ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ತೀವ್ರ ಜ್ವರ ಹಾಗೂ ಬಹು ಅಂಗಾಂಗ ಸಮಸ್ಯೆಯಿಂದ ಬಳಲುತ್ತಿರುವ ಯುವಕನನ್ನು ಶಿವಮೊಗ್ಗದಿಂದ ಮಣಿಪಾಲಕ್ಕೆ ಜೀರೋ ಟ್ರಾಫಿಕ್‌ನಲ್ಲಿ ರವಾನಿಸಲಾಯಿತು. ಸಂಚಾರ ಪೊಲೀಸರು ಜೀರೋ ಟ್ರಾಫಿಕ್ #Zero Traffic ವ್ಯವಸ್ಥೆ ಮಾಡಿದ್ದರು.
ಶಿವಮೊಗ್ಗದ ಮೆಟ್ರೋ ಆಸ್ಪತ್ರೆಗೆ ದಾಖಲಾಗಿದ್ದ ತೀರ್ಥಹಳ್ಳಿ ತಾಲೂಕಿನ ಹುಂಚ ಹೋಬಳಿಯ ಶಂಕರಹಳ್ಳಿಯ ಶ್ರೇಯಾಂಕ್ (21 ವರ್ಷ) ಬಹು ಅಂಗಾಂಗ ಸಮಸ್ಯೆಯಿಂದ ಬಳಲುತ್ತಿದ್ದು ಆತನಿಗೆ ತುರ್ತಾಗಿ ಹೆಚ್ಚಿನ ಚಿಕಿತ್ಸೆ ಅಗತ್ಯವಿರುವ ಕಾರಣದಿಂದ ಮಣಿಪಾಲ ಆಸ್ಪತ್ರೆಗೆ ರವಾನಿಸಲಾಯಿತು.
ಇಂದು ಶ್ರೇಯಾಂಕ್ ಅವರನ್ನು ಮೆಟ್ರೋ ಆಸ್ಪತ್ರೆಯಿಂದ ಮಣಿಪಾಲದ ಆಸ್ಪತ್ರೆ ರವಾನಿಸಲಾಗಿದ್ದು ಪೊಲೀಸರು ಜೀರೋ ಟ್ರಾಫಿಕ್ ಮಾಡಿ ರವಾನಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post