No Result
View All Result
Yogada Satsang Society brings out Kannada version on Kriya Yoga today
English Articles

Yogada Satsang Society brings out Kannada version on Kriya Yoga today

by ಕಲ್ಪ ನ್ಯೂಸ್
March 25, 2026
0

Kalpa Media House  |  Dharwad  | Yogada Satsang Society of India has brought out the Kannada version of Kriya Yoga...

Read moreDetails
Sagara Engulfed In The Ocean of Music

Sagara Engulfed In The Ocean of Music

March 23, 2026
MAHE Introduces ‘MAGIC’ to Power AI-Driven Academic and Administrative Transformation

MAHE Introduces ‘MAGIC’ to Power AI-Driven Academic and Administrative Transformation

March 23, 2026
Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

March 18, 2026
Bengaluru Gets a World-Class Electronics Co-Innovation Hub as Henkel Launches Advanced Application Center

Bengaluru Gets a World-Class Electronics Co-Innovation Hub as Henkel Launches Advanced Application Center

March 17, 2026
  • Advertise With Us
  • Grievances
  • About Us
  • Contact Us
Wednesday, March 25, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಡಿಸಿಸಿ ಬ್ಯಾಂಕಿನ ಇತಿಹಾಸದಲ್ಲಿಯೇ ಅತೀ ಹೆಚ್ಚು ಲಾಭ: ಆರ್.ಎಂ. ಮಂಜುನಾಥಗೌಡ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
September 9, 2025
in ಶಿವಮೊಗ್ಗ
0
ಡಿಸಿಸಿ ಬ್ಯಾಂಕಿನ ಇತಿಹಾಸದಲ್ಲಿಯೇ ಅತೀ ಹೆಚ್ಚು ಲಾಭ: ಆರ್.ಎಂ. ಮಂಜುನಾಥಗೌಡ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಡಿಸಿಸಿ ಬ್ಯಾಂಕಿನ #DCC Bank ಇತಿಹಾಸದಲ್ಲಿಯೇ 2024-25ನೇ ಸಾಲಿನಲ್ಲಿ 36.75 ಕೋಟಿ ರೂ. ಲಾಭಗಳಿಸಿದೆ ಮುಂದಿನ ಬಾರಿ 45 ಕೋಟಿ ರೂ. ಲಾಭ ಮಾಡುವ ಯೋಜನೆ ಹೊಂದಲಾಗಿದೆ ಎಂದು ಡಿಸಿಸಿ ಬ್ಯಾಂಕಿನ ಅಧ್ಯಕ್ಷ ಆರ್.ಎಂ. ಮಂಜುನಾಥಗೌಡ #R M Manjunath Gowda ಹೇಳಿದರು.

ಅವರು ಇಂದು ಡಿಸಿಸಿ ಬ್ಯಾಂಕಿನ ಸಭಾಂಗಣದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಬ್ಯಾಂಕ್ ಸ್ಥಾಪನೆಗೊಂಡು 72 ವರ್ಷ ಕಳೆದಿದ್ದು, 73ನೇ ವರ್ಷಕ್ಕೆ ಕಾಲಿಟ್ಟಿದ್ದೇವೆ. ಬ್ಯಾಂಕಿನ ಇತಿಹಾಸದಲ್ಲಿಯೇ ಅತೀ ಹೆಚ್ಚು ಲಾಭ ಗಳಿಸಿದ ಕೀರ್ತಿ ನಮಗಿದೆ. ಇದನ್ನು ಮುಂದಿನ ವರ್ಷಗಳಲ್ಲಿ ಮತ್ತಷ್ಟು ಹೆಚ್ಚಿಸಲಾಗುವುದು. ಇದರ ಜೊತೆಗೆ ಅಪೆಕ್ಸ್ ಬ್ಯಾಂಕ್ ಪ್ರಧಾನ ಮಾಡುವ ಉತ್ತಮ ಡಿಸಿಸಿ ಬ್ಯಾಂಕ್ ಪ್ರಶಸ್ತಿಯನ್ನು ನಾವು ಪಡೆದುಕೊಂಡಿದ್ದೇವೆ. ಈಗಾಗಲೇ ಈ ಪ್ರಶಸ್ತಿಯನ್ನು ಆಗಸ್ಟ್ ತಿಂಗಳಲ್ಲಿಯೇ ನಡೆದ ವಾರ್ಷಿಕ ಮಹಾಸಭೆಯಲ್ಲಿ ನೀಡಲಾಗಿದೆ. ಇದಕ್ಕೆ ಬ್ಯಾಂಕಿನ ಎಲ್ಲಾ ಸದಸ್ಯರ, ಗ್ರಾಹಕರೇ ಕಾರಣರಾಗಿದ್ದಾರೆ ಎಂದರು.
ಬ್ಯಾಂಕ್ ಪ್ರಸಕ್ತ ಸಾಲಿನಲ್ಲಿ 1690.17 ಕೋಟಿ ಠೇವಣಿ ಸಂಗ್ರಹಿಸಿದೆ. ಮುಂದಿನ ಸಾಲಿಗೆ 2000 ಕೋಟಿ ಸಂಗ್ರಹಿಸುವ ಗುರಿ ಹೊಂದಲಾಗಿದೆ. ಒಟ್ಟಾರೆ 3221.8 ಕೋಟಿ ವಾರ್ಷಿಕ ವ್ಯವಹಾರ ನಡೆದಿದೆ. ಇದು ನಬಾರ್ಡಿನ ಪರಿವೀಕ್ಷಣಾ ವರದಿಯಲ್ಲಿಯೇ `ಎ’ದರ್ಜೆ ಪಡೆದಂತ್ತಾಗಿದೆ. ಒಟ್ಟು 26,71,156 ಗ್ರಾಹಕರಿದ್ದು 1,41,454 ಠೇವಣಿದಾರರಿದ್ದಾರೆ. ಅದರಲ್ಲಿ 12 ಲಕ್ಷಕ್ಕೂ ಹೆಚ್ಚು ಗ್ರಾಹಕರು ಸಾಲ ಪಡೆದಿದ್ದಾರೆ ಎಂದರು.

ನಬಾರ್ಡಿನ ಪುನರ್ಧನ ಸೌಲಭ್ಯ ಈಗಾಗಲೇ ಸಾಕಷ್ಟು ಕಡಿತಗೊಂಡಿದೆ. ಕೇವಲ ಶೇ.10ರಷ್ಟು ಮಾತ್ರ ನೀಡಲಾಗುತ್ತಿದೆ. ಅದನ್ನೂ ನಿಲ್ಲಿಸಬಹುದಾಗಿದೆ. ಹಾಗಾಗಿ ಜಿಲ್ಲಾ ಬ್ಯಾಂಕುಗಳು ಸ್ವಯತ್ತತೆ ಕಾಪಾಡಿಕೊಳ್ಳುವುದು ಅನಿವಾರ್ಯವಾಗಿದೆ ಇದರ ಮಧ್ಯೆಯೂ ಕೂಡ 10,85,00 ರೈತರಿಗೆ 1206.60 ಕೋಟಿ ಬೆಳೆ ಸಾಲ ನೀಡಲಾಗಿದೆ. ರೈತರ ಸಾಲಕ್ಕೆ ಈಗ ಹೊಸದಾಗಿ ಯೋಜನೆಯೊಂದನ್ನು ರೂಪಿಸಿದ್ದು, 1 ಲಕ್ಷ ರೂ. ಸಾಲಕ್ಕೆ 720 ರೂ. ವಿಮೆ ಕಟ್ಟಬೇಕು. ಆಕಸ್ಮಾತ್ ಸಾಲ ಪಡೆದವರು ತೀರಿಹೋದರೆ ಈ ಸಾಲ ಕಟ್ಟುವ ಅವಶ್ಯಕತೆ ಇಲ್ಲ. ವಿಮೆ ಇಲ್ಲದಿದ್ದರೆ ಅವರ ಮನೆಯವರು ಕಟ್ಟಬೇಕಾಗುತ್ತಿತ್ತು. ಈ ವಿಮಾ ಯೋಜನೆ ರೈತರಿಗೆ ಅತ್ಯಂತ ಪ್ರಯೋಜನಕಾರಿಯಾಗಿದೆ ಎಂದರು.
ಕೃಷಿಯೇತರ ಸಾಲಗಳಿಂದ ಬ್ಯಾಂಕಿಗೆ ಹೆಚ್ಚು ಲಾಭವಾಗುತ್ತದೆ. ಈ ನಿಟ್ಟಿನಲ್ಲಿ ಬ್ಯಾಂಕಿನ ಶಾಖೆಗಳ ಮೂಲಕ 17,202 ವ್ಯಕ್ತಿಗಳಿಗೆ 771.12 ಕೋಟಿ ರೂ. ಸಾಲ ನೀಡಲಾಗಿದೆ. ಜಿಲ್ಲೆಯ ಒಟ್ಟು 542 ಹಾಲು ಉತ್ಪಾದಕರ ಸಂಘಗಳ ಖಾತೆಯನ್ನು ಬ್ಯಾಂಕಿನಲ್ಲಿ ತೆರೆಯಲಾಗಿದೆ. ಪಶುಸಂಗೋಪನೆಯ ಉದ್ದೇಶಕ್ಕಾಗಿ ಹಸು, ಎಮ್ಮೆಯನ್ನು ಕೊಳ್ಳಲು 80 ಸಾವಿರದಂತೆ ಎರಡು ಕಂತುಗಳಲ್ಲಿ 1.60 ಲಕ್ಷ ಸಾಲವನ್ನು ನೀಡಲಾಗುವುದು. ಇದು ಶೇ.3ರಷ್ಟು ಬಡ್ಡಿ ಇರುತ್ತದೆ ಎಂದರು.

ಆಧುನಿಕತೆಗೆ ತಕ್ಕಂತೆ ಬ್ಯಾಂಕಿನ ವ್ಯವಹಾರಗಳು ಕೂಡ ಬದಲಾವಣೆಯಾಗುತ್ತಿದ್ದು, ಇದೀಗ ರೈತರ ಹಾಗೂ ಗ್ರಾಹಕರ ಮನೆ ಬಾಗಿಲಿಗೆ ಬ್ಯಾಂಕಿಂಗ್ ಯೋಜನೆಯನ್ನು ಮುಟ್ಟಿಸಲಾಗುವುದು. ಇದಕ್ಕಾಗಿ ಮೊಬೈಲ್ ವ್ಯಾನ್‍ನಲ್ಲಿ ಎಟಿಎಂ ಬಳಸಲಾಗಿದೆ. ಈ ವ್ಯಾನ್ ಹಳ್ಳಿಗಳಲ್ಲಿ ಸಂಚರಿಸುತ್ತದೆ. ಒಂದು ವ್ಯಾನಿನ ಜೊತೆಗೆ ಈಗ ಮತ್ತೊಂದು ವ್ಯಾನನ್ನು ನೀಡಲಾಗುವುದು. ಇದರ ಜೊತೆಗೆ ಬ್ಯಾಂಕಿಂಗ್ ಮೊಬೈಲ್ ಆ್ಯಪನ್ನು ಬಿಡುಗಡೆ ಮಾಡಲಾಗುವುದು. ಇದರಿಂದ ಗ್ರಾಹಕರು ತಮ್ಮ ವ್ಯವಹಾರಗಳನ್ನು ಗೂಗಲ್ ಪೇ, ಫೋನ್ ಪೇ ಮೂಲಕ ಮಾಡಬಹುದಾಗಿದೆ. ಇದರ ಜೊತೆಗೆ ನೆಫ್ಟ್ ಮತ್ತು ಆರ್‍ಟಿಜಿಎಸ್ ವ್ಯವಹಾರಗಳನ್ನು ಕೂಡ ಮಾಡಬಹುದಾಗಿದೆ ಎಂದರು.
ಡಿಸಿಸಿ ಬ್ಯಾಂಕಿನಲ್ಲಿ ಪ್ರಸ್ತುತ 31 ಶಾಖೆಗಳಿವೆ. ಅದನ್ನು ಬರುವ ದಸರಾದಲ್ಲಿ 5 ಹೊಸ ಶಾಖೆಗಳನ್ನು ಬಾರಂದೂರು, ನಗರ, ತ್ಯಾಗರ್ತಿ, ತೀರ್ಥಹಳ್ಳಿ, ಗಾಜನೂರಿನಲ್ಲಿ ಆರಂಭಿಸಲಾಗುವುದು. ಒಟ್ಟು 50 ಶಾಖೆಗಳನ್ನು ವಿಸ್ತರಿಸಲಾಗುವುದು. ಈಗಾಗಲೇ 36 ಇದ್ದು ಇನ್ನೂ 14 ಶಾಖೆಗಳನ್ನು ಆರಂಭಿಸಲಾಗುವುದು ಎಂದರು.

ಸರ್ಕಾರದ ಏಳನೇ ವೇತನ ಆಯೋಗವನ್ನು ಮೊದಲಬಾರಿಗೆ ಡಿಸಿಸಿ ಬ್ಯಾಂಕಿನ ನೌಕರರಿಗೆ ಜಾರಿ ಮಾಡಲಾಗಿದೆ. ಹಾಗಾಗಿ ಸರ್ಕಾರದ ಉದ್ದೇಶವನ್ನು ಕೂಡ ನಾವು ಈಡೇರಿಸುತ್ತಿದ್ದೇವೆ. ಇದರ ಜೊತೆಗೆ ಸರ್ಕಾರದ ಷೇರುಗಳನ್ನು ಕೂಡ ವಾಪಾಸ್ಸು ಮಾಡಲಾಗುವುದು. ಸರ್ಕಾರದ ಹಸ್ತಕ್ಷೇಪ ಸಹಕಾರಿ ಕ್ಷೇತ್ರಕ್ಕೆ ಇರಬಾರದು ಎಂಬ ಉದ್ದೇಶ ನಮ್ಮದು ಎಂದರು.

ಬ್ಯಾಂಕಿನ ಪ್ರಸಕ್ತ ಸಾಲಿನ ವಾರ್ಷಿಕ ಮಹಾಸಭೆ ಸೆ.10ರಂದು ಬಂಜಾರ ಭವನದಲ್ಲಿ ನಡೆಯುತ್ತದೆ. ಈ ಸಂದರ್ಭದಲ್ಲಿ ಉತ್ತಮ ಸಹಕಾರ ಸಂಘಗಳನ್ನು ಸನ್ಮಾನಿಸಲಾಗುವುದು ಎಂದರು.

ಪತ್ರಿಕಾಗೋಷ್ಠಿಯಲ್ಲಿ ಬ್ಯಾಂಕಿನ ಉಪಾಧ್ಯಕ್ಷ ಎಸ್.ಕೆ. ಮರಿಯಪ್ಪ, ನಿರ್ದೇಶಕರುಗಳಾದ ಮಹಾಲಿಂಗಶಾಸ್ತ್ರೀ, ಜಿ.ಎನ್. ಸುಧೀರ್, ಬಸವರಾಜ್, ಕೆ.ಪಿ. ದುಗ್ಗಪ್ಪಗೌಡರು, ಚಂದ್ರಶೇಖರ್, ಪರಮೇಶ್ವರ್, ಹೆಚ್.ಎಸ್. ರವೀಂದ್ರ, ಕೆ.ಪಿ. ರುದ್ರೇಗೌಡ, ಎಂ.ಡಿ. ರಾಜಣ್ಣರೆಡ್ಡಿ ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news    

http://kalpa.news/wp-content/uploads/2025/09/Vedic-Maths-New.mp4
http://kalpa.news/wp-content/uploads/2024/04/VID-20240426-WA0008.mp4

 

Tags: DCC BankKannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaR.M. Manjunath GowdaShimogaShivamoggaNewsಆರ್.ಎಂ. ಮಂಜುನಾಥಗೌಡಡಿಸಿಸಿ ಬ್ಯಾಂಕ್ಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share196Tweet123Send
Previous Post

ಬೆಂಗಳೂರು | ಸಂಯೋಗ ಕಲಾ ಶಾಲೆಯ ಅರ್ಥಪೂರ್ಣ ವಾರ್ಷಿಕೋತ್ಸವ

Next Post

ಅಪ್ರಾಪ್ತೆಯೊಂದಿಗೆ ವಿವಾಹ | ಯುವಕನ ವಿರುದ್ಧ ಫೋಕ್ಸೋ ಪ್ರಕರಣ ದಾಖಲು

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಶಿವಮೊಗ್ಗ: ಸಹೋದರರ ಮೇಲೆ ಮಾರಾಕಸ್ತ್ರಗಳಿಂದ ಹಲ್ಲೆ

ಅಪ್ರಾಪ್ತೆಯೊಂದಿಗೆ ವಿವಾಹ | ಯುವಕನ ವಿರುದ್ಧ ಫೋಕ್ಸೋ ಪ್ರಕರಣ ದಾಖಲು

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಮಾ.26ರಂದು ಶಿವ ಸಂಕಲ್ಪ ಮಹಿಳಾ ಘಟಕದ ಉದ್ಘಾಟನೆ | ರಾಣಿ ಚೆನ್ನಮ್ಮಾಜಿ ಸ್ಮರಣೋತ್ಸವ

ಮಾ.26ರಂದು ಶಿವ ಸಂಕಲ್ಪ ಮಹಿಳಾ ಘಟಕದ ಉದ್ಘಾಟನೆ | ರಾಣಿ ಚೆನ್ನಮ್ಮಾಜಿ ಸ್ಮರಣೋತ್ಸವ

March 25, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

ಗುಡ್ ನ್ಯೂಸ್ | ಮಂಗಳೂರು-ಸೂರತ್ ವಿಶೇಷ ರೈಲು ಸೇವೆ ಖಾಯಂ: ರೈಲ್ವೆ ಇಲಾಖೆ ಆದೇಶ

March 25, 2026
ಶೈಕ್ಷಣಿಕ ಸಂಸ್ಥೆಗಳ ಭೂ ವಿಧೇಯಕ ಮಂಡನೆ | ಐತಿಹಾಸಿಕ ಮಸೂದೆಗೆ ಒಮ್ಮತದ ಅಂಗೀಕಾರ

ಶೈಕ್ಷಣಿಕ ಸಂಸ್ಥೆಗಳ ಭೂ ವಿಧೇಯಕ ಮಂಡನೆ | ಐತಿಹಾಸಿಕ ಮಸೂದೆಗೆ ಒಮ್ಮತದ ಅಂಗೀಕಾರ

March 25, 2026
ಐಪಿಎಲ್ ಸಂಭ್ರಮವಿರಲಿ, ಬದುಕು ಬೆಚ್ಚಿರಲಿ: ಒಂದು ಕಣ್ಣೀರಿನ ಎಚ್ಚರಿಕೆ

ಐಪಿಎಲ್ ಸಂಭ್ರಮವಿರಲಿ, ಬದುಕು ಬೆಚ್ಚಿರಲಿ: ಒಂದು ಕಣ್ಣೀರಿನ ಎಚ್ಚರಿಕೆ

March 25, 2026
ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರ ನಿಷ್ಕ್ರಿಯ, ಅಭಿವೃದ್ಧಿ ಶೂನ್ಯ: ಶಾಸಕ ಚನ್ನಬಸಪ್ಪ ವಾಗ್ದಾಳಿ

ಸಮಾಜ ವಿರೋಧಿ ಚಟುವಟಿಕೆಗಳನ್ನು ನಿಯಂತ್ರಿಸಲು ವಿಶೇಷ ಕಾರ್ಯಪಡೆ ರಚಿಸಲು ಶಾಸಕ ಚನ್ನಬಸಪ್ಪ ಒತ್ತಾಯ

March 25, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL