ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಶಿವಮೊಗ್ಗದಿಂದ ಬೆಂಗಳೂರಿಗೆ ತೆರಳುವ ವಿಮಾನ ಪ್ರಯಾಣಿಕರಿಗೆ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಇನ್ಮುಂದೆ ಬೆಂಗಳೂರಿನಿಂದ ಶಿವಮೊಗ್ಗಕ್ಕೆ ಇಂಡಿಗೋ ವಿಮಾನ ಪ್ರತಿನಿತ್ಯ ಹಾರಾಟ ನಡೆಸಲಿದೆ.
ಈ ಕುರಿತಂತೆ ಸಂಸದ ಬಿ.ವೈ. ರಾಘವೇಂದ್ರ ಅವರು ಮಾಹಿತಿ ಹಂಚಿಕೊಂಡಿದ್ದು, ಬೆಂಗಳೂರು ಮತ್ತು ರಾಷ್ಟ್ರಕವಿ ಶಿವಮೊಗ್ಗ ಕುವೆಂಪು ವಿಮಾನ ನಿಲ್ದಾಣದ ನಡುವಿನ ಇಂಡಿಗೋ ವಿಮಾನಗಳು ಪರ್ಯಾಯ ದಿನಗಳ ಬದಲಿಗೆ ಸೆಪ್ಟೆಂಬರ್ 21 ರಿಂದ ಪ್ರತಿದಿನ ಕಾರ್ಯನಿರ್ವಹಿಸಲಿವೆ ಎಂದು ಹಂಚಿಕೊಳ್ಳಲು ಸಂತೋಷವಾಗುತ್ತಿದೆ ಎಂದಿದ್ದಾರೆ.ಈ ಕ್ರಮವು ಮಲೆನಾಡು ಪ್ರದೇಶದಲ್ಲಿ ಸಂಪರ್ಕ, ಪ್ರಯಾಣದ ಸುಲಭತೆ ಮತ್ತು ಆರ್ಥಿಕ ಚಟುವಟಿಕೆಯನ್ನು ಬಹಳವಾಗಿ ಉತ್ತೇಜಿಸುತ್ತದೆ ಎಂದಿದ್ದಾರೆ.
ಕರ್ನಾಟಕದಲ್ಲಿ ವಾಯು ಸಂಪರ್ಕವನ್ನು ಬಲಪಡಿಸುವ ನಿಟ್ಟಿನಲ್ಲಿ ನಿರಂತರ ಬೆಂಬಲ ನೀಡಿದ್ದಕ್ಕಾಗಿ ಮಾನ್ಯ ಕೇಂದ್ರ ನಾಗರಿಕ ವಿಮಾನಯಾನ ಸಚಿವ ರಾಮಮೋಹನ್ ನಾಯ್ಡು, ಇಂಡಿಗೋ ಮತ್ತು ಭಾರತ ಸರ್ಕಾರಕ್ಕೆ ಧನ್ಯವಾದಗಳನ್ನು ಅವರು ತಿಳಿಸಿದ್ದಾರೆ.
ಹೀಗಿದೆ ವಿಮಾನದ ವಿವರ:
✈️ BLR → RQY (6E 7731): ಡೆಪ್ 9:35 AM | ARR 10:45 AM
✈️ RQY → BLR (6E 7732): ಡೆಪ್ 11:05 AM | ARR 12:05 PM
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post