ಕಲ್ಪ ಮೀಡಿಯಾ ಹೌಸ್ | ಹುಬ್ಬಳ್ಳಿ |
ಇಲ್ಲಿನ ರೈಲ್ವೆ ಯಾರ್ಡ್’ನಲ್ಲಿ ರೈಲು ಬೋಗಿಗಳು ಒಂದರ ಮೇಲೊಂದು ಬಿದ್ದಿದ್ದವು, ಹಲವು ಮಂದಿಗೆ ಗಂಭೀರವಾಗಿ ಗಾಯಗೊಂಡಿದ್ದರು, ಕ್ಷಣ ಮಾತ್ರದಲ್ಲಿ ಆಗಮಿಸಿದ್ದ ರಕ್ಷಣಾ ತಂಡ ಕಾರ್ಯಾಚರಣೆ ನಡೆಸಿ ಸ್ಪಂದಿಸಿತ್ತು. ಆದರೆ, ಇದ್ಯಾವುದೂ ನಿಜವಲ್ಲ. ಬದಲಾಗಿ ಅಣುಕು ಪ್ರದರ್ಶನ.
ಹೌದು… ನೈಋತ್ಯ ರೈಲ್ವೆ ಹುಬ್ಬಳ್ಳಿ ವಿಭಾಗದ ವತಿಯಿಂದ ರಾಷ್ಟ್ರೀಯ ವಿಪತ್ತು ನಿರ್ವಹಣೆ ಪಡೆ, ರೈಲ್ವೇ ರಕ್ಷಣಾ ಪಡೆ, ರಾಜ್ಯ ಪೊಲೀಸ್ ಇಲಾಖೆ, ಅಗ್ನಿಶಾಮಕ ದಳ, ಹೋಮ್ ಗಾರ್ಡ್ಸ್, ರೆಡ್ ಕ್ರಾಸ್, ರೈಲ್ವೆ ವೈದ್ಯಕೀಯ ಸಿಬ್ಬಂದಿ ಮತ್ತು ರೈಲ್ವೆ ನಾಗರಿಕ ಸುರಕ್ಷಣಾ ಸಂಸ್ಥೆಗಳ ಸಹಯೋಗದಲ್ಲಿ ಇಂದು ಹುಬ್ಬಳ್ಳಿ ರೈಲ್ವೆ ಯಾರ್ಡ ಆವರಣದಲ್ಲಿ ರೈಲ್ವೆ ಅಪಘಾತದ ವಿಪತ್ತು ನಿರ್ವಹಣೆಯ ಕುರಿತು ಅಣುಕು ಪ್ರದರ್ಶನ ನಡೆಯಿತು.
ಈ ಅಣುಕು ಪ್ರದರ್ಶನವು ರೈಲ್ವೆಯ ಅಪಘಾತ ಸಂಭವಿಸಿದಾಗ ಅದರ ನಿರ್ವಹಣೆ ಮತ್ತು ಶೀಘ್ರ ಕಾರ್ಯಾಚರಣೆಯ ಉದ್ದೇಶದಿಂದ ಆಯೋಜಿಸಲಾಗಿತ್ತು.

ಅಪಘಾತದಲ್ಲಿ ಗಾಯಾಳುಗಳ ನೋವಿನ ಅಕ್ರಂದನ, ಸಾವು ನೋವು ನಡೆದ ಘಟನಾ ಸ್ಥಳಕ್ಕೆ ರಕ್ಷಣಾ ತಂಡ ಧಾವಂತದಿಂದ ಆಗಮಿಸಿ ಬೋಗಿಯ ಕಿಟಕಿ ಸೀಳುವಿಕೆ, ಪ್ಯಾನಲ್ ಮತ್ತು ಮೇಲ್ಛಾವಣಿಯನ್ನು ಕತ್ತರಿಸಿ ಒಳಗೆ ನುಗ್ಗಿ ಗಾಯಗೊಂಡವರನ್ನು ಸುರಕ್ಷಿತವಾಗಿ ಹೊರತೆಗೆದು ಪ್ರಾಥಮಿಕ ಚಿಕಿತ್ಸೆಯನ್ನು ನೀಡಲಾಯಿತು.
ಕೆಲವರಿಗೆ ಹೆಚ್ಚಿನ ಚಿಕಿತ್ಸೆಗಾಗಿ ಅಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆ ಸಾಗಿಸಲಾಯಿತು. ಗಾಯಗೊಂಡವರ ವಿವರಗಳನ್ನು ದಾಖಲಿಸಿ ಅವರ ಸಂಬAಧಿಕರಿಗೆ ಮಾಹಿತಿ ನೀಡುವ ರೈಲ್ವೆ ಸಹಾಯವಾಣಿ ಸ್ಥಾಪಿಸಲಾಯಿತು.
ಪ್ರಧಾನ ಮುಖ್ಯ ಸುರಕ್ಷಾ ಅಧಿಕಾರಿ ಎಂ. ರಾಮಕೃಷ್ಣ, ಜಿಲ್ಲಾಧಿಕಾರಿಗಳಾದ ದಿವ್ಯ ಪ್ರಭು, ಮುಖ್ಯ ಯಾಂತ್ರಿಕ ಇಂಜಿನಿಯರ್ ಪಿ. ಬಾಲಸುಂದರಂ, ವಿಭಾಗೀಯ ವ್ಯವಸ್ಥಾಪಕರುಗಳಾದ ಟಿ.ವಿ. ಭೂಷಣ್ ಮತ್ತು ಪ್ರೇಮ್ ಚಂದ್ರ, ಮುಖ್ಯ ವಿಭಾಗೀಯ ಸುರಕ್ಷತಾ ಅಧಿಕಾರಿ ತ್ರಿನೇತ್ರ ಕೆ.ಆರ್, ಹಿರಿಯ ವಿಭಾಗೀಯ ಭದ್ರತಾ ಆಯುಕ್ತರು ಅಲೋಕ್ ಕುಮಾರ್ ಹಾಗು ಇತರೆ ವಿಭಾಗೀಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post