ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜು ಪ್ರಾಂಶುಪಾಲರು ಗ್ರಾಮಾಂತರ ಪ್ರದೇಶದಿಂದ ಬರುವ ವಿದ್ಯಾರ್ಥಿಗಳಿಗೆ ಸರ್ಕಾರದ ಸೌಲಭ್ಯಗಳನ್ನು ಬಳಸಿಕೊಳ್ಳಲು ಅವಕಾಶ ಕೊಡದೇ ಕಿರುಕುಳ ನೀಡುತ್ತಿದ್ದು, ಇದನ್ನು ಶಿವಮೊಗ್ಗ ನಗರ ಎನ್‌ಎಸ್‌ಯುಐ ತೀವ್ರವಾಗಿ ಖಂಡಿಸಿದೆ.
ಶಿವಮೊಗ್ಗ ತಾಲ್ಲೂಕು ಹಾಗೂ ಜಿಲ್ಲೆಯ ಗ್ರಾಮೀಣ ಪ್ರದೇಶದ ಹಲವಾರು ವಿದ್ಯಾರ್ಥಿಗಳು ಎಟಿಎನ್‌ಸಿಸಿ ಕಾಲೇಜಿನಲ್ಲಿ ಪ್ರವೇಶ ಪಡೆದಿದ್ದಾರೆ. ಈ ವಿದ್ಯಾರ್ಥಿಗಳು ಸರ್ಕಾರದ ಬಸ್ ಪಾಸ್ ಸೌಲಭ್ಯ ಪಡೆದುಕೊಳ್ಳಲು ಪ್ರಾಂಶುಪಾಲರ ಸಹಿ ಅಗತ್ಯವಿರುತ್ತದೆ. ವಿದ್ಯಾರ್ಥಿಗಳು ಬಸ್ ಪಾಸ್‍ಗಾಗಿ ಪ್ರಾಂಶುಪಾಲರ ಬಳಿ ಹೋದಾಗ ಅವರು ನಿಗಧಿತ ನಮೂನೆಗೆ ಸಹಿ ಹಾಕದೇ ಸತಾಯಿಸುತ್ತಿದ್ದಾರೆ. ಅಲ್ಲದೇ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳನ್ನು ನಿಂದಿಸುವುದು, ಹಂಗಿಸುವುದು ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ರಾಷ್ಟ್ರೀಯ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿಯು ಸದರಿ ಪ್ರಾಂಶುಪಾಲರ ವಿರುದ್ಧ ಶಿಸ್ತು ಕ್ರಮ ಜರುಗಿಸಬೇಕು. ಗ್ರಾಮಾಂತರ ಪ್ರದೇಶದ ವಿದ್ಯಾರ್ಥಿಗಳಿಗೆ ಸಿಗಬೇಕಾದ ಸವಲತ್ತುಗಳನ್ನು ಒದಗಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು. ಇಲ್ಲವಾದಲ್ಲಿ ಎನ್.ಎಸ್.ಯು.ಐ. ವತಿಯಿಂದ ಎನ್.ಇ.ಎಸ್. ಆಡಳಿತ ಮಂಡಳಿ ವಿರುದ್ಧ ತೀವ್ರ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದ್ದಾರೆ.
ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ವಿಜಯ್, ಕಾರ್ಯಧ್ಯಕ್ಷರ ರವಿಕಟಿಕೆರೆ, ನಗರ ಅಧ್ಯಕ್ಷ ರವಿ, ಚಂದ್ರೋಜಿ ರಾವ್, ನಗರ ಪ್ರಧಾನ ಕಾರ್ಯದರ್ಶಿ ಆದಿತ್ಯ, ವರುಣ್ ವಿ ಪಂಡಿತ್, ಸುಭಾನ್, ಶ್ರೀಕಾಂತ್, ಪಂಕಜ್, ಅಂಜನ್ ನೂರಾರು ವಿದ್ಯಾರ್ಥಿಗಳು ಪಾಲ್ಗೊಂಡು ಆಕ್ರೋಶ ವ್ಯಕ್ತಪಡಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post