ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಶಿವಮೊಗ್ಗ ಗ್ರಾಮಾಂತರ ಪೋಲಿಸ್ ಠಾಣೆಯ ಗಣಪತಿಯ ರಾಜಬೀದಿ ಉತ್ಸವ ವಿಜೃಂಭಣೆಯಿಂದ ನಡೆಯಿತು.
ಗ್ರಾಮಾಂತರ ಠಾಣೆ ಆವರಣದಲ್ಲಿ ಪ್ರತಿಷ್ಠಾಪಿಸಲಾಗಿದ್ದ ಗಣಪತಿ ಮೂರ್ತಿಯನ್ನು ಡಿವೈಎಸ್‌ಪಿ ಸಂಜೀವ್ ಕುಮಾರ್ ನೇತೃತ್ವದಲ್ಲಿ ವಿಶೇಷ ಪೂಜಾ ಕೈಂಕರ್ಯ ನಡೆಸಲಾಯಿತು. ಬಳಿಕ ಠಾಣೆಯ ಸಿಬ್ಬಂದಿ ರಾಜಬೀದಿ ಉತ್ಸವದಲ್ಲಿ ಸಂಭ್ರಮದಿಂದ ಭಾಗಿಯಾಗಿ ಕುಣಿದು ಕುಪ್ಪಳಿಸಿದರು.
ಸಾರ್ವಜನಿಕ ವಲಯದಲ್ಲಿ ಪೋಲಿಸರೆಂದರೆ ಭಯ.ಮೂಗು ಮುರಿಯುವ ಪರಿಸ್ಥಿತಿ ನಡುವೆ ಸಾರ್ವಜನಿಕ ಸ್ನೇಹಿಯಾಗಿ ಉತ್ತಮ ಸಮಾಜ ನಿರ್ಮಾಣ ಮಾಡಲು ಶ್ರಮಿಸುತ್ತಿರುವುದು ಪ್ರಶಂಸನೀಯ. ಇದರ ಮುಂದುವರೆದ ಭಾಗವಾಗಿ ಪೋಲಿಸರು ಗಣಪತಿ ಪ್ರತಿಷ್ಟಾಪನೆ ಮಾಡುವ ಮೂಲಕ ನಾವು ನಿಮ್ಮಂತೆ ಎಂದು ತೋರಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post