ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಇಲ್ಲಿನ ಲಕ್ಷ್ಮೀ ಟಾಕೀಸ್ ಬಳಿಯ 100 ಅಡಿ ರಸ್ತೆಗೆ ಅಡ್ಡಲಾಗಿ ಬೃಹತ್ ಮರವೊಂದು ಧರೆಗುರುಳಿದ್ದು, ಅದೃಷ್ಠವಷಾತ್ ಯಾವುದೇ ಅನಾಹುತ ಸಂಭವಿಸಿಲ್ಲ.
ಲಕ್ಷ್ಮೀ ಟಾಕೀಸ್ ಸಮೀಪ ಫ್ರೀಡಂ ಪಾರ್ಕ್ ಕಾಂಪೌಂಡ್ ಪಕ್ಕದಲ್ಲಿ ಇದ್ದ ಮರ ಧರೆಗುರುಳಿದೆ. ಗಾಳಿ, ಗಾಳಿಯಿಂದಾಗಿ ಮರ ಉರುಳಿದೆ.
ಟ್ರಾಫಿಕ್ ಸಿಗ್ನಲ್ ಬಿಟ್ಟ ಕೆಲವೇ ಕ್ಷಣದಲ್ಲಿ ಮರ ಉರುಳಿದೆ. ಹಾಗಾಗಿ ರಸ್ತೆಯಲ್ಲಿ ವಾಹನಗಳು ಇರಲಿಲ್ಲ. ದೊಡ್ಡ ಅನಾಹುತ ತಪ್ಪಿದಂತಾಗಿದೆ. ಮರ ತೆರವು ಕಾರ್ಯಾಚರಣೆ ನಂತರ ಸಂಚಾರ ಸುಗಮವಾಗಿ, ಸಾಗಿದೆ.
ಮರ ಉರುಳಿದ್ದರಿಂದ ರಸ್ತೆಯ ಒಂದು ಬದಿಯಲ್ಲಿ ವಾಹನ ಸಂಚಾರವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿತ್ತು.
ಮತ್ತೊಂದು ಬದಿಯಲ್ಲಿ ಎರಡು ದಿಕ್ಕಿನಲ್ಲಿ ವಾಹನಗಳು ಸಂಚರಿಸಿದವು. ಲಕ್ಷ್ಮೀ ಟಾಕೀಸ್ ಸಮೀಪ ಸಂಚಾರ ದಟ್ಟಣೆ ಉಂಟಾಗಿತ್ತು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news




















