • Advertise With Us
  • Grievances
  • About Us
  • Contact Us
Friday, May 8, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ ಸೊರಬ

ಸೊರಬ | ಧರ್ಮಸ್ಥಳ ಕ್ಷೇತ್ರದ ಅಪಪ್ರಚಾರ: ಬಿಜೆಪಿ ಖಂಡನೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
August 25, 2025
in ಸೊರಬ
0
ಸೊರಬ | ಧರ್ಮಸ್ಥಳ ಕ್ಷೇತ್ರದ ಅಪಪ್ರಚಾರ: ಬಿಜೆಪಿ ಖಂಡನೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಸೊರಬ  |

ಹಿಂದೂಗಳ ಧಾರ್ಮಿಕ ಶ್ರದ್ಧಾಕೇಂದ್ರ ಧರ್ಮಸ್ಥಳ ಕ್ಷೇತ್ರದ #Shri Kshethra Dharmasthala ಬಗ್ಗೆ ಅಪಪ್ರಚಾರ ಮಾಡುವುದನ್ನು ಖಂಡಿಸಿ ಬಿಜೆಪಿ ತಾಲೂಕು ಘಟಕ ಹಾಗೂ ಪುಣ್ಯಕ್ಷೇತ್ರ ಸಂರಕ್ಷಣಾ ಸಮಿತಿ ವತಿಯಿಂದ ಪಟ್ಟಣದಲ್ಲಿ ಶನಿವಾರ ಬೃಹತ್ ಪ್ರತಿಭಟನೆ ನಡೆಸಿ, ಖಾಸಗಿ ಬಸ್ ನಿಲ್ದಾಣದ ಆವರಣದಲ್ಲಿ ಬಹಿರಂಗ ಸಭೆ ನಡೆಸಲಾಯಿತು.

ವಿಧಾನ ಪರಿಷತ್ ಸದಸ್ಯ ಡಾ. ಧನಂಜಯ ಸರ್ಜಿ #Dr. Dhananjaya Sarji ಮಾತನಾಡಿ, ಶತಮಾನಗಳಿಂದಲೂ ಹಿಂದೂ ಧಾರ್ಮಿಕ ಕೇಂದ್ರಗಳ ಮೇಲೆ ದಾಳಿಗಳು ನಡೆಯುತ್ತಲೇ ಇದೆ. ಸುಮಾರು 30 ಸಾವಿರ ದೇಗುಲಗಳನ್ನು ನಾಶ ಮಾಡಲಾಗಿದೆ. ಕರಾವಳಿ ಭಾಗದಲ್ಲಿ ಹಿಂದುತ್ವ ಗಟ್ಟಿಯಾಗಿದ್ದು, ಇದನ್ನು ಒಡೆಯುವ ಹುನ್ನಾರದಿಂದ ಷಡ್ಯಂತ್ರಗಳನ್ನು ರೂಪಿಸಲಾಗುತ್ತಿದೆ. ಧರ್ಮಸ್ಥಳ ಕ್ಷೇತ್ರವು ಎಲ್ಲಾ ಜಾತಿ ಜನಾಂಗದವರಿಗೆ ಅನ್ನದಾನ, ವಿದ್ಯಾದಾನ, ಆರೋಗ್ಯ ದಾನದಂತ ವಿವಿಧ ಕಾರ್ಯಕ್ರಮಗಳನ್ನು ನೀಡುತ್ತಾ ಸಮಾಜಮುಖಿಯಾಗಿದೆ. ಇದನ್ನು ಸಹಿಸದವರು ಶ್ರೀ ಕ್ಷೇತ್ರಕ್ಕೆ ಕಳಂಕ ತರುವ ವಿಫಲ ಯತ್ನ ನಡೆಸುತ್ತಿದ್ದಾರೆ ಎಂದು ಆರೋಪಿಸಿದರು.
ಧರ್ಮಸ್ಥಳ ಕ್ಷೇತ್ರ ನ್ಯಾಯ, ಧರ್ಮ, ನಂಬಿಕೆಯ ಶ್ರದ್ಧಾಕೇಂದ್ರವಾಗಿದೆ. ಸುಮಾರು 800 ವರ್ಷಗಳ ಇತಿಹಾಸವಿದ್ದು, 21 ತಲೆಮಾರಿನವರು ಶ್ರೀ ಕ್ಷೇತ್ರವನ್ನು ಮುನ್ನೆಡೆಸಿಕೊಂಡು ಬರುತ್ತಿದ್ದಾರೆ. ಆದಾಗ್ಯೂ ಇತ್ತೀಚಿನ ದಿನಗಳಲ್ಲಿ ಪಟ್ಟಭದ್ರ ಹಿತಾಸಕ್ತಿಗಳು ಹಾಗೂ ಹಿಂದೂ ವಿರೋಧಿ ಶಕ್ತಿಗಳು ಸಂಘಟಿತವಾಗಿ ಅಪಪ್ರಚಾರ ನಡೆಸುತ್ತಿದ್ದು, ಧರ್ಮಸ್ಥಳದ ಗೌರವ ಹಾಗೂ ಘನತೆಗೆ ಧಕ್ಕೆ ತರುವಂತ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ಮುಸುಕುದಾರಿಯನ್ನು ಮೊದಲು ಬಂಧಿಸಿ ಮಂಪರು ಪರೀಕ್ಷೆಗೆ ಒಳಪಡಿಸಬೇಕು. ಈತನಿಗೆ ಕುಮ್ಮಕ್ಕು ನೀಡಿದವರನ್ನು ಬಯಲು ಮಾಡಬೇಕು. ಸಮಾಜದ ಸ್ವಾಸ್ಥ್ಯ ಕೆಡೆಸುತ್ತಿರುವ ಹಾಗೂ ಊಹಾಪೂಹಗಳ ಮುಖೇನ ಗೊಂದಲ ಸೃಷ್ಠಿಸಿ ಶ್ರೀ ಕ್ಷೇತ್ರಕ್ಕೆ ಕಳಂಕ ತರಲು ಯತ್ನಿಸುತ್ತಿರುವವರ ವಿರುದ್ಧ ಮೊಕದ್ದಮೆ ದಾಖಲಿಸಬೇಕು. ಪ್ರಕರಣವನ್ನು ಸಿಬಿಐ ತನಿಖೆಗೆ ಒಳಪಡಿಸಬೇಕು. ಧರ್ಮಸ್ಥಳದ ವಿರುದ್ಧ ಅಪಪ್ರಚಾರದಲ್ಲಿ ತೊಡಗುವವರಿಗೆ ವಿದೇಶ ಹಣ ಬರುತ್ತಿರುವ ಕುರಿತು ಅನುಮಾನವಿದೆ. ಈ ನಿಟ್ಟಿನಲ್ಲಿ ಇಡಿ ತನಿಖೆಗೆ ವಹಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದ ಅವರು, ಸೌಜನ್ಯ ಹತ್ಯೆ ಪ್ರಕರಣದಲ್ಲಿ ನ್ಯಾಯ ದೊರೆಯಲಿ, ಪ್ರಕರಣವನ್ನು ಸುಪ್ರಿಂ ಕೋರ್ಟ್ ಗೆ ವಹಿಸಲಿ ಎಂದರು.

ಪುಣ್ಯಕ್ಷೇತ್ರ ಸಂರಕ್ಷಣಾ ಸಮಿತಿ ತಾಲೂಕು ಸಂಚಾಲಕ ಹಾಗೂ ಬಿಜೆಪಿ ಮುಖಂಡ ಡಾ. ಎಚ್.ಇ. ಜ್ಞಾನೇಶ್ ಮಾತನಾಡಿ, ಅನೇಕ ದಾಳಿಗಳ ನಡುವೆಯೂ ಸನಾತನ ಹಿಂದೂ ಧರ್ಮವನ್ನು ನಾಶ ಮಾಡಲು ಯಾರಿಂದಲೂ ಸಾಧ್ಯವಾಗಲಿಲ್ಲ. ಆದರೆ, ಕುತಂತ್ರಿಗಳು ಧಾರ್ಮಿಕ ಶ್ರದ್ಧಾಕೇಂದ್ರಗಳನ್ನು ಗುರಿಯಾಗಿಸಿಕೊಂಡು ಹಿಂದೂಗಳಲ್ಲಿ ಭಿನ್ನತೆ ಉಂಟು ಮಾಡುವ ಕೆಲಸದಲ್ಲಿ ತೊಡಗಿದ್ದಾರೆ. ಶ್ರೀ ಮಂಜುನಾಥನ ಪಾವಿತ್ರ್ಯಕ್ಕೆ ಧಕ್ಕೆ ತರುವ ದುಷ್ಕೃತ್ಯ ಎಸಗಿದ್ದಾರೆ. ದೈವ ಶಕ್ತಿಯ ವಿರುದ್ಧ ಹೊರಟವರಿಗೆ ತಕ್ಕ ಶಾಸ್ತಿಯಾಗುತ್ತದೆ. ಘಟನೆಯಿಂದ ಹಾಗೂ ನಡೆಯುತ್ತಿರುವ ಉತ್ಕನನದಿಂದಾಗಿ ಶ್ರೀ ಕ್ಷೇತ್ರದ ಬಗೆಗಿನ ಗೌರವ ಮತ್ತಷ್ಟು ಹೆಚ್ಚಾಗಿದೆ. ಘಜನಿ ಸಂತತಿಯವರಿಗೆ ವಿಚಲಿತರಾಗುವ ಅವಶ್ಯಕತೆ ಇಲ್ಲ. ಹಿಂದೂ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವ ಕೆಲಸಕ್ಕೆ ಕೈ ಹಾಕುವ ಕುತಂತ್ರಿಗಳ ಷಡ್ಯಂತ್ರಗಳಿಗೆ ಒಳಗಾಗದೇ ಹಿಂದೂ ಸಮಾಜ ಒಗ್ಗಟ್ಟಾಗಿ ಎಲ್ಲವನ್ನು ಎದುರಿಸಬೇಕು ಎಂದರು.
ಶ್ರೀ ರಂಗನಾಥ ದೇವಸ್ಥಾನ ಆವರಣದಿಂದ ಮುಖ್ಯರಸ್ತೆ ಮಾರ್ಗವಾಗಿ ಖಾಸಗಿ ಬಸ್ ನಿಲ್ದಾಣದ ವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು.

ಪ್ರತಿಭಟನೆಯಲ್ಲಿ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹರಿಕೃಷ್ಣ, ತಾಲೂಕು ಅಧ್ಯಕ್ಷ ಪ್ರಕಾಶ್ ಅಗಸನಹಳ್ಳಿ, ಪ್ರಧಾನ ಕಾರ್ಯದರ್ಶಿಗಳಾದ ಸುರೇಶ್ ಉದ್ರಿ, ಜಾನಕಪ್ಪ ಒಡೆಯರ್ ಯಲಸಿ, ಮಹಿಳಾ ಘಟಕದ ಅಧ್ಯಕ್ಷೆ ಹೊಳೆಯಮ್ಮ ಚನ್ನಪಟ್ಟಣ, ಪ್ರಮುಖರಾದ ಪಾಣಿ ರಾಜಪ್ಪ, ಪ್ರಕಾಶ್ ತಲಕಾಲಕೊಪ್ಪ, ದೇವೇಂದ್ರಪ್ಪ ಚನ್ನಾಪುರ, ಈಶ್ವರ ಚನ್ನಪಟ್ಟಣ, ಗುರುಪ್ರಸನ್ನಗೌಡ ಬಾಸೂರು, ವಿಜೇಂದ್ರಗೌಡ ತಲಗುಂದ, ರಾಜು ಮಾವಿನಬಳ್ಳಿಕೊಪ್ಪ, ಗೀತಾ ಮಲ್ಲಿಕಾರ್ಜುನ್, ಸುಧಾ ಶಿವಪ್ರಸಾದ್, ಉಮೇಶ ಉಡುಗಣಿ, ಎಂ.ಕೆ. ಯೋಗೇಶ್, ವೈ.ಜಿ. ಗುರುಮೂರ್ತಿ, ವಿನಯ ಶೇರ್ವಿ, ಆಶೀಕ್ ನಾಗಪ್ಪ, ಸಂಜೀವ ಆಚಾರ್, ಶ್ರೀಧರ್ ಭಂಡಾರಿ, ಮೋಹನ್ ಹಿರೇಶಕುನ ಸೇರಿದಂತೆ ಇತರರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2025/08/VID-20250820-WA0058.mp4
http://kalpa.news/wp-content/uploads/2024/04/VID-20240426-WA0008.mp4

Tags: Dr. Dhananjaya SarjiKannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaShimogaShivamoggaNewsShri Kshethra DharmasthalaSorabaಡಾ. ಧನಂಜಯ ಸರ್ಜಿಧರ್ಮಸ್ಥಳ ಕ್ಷೇತ್ರಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್ಸೊರಬ
Share196Tweet123Send
Previous Post

ಕ್ಲಸ್ಟರ್ ಮಟ್ಟದ ಕ್ರೀಡಾಕೂಟ | ಮೈತ್ರಿ ಶಾಲೆಯ ವಿದ್ಯಾರ್ಥಿಗಳಿಗೆ ಪ್ರಶಸ್ತಿ

Next Post

ಟೇಬಲ್ ಟೆನ್ನಿಸ್‌ ಪಂದ್ಯಾವಳಿ | ಕ್ರೈಸ್ಟ್‌ಕಿಂಗ್ ಪ್ರೌಢಶಾಲೆಯ ಐಶ್ವರ್ಯ ರಾಜ್ಯಮಟ್ಟಕ್ಕೆ ಆಯ್ಕೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಟೇಬಲ್ ಟೆನ್ನಿಸ್‌ ಪಂದ್ಯಾವಳಿ | ಕ್ರೈಸ್ಟ್‌ಕಿಂಗ್ ಪ್ರೌಢಶಾಲೆಯ ಐಶ್ವರ್ಯ ರಾಜ್ಯಮಟ್ಟಕ್ಕೆ ಆಯ್ಕೆ

ಟೇಬಲ್ ಟೆನ್ನಿಸ್‌ ಪಂದ್ಯಾವಳಿ | ಕ್ರೈಸ್ಟ್‌ಕಿಂಗ್ ಪ್ರೌಢಶಾಲೆಯ ಐಶ್ವರ್ಯ ರಾಜ್ಯಮಟ್ಟಕ್ಕೆ ಆಯ್ಕೆ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಜಿಲ್ಲೆಯ ಪ್ರವಾಸೋದ್ಯಮ ಅಭಿವೃದ್ಧಿಗೆ ಬದ್ಧ: ಸಂಸದ ರಾಘವೇಂದ್ರ

ಜಿಲ್ಲೆಯ ಪ್ರವಾಸೋದ್ಯಮ ಅಭಿವೃದ್ಧಿಗೆ ಬದ್ಧ: ಸಂಸದ ರಾಘವೇಂದ್ರ

May 8, 2026
ಕೋಣಂದೂರು ಲಿಂಗಪ್ಪ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ

ಕೋಣಂದೂರು ಲಿಂಗಪ್ಪ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ

May 8, 2026
ಸಮಾಜದ ಸ್ವಾಸ್ತ್ಯ ಕಾಪಾಡುವಲ್ಲಿ ವೈದ್ಯರ ಸೇವೆ ಅನನ್ಯ: ಸಚಿವ ಮಧು ಬಂಗಾರಪ್ಪ

ಸಮಾಜದ ಸ್ವಾಸ್ತ್ಯ ಕಾಪಾಡುವಲ್ಲಿ ವೈದ್ಯರ ಸೇವೆ ಅನನ್ಯ: ಸಚಿವ ಮಧು ಬಂಗಾರಪ್ಪ

May 8, 2026
SIR & ಪಶ್ಚಿಮ ಬಂಗಾಳ ಚುನಾವಣಾ ಫಲಿತಾಂಶದ ಸತ್ಯ | ನಿಜಕ್ಕೂ ಐತಿಹಾಸಿಕ ತೀರ್ಪುಗೆ ಇವೇ ಕಾರಣ

SIR & ಪಶ್ಚಿಮ ಬಂಗಾಳ ಚುನಾವಣಾ ಫಲಿತಾಂಶದ ಸತ್ಯ | ನಿಜಕ್ಕೂ ಐತಿಹಾಸಿಕ ತೀರ್ಪುಗೆ ಇವೇ ಕಾರಣ

May 8, 2026
ರಾಷ್ಟ್ರ ಮಟ್ಟದ ಜೆಇಇ ಪರೀಕ್ಷೆ | ಕ್ರೈಸ್ಟ್‌ಕಿಂಗ್ ವಿದ್ಯಾರ್ಥಿ ಸಹನ್ ಕುಮಾರ್‌ಗೆ ರ್‍ಯಾಂಕ್

ರಾಷ್ಟ್ರ ಮಟ್ಟದ ಜೆಇಇ ಪರೀಕ್ಷೆ | ಕ್ರೈಸ್ಟ್‌ಕಿಂಗ್ ವಿದ್ಯಾರ್ಥಿ ಸಹನ್ ಕುಮಾರ್‌ಗೆ ರ್‍ಯಾಂಕ್

May 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL