ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಕೇಂದ್ರ ಸರ್ಕಾರವು #Central Government ಆನ್‌ಲೈನ್ ಬೆಟ್ಟಿಂಗ್ ಹಾಗೂ ಗೇಮಿಂಗ್ ಆ್ಯಪ್‌ಗಳನ್ನು #Online Betting and Gaming App ನಿಷೇಧಿಸಿರುವ ಹಿನ್ನೆಲೆಯಲ್ಲಿ, ರಾಜ್ಯದ ವಿಧಾನ ಪರಿಷತ್ ಶಾಸಕರು ಹಾಗೂ ರಾಜ್ಯ ಬಿಜೆಪಿ ಕಾರ್ಯದರ್ಶಿಗಳಾದ ಡಿ.ಎಸ್. ಅರುಣ್ #D S Arun ತಮ್ಮ ಸಂಪೂರ್ಣ ಬೆಂಬಲವನ್ನು ವ್ಯಕ್ತಪಡಿಸಿದ್ದಾರೆ.
ಡಿ.ಎಸ್.ಅರುಣ್ ರವರು ವಿಧಾನ ಪರಿಷತ್ತಿಗೆ ಆಯ್ಕೆಯಾದ ತಕ್ಷಣದ ಮೊದಲ ಅಧಿವೇಶನದಲ್ಲಿ ಹಾಗೂ ಬಹಳಷ್ಟು ಬಾರಿ ಈ ವಿಷಯವನ್ನು ರಾಜ್ಯದ ಗೃಹ ಸಚಿವರಲ್ಲಿ ಪ್ರಸ್ತಾಪಿಸಿ, ಆನ್‌ಲೈನ್ ಬೆಟ್ಟಿಂಗ್ ಯುವಕರ ಜೀವನದಲ್ಲಿ ಅಪಾಯಕಾರಿ ಪರಿಣಾಮ ಬೀರುತ್ತಿದೆ. ಕುಟುಂಬಗಳ ಆರ್ಥಿಕ ಹಿತಾಸಕ್ತಿ ಅಸ್ತವ್ಯಸ್ತವಾಗುತ್ತಿದೆ. ಇಂತಹ ದುಷ್ಪರಿಣಾಮಗಳಿಂದ ಸಮಾಜವನ್ನು ಕಾಪಾಡುವುದು ಸರ್ಕಾರದ ಹೊಣೆಗಾರಿಕೆ ಎಂದು ಅಭಿಪ್ರಾಯಪಟ್ಟರು.

ಆನ್‌ಲೈನ್ ಬೆಟ್ಟಿಂಗ್, ಗೇಮಿಂಗ್ ಹಾಗೂ ಇತರ ಮೋಸಮಯ ಆಕರ್ಷಣೆಗಳಿಂದ ದೂರವಿದ್ದು, ಶಿಕ್ಷಣ, ಕೌಶಲ್ಯ ಮತ್ತು ಸಕಾರಾತ್ಮಕ ಚಟುವಟಿಕೆಗಳತ್ತ ಗಮನ ಹರಿಸುವುದೇ ಯುವಕರ ಭವಿಷ್ಯಕ್ಕೆ ಶ್ರೇಯಸ್ಕರ ಎಂದು ಯುವಕರಿಗೆ ಮಾನ್ಯ ಶಾಸಕರು ಮನವಿ ಮಾಡಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post