No Result
View All Result
Rani KoHEnur Calls Transgender Bill “Absurd”, Questions Lawmakers in Explosive Podcast Interview
English Articles

Rani KoHEnur Calls Transgender Bill “Absurd”, Questions Lawmakers in Explosive Podcast Interview

by ಕಲ್ಪ ನ್ಯೂಸ್
April 9, 2026
0

Kalpa Media House  |  Mumbai | Artist, drag performer, and activist Rani KoHEnur (Sushant Divgikar) has ignited widespread conversation following...

Read moreDetails
RPF team Seized 40.495 Kgs Ganja at Ballari Railway station

RPF team Seized 40.495 Kgs Ganja at Ballari Railway station

April 7, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Extension of Special Train Services to Manage Summer Rush

April 7, 2026
Interior / upgradation of Next-Generation Amrit Bharat Coaches. Sample coach ready

Interior / upgradation of Next-Generation Amrit Bharat Coaches. Sample coach ready

April 6, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Special Train Between Bengaluru Cantt and Chennai

April 3, 2026
  • Advertise With Us
  • Grievances
  • About Us
  • Contact Us
Friday, April 10, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಶಿವಮೊಗ್ಗ ದಸರಾ | ಈ ಬಾರಿ ಆಗಮಿಸಲಿದೆ ಖ್ಯಾತ ನಟ-ನಟಿಯರ ದಂಡು | ಯಾರು, ಯಾವತ್ತು ಬರಲಿದ್ದಾರೆ?

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
September 20, 2025
in ಶಿವಮೊಗ್ಗ
0
ಶಿವಮೊಗ್ಗ ದಸರಾ | ಈ ಬಾರಿ ಆಗಮಿಸಲಿದೆ ಖ್ಯಾತ ನಟ-ನಟಿಯರ ದಂಡು | ಯಾರು, ಯಾವತ್ತು ಬರಲಿದ್ದಾರೆ?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ನಾಡಹಬ್ಬ ಶಿವಮೊಗ್ಗ ದಸರಾ ಸೆ.22ರಿಂದ ಆರಂಭವಾಗಲಿದ್ದು, ಈ ಬಾರಿ ಸ್ಯಾಂಡಲ್’ವುಡ್ ಖ್ಯಾತ ನಟ, ನಟಿಯರು ಆಗಮಿಸಲಿದ್ದು, ವಿವಿಧ ಕಾರ್ಯಕ್ರಮಗಳು ನಡೆಯಲಿವೆ.

ಸೆ.24ರಿಂದ ಮೂರು ದಿನಗಳ ಕಾಲ ಚಲನಚಿತ್ರ ಪ್ರದರ್ಶನ ನಡೆಯಲಿದ್ದು, ಇನ್ನುಳಿದ ಕೆಲವು ದಿನಗಳು ಮನೋರಂಜನಾ ಕಾರ್ಯಕ್ರಮಗಳು ನಡೆಯಲಿವೆ. ಈ ಬಾರಿ ಚಲನಚಿತ್ರ ದಸರಾದಲ್ಲಿ ಮೂರು ಸಿನಿಮಾಗಳನ್ನು ಪ್ರದರ್ಶಿಸಲಾಗುತ್ತಿದೆ.

ಯಾವತ್ತು, ಯಾವ ಸಿನಿಮಾ ಪ್ರದರ್ಶನ?(ವೀರಭದ್ರೇಶ್ವರ ಚಿತ್ರಮಂದಿರ)

  • ಸೆಪ್ಟೆಂಬರ್ 25: ಬೆಳಿಗ್ಗೆ 9:30ಕ್ಕೆ ತಲೆದಂಡ
  • ಸೆಪ್ಟೆಂಬರ್ 26: ಬೆಳಿಗ್ಗೆ 9:30ಕ್ಕೆ ಜೀನಿಯಸ್ ಮುತ್ತ
  • ಸೆಪ್ಟೆಂಬರ್ 27: ಬೆಳಿಗ್ಗೆ 9:30ಕ್ಕೆ ಗರುಡ ಗಮನ ವೃಷಭ ವಾಹನ

ಯಾವತ್ತು, ಯಾವ ನಟ, ನಟಿ ಬರ್ತಾರೆ?

  • ಸೆಪ್ಟೆಂಬರ್ 24: ಚಲನಚಿತ್ರ ದಸರಾ ಉದ್ಘಾಟನಾ ಕಾರ್ಯಕ್ರಮ ನಡೆಯಲಿದ್ದು ಖ್ಯಾತ ನಟ ಶರಣ್, ನಟಿ ಕಾರುಣ್ಯ ರಾಮ್, ಚಿತ್ರ ನಿರ್ದೇಶಕ
  • ಸಾಯಿ ಪ್ರಕಾಶ್ ಹಾಗೂ ನಟಿ ಮತ್ತು ನಿರ್ದೇಶಕಿ ರೂಪಾ ಅಯ್ಯರ್ ಭಾಗಿ
  • ಸೆಪ್ಟೆಂಬರ್ 26: ನಗೆ ಹಬ್ಬದಲ್ಲಿ ನಟ ಮುಖ್ಯಮಂತ್ರಿ ಚಂದ್ರು ಭಾಗಿ
  • ಸೆಪ್ಟೆಂಬರ್ 28: ಮ್ಯೂಸಿಕಲ್ ನೈಟ್ಸ್ ಕಾರ್ಯಕ್ರಮದಲ್ಲಿ ನಟ ಶಿವರಾಜ್ ಕುಮಾರ್ ಭಾಗಿ. ಇದೇ ಕಾರ್ಯಕ್ರಮದಲ್ಲಿ ಹಿನ್ನೆಲೆ ಗಾಯಕರಾದ ಹೇಮಂತ್ ಕುಮಾರ್ ಅನುರಾಧ ಭಟ್ ಸರಿಗಮಪತಂಡ ಹಾಗೂ ಗಿಚ್ಚಿಗಿಲಿಗಿಲಿ ಕಾರ್ಯಕ್ರಮದ ಕಲಾವಿದರು ಕೂಡ ಇರಲಿದ್ದಾರೆ
  • ಸೆಪ್ಟೆಂಬರ್ 30: ನಟಿ ಗೀತಾ ಅವರು ಕಾರ್ಯಕ್ರಮವೊಂದನ್ನು ಉದ್ಘಾಟಿಸಲಿದ್ದಾರೆ
  • ಅಕ್ಟೋಬರ್ 1: ನಟಿ ಹರ್ಷಿಕಾ ಪೂಣಚ್ಚ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ

ಹೀಗಿದೆ ಶಿವಮೊಗ್ಗ ದಸರಾ ಕಾರ್ಯಕ್ರಮಗಳ ಪಟ್ಟಿ

ಸೆ.23ರಂದು ಮಕ್ಕಳ ದಸರಾ, ಸುಗಮ ಸಂಗೀತ, ಯಕ್ಷಸಂಭ್ರಮ ನಡೆಯುತ್ತದೆ. ಸರಿಗಮಪ ಖ್ಯಾತಿಯ ಕುಮಾರಿ ದಿಯಾ ಹೆಗಡೆ ಹಾಗೂ ಅಂತರಾಷ್ಟ್ರೀಯ ನೃತ್ಯಗಾರ್ತಿ ಕು. ಋತುಸ್ಪರ್ಶ ಈ ಕಾರ್ಯಕ್ರಮಕ್ಕೆ ಆಗಮಿಸಲಿದ್ದಾರೆ. ಸೆ.24ರ ಬುಧವಾರ ನಡೆಯಲಿರುವ ವಿವಿಧ ದಸರಾ ಕಾರ್ಯಕ್ರಮಗಳಲ್ಲಿ ಚಲನಚಿತ್ರ ನಟರುಗಳಾದ ಶರಣ್, ಕಾರುಣ್ಯರಾವ್, ಸಾಯಿಪ್ರಕಾಶ್, ರೂಪ ಅಯ್ಯರ್, ಗಣೇಶ್ ಮಂದಾರ್ತಿ ಮುಂತಾದವರು ಭಾಗವಹಿಸಲಿದ್ದಾರೆ.

ಸೆ.25ರಂದು ರೈತ ದಸರಾ, ಕಲಾ ದಸರಾ ನಡೆಯಲಿದೆ. ಸೆ.26ರಂದು ಕಲಾ ದಸರಾ ಕಾರ್ಯಕ್ರಮ ಸಂಜೆ 6 ಗಂಟೆಗೆ ಶಿವಪ್ಪ ನಾಯಕ ಅರಮನೆಯಲ್ಲಿ ನಡೆಯಲಿದ್ದು, ರಂಗಭೂಮಿ ಕಲಾವಿದೆ ಅಕ್ಷತಾ ಪಾಂಡವರಪುರ ಉದ್ಘಾಟಿಸುವರು.

ಸೆ.26ರಂದು ಸಂಜೆ 5 ಗಂಟೆಗೆ ಶಿವಪ್ಪನಾಯಕ ಅರಮನೆಯಲ್ಲಿ ನಡೆಯಲಿರುವ ನಗೆಹಬ್ಬ ಕಾರ್ಯಕ್ರಮದಲ್ಲಿ ಚಲನಚಿತ್ರ ನಟ ಮುಖ್ಯಮಂತ್ರಿ ಚಂದ್ರು ಭಾಗವಹಿಸುವರು. ಸೆ.27ರಂದು ಬೆಳಿಗ್ಗೆ 10 ಗಂಟೆಗೆ ಪೌರ ಕಾರ್ಮಿಕರ ದಸರಾ ಡಾ.ಬಿ.ಆರ್. ಅಂಬೇಡ್ಕರ್ ಭವನದಲ್ಲಿ ನಡೆಯಲಿದ್ದು, ಪತ್ರಕರ್ತ ಎನ್. ರವಿಕುಮಾರ್ ಉದ್ಘಾಟಿಸುವರು.ಸೆ.28ರಂದು ಯೋಗದಸರಾ ಗಮಕ ಕಾರ್ಯಕ್ರಮ ನಡೆಯಲಿದ್ದು, ಸಂಜೆ 5 ಗಂಟೆಗೆ ಪತ್ರಿಕಾ ಭವನದಲ್ಲಿ ಪತ್ರಕರ್ತರ ದಸರಾ ನಡೆಯಲಿದ್ದು, ಕುವೆಂಪು ವಿವಿ ಕುಲಪತಿ ಪ್ರೊ.ಶರತ್ ಅನಂತಮೂರ್ತಿ ಸಂಘದ ಅಧ್ಯಕ್ಷ ಕೆ.ವಿ. ಶಿವಕುಮಾರ್, ನಿರ್ದೇಶಕ ಎನ್. ರವಿಕುಮಾರ್ ಭಾಗವಹಿಸುವರು.
ಸೆ.28ರಂದು ಸಂಜೆ 5 ಗಂಟೆಗೆ ಅಲ್ಲಮಪ್ರಭು(ಫ್ರೀಡಂಪಾರ್ಕ್) ಮೈದಾನದಲ್ಲಿ ಮ್ಯೂಸಿಕಲ್ ನೈಟ್ ನಡೆಯಲಿದ್ದು, ಖ್ಯಾತ ನಟ ಡಾ. ಶಿವರಾಜ್‍ಕುಮಾರ್ ಭಾಗವಹಿಸುವರು. ಇವರ ಜೊತೆಗೆ ಸಚಿವ ಮಧುಬಂಗಾರಪ್ಪ ಕೂಡ ಉಪಸ್ಥಿತರಿರುತ್ತಾರೆ. ಅಂದು ಅಲ್ಲಿ ಆಹಾರ ಮೇಳ ಕೂಡ ಇರುತ್ತದೆ.

ಸೆ.29ರಂದು ಬೆಳಿಗ್ಗೆ 10.30ಕ್ಕೆ ಶಿವಪ್ಪನಾಯಕ ವೃತ್ತದಲ್ಲಿ ಸಾರ್ವಜನಿಕರಿಗೆ ಆಹಾರ ತಿನ್ನುವ ಸ್ಪರ್ಧೆ ನಡೆಯಲಿದೆ. ಹಾಗೆಯೇ ಸಂಜೆ 6 ಗಂಟೆಗೆ ಗೀತ ನೃತ್ಯವೈಭವ ಕಾರ್ಯಕ್ರಮ, ಅಲ್ಲಮಪ್ರಭು ಮೈದಾನದಲ್ಲಿ ನಡೆಯಲಿದ್ದು, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ವಿಧಾನ ಪರಿಷತ್ ಮಾಜಿ ಸಭಾಪತಿ ಡಿ.ಹೆಚ್. ಶಂಕರಮೂರ್ತಿ ಮುಂತಾದವರು ಭಾಗವಹಿಸುವರು.

ಸೆ.30ರಂದು ಕಲಾ ಮತ್ತು ಜ್ಞಾನ ದಸರಾ ಕುವೆಂಪು ರಂಗಮಂದಿರದಲ್ಲಿ, ಅಡುಗೆ ಮಾಡುವ ಸ್ಪರ್ಧೆ ವೀರಶೈವ ಕಲ್ಯಾಣ ಮಂಟಪದಲ್ಲಿ, ಸಂಜೆ 5.30ಕ್ಕೆ ಫ್ರೀಡಂಪಾರ್ಕ್‍ನಲ್ಲಿ ನಾದವೈಭವ ಕಾರ್ಯಕ್ರಮ ನಡೆಯಲಿದ್ದು, ಖ್ಯಾತ ಚಲನಚಿತ್ರ ನಟಿ ಗೀತಾ ಇದರಲ್ಲಿ ಭಾಗವಹಿಸುತ್ತಾರೆ.ಅ.1ರಂದು ಸಂಜೆ 5 ಗಂಟೆಗೆ ಇಲ್ಲಿಯೇ ನಡೆಯುವ ನಾಟ್ಯವೈಭವ ಕಾರ್ಯಕ್ರಮದಲ್ಲಿ ನಟಿ ಹರ್ಷಿತಾ ಪೂರ್ಣಚ್ಚ ಆಗಮಿಸುವರು. ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಕೆ.ಎಸ್. ಈಶ್ವರಪ್ಪ ಭಾಗವಹಿಸಲಿದ್ದಾರೆ. ಅ.2ರಂದು ಸಂಜೆ 5ಗಂಟೆಗೆ ಸುರೇಖಾ ಹೆಗಡೆ ಮತ್ತು ಸಂಗಡಿಗರಿಂದ ಸುಗಮ ಸಂಗೀತ ಆಯೋಜಿಸಲಾಗಿದೆ.

ಅ.2ರಂದು ದಸರಾ ಮಹೋತ್ಸವದ ಅಂಬಾರಿ ಮೆರವಣಿಗೆ ಮಧ್ಯಾಹ್ನ 2.30ಕ್ಕೆ ಆರಂಭವಾಗುತ್ತದೆ. ಅಂಬಾರಿ ಮೆರವಣಿಗೆಯಲ್ಲಿ ಈ ಬಾರಿ ಮೂರು ಆನೆಗಳಾದ ಸಾಗರ್, ಬಾಲಣ್ಣ, ಕುಂತಿ ಭಾಗವಹಿಸಲಿದ್ದು, ಸಾಗರ್ ಅಂಬಾರಿ ಹೋರಲಿದ್ದಾರೆ. ಶ್ರೀ ಚಾಮುಂಡೇಶ್ವರಿ ದೇವಿಯ ಬೆಳ್ಳಿ ವಿಗ್ರಹದ ಅಂಬಾರಿ ಮೆರವಣಿಗೆಗೆ ಶಿವಪ್ಪನಾಯಕ ಅರಮನೆ ಆವರಣದಲ್ಲಿ ನಂದಿಧ್ವಜ ಪೂಜೆ ನಡೆಯಲಿದೆ. ನಂತರ ಸಂಜೆ ಅಲ್ಲಮಪ್ರಭು ಮೈದಾನದಲ್ಲಿ ಬನ್ನಿಮುಡಿಯುವ ಕಾರ್ಯಕ್ರಮಕ್ಕೆ ತಹಶೀಲ್ದಾರ್ ವಿ.ಎಸ್. ರಾಜೀವ್ ಚಾಲನೆ ನೀಡುವರು. ಈ ಕಾರ್ಯಕ್ರಮದಲ್ಲಿ ಅತ್ಯಾಕರ್ಷಕ ಸಿಡಿಮದ್ದು ಮತ್ತು ರಾವಣ ದಹನವನ್ನು ಏರ್ಪಡಿಸಲಾಗಿದೆ. ಸಚಿವರುಗಳಾದ ಮಧುಬಂಗಾರಪ್ಪ ಹಾಗೂ ಶಿವರಾಜ್ ಎಸ್. ತಂಗಡಗಿ, ಬಿ.ಎಸ್. ಸುರೇಶ್, ರಹೀಂಖಾನ್ ಭಾಗವಹಿಸುವರು

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2025/09/Vedic-Maths-New.mp4
http://kalpa.news/wp-content/uploads/2024/04/VID-20240426-WA0008.mp4

Tags: Actor SharanActress GeethaCini DasaraDasaraHarshika PonachaKannada News WebsiteLatest News KannadaOm SaiprakashsandalwoodShimogaShivamoggaShivamogga NewsShivarajkumarನಾಡಹಬ್ಬಶಿವಮೊಗ್ಗಶಿವಮೊಗ್ಗ ದಸರಾಸ್ಯಾಂಡಲ್’ವುಡ್
Share196Tweet123Send
Previous Post

ಶಿವಮೊಗ್ಗ ದಸರಾ | ಸೆ.22ರಂದು ದೇಹದಾಢ್ರ್ಯ ಸ್ಪರ್ಧೆ | ಯಾವ ಊರಿನವರೆಲ್ಲಾ ಪಾಲ್ಗೊಳ್ಳಬಹುದು?

Next Post

ಮೈಸೂರು-ಶಿವಮೊಗ್ಗ-ತಾಳಗುಪ್ಪ ರೈಲು ಪ್ರಯಾಣಿಕರಿಗೆ ಇಲ್ಲಿದೆ ಮಹತ್ವದ ತುರ್ತು ಮಾಹಿತಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಜೂನ್ 30ಕ್ಕೆ ಅನ್ವಯಿಸುವಂತೆ ಮೈಸೂರು-ಶಿವಮೊಗ್ಗ-ತಾಳಗುಪ್ಪ ಎಕ್ಸ್’ಪ್ರೆಸ್ ರೈಲಿನ ಬಿಗ್ ಅಪ್ಡೇಟ್

ಮೈಸೂರು-ಶಿವಮೊಗ್ಗ-ತಾಳಗುಪ್ಪ ರೈಲು ಪ್ರಯಾಣಿಕರಿಗೆ ಇಲ್ಲಿದೆ ಮಹತ್ವದ ತುರ್ತು ಮಾಹಿತಿ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಹುಲಿಕಲ್ ಘಾಟಿಯಲ್ಲಿ ಭಾರೀ ದುರಂತ | ಧರೆ ಕುಸಿದು ಮೂವರು ಕಾರ್ಮಿಕರ ಸಾವು

ಹುಲಿಕಲ್ ಘಾಟಿಯಲ್ಲಿ ಭಾರೀ ದುರಂತ | ಧರೆ ಕುಸಿದು ಮೂವರು ಕಾರ್ಮಿಕರ ಸಾವು

April 9, 2026
ಪಿಯುಸಿ ರಿಸಲ್ಟ್ | ಪೇಸ್ ಕಾಲೇಜಿನ ವಿದ್ಯಾರ್ಥಿನಿ ಮಹಿನ್ ರಾಜ್ಯಕ್ಕೆ 3, ಜಿಲ್ಲೆಗೆ ಪ್ರಥಮ ಸ್ಥಾನ

ಪಿಯುಸಿ ರಿಸಲ್ಟ್ | ಪೇಸ್ ಕಾಲೇಜಿನ ವಿದ್ಯಾರ್ಥಿನಿ ಮಹಿನ್ ರಾಜ್ಯಕ್ಕೆ 3, ಜಿಲ್ಲೆಗೆ ಪ್ರಥಮ ಸ್ಥಾನ

April 9, 2026
ದೇಶ ಸಮೃದ್ಧಿಯಾದಾಗ ನಾವೆಲ್ಲರೂ ಸಮೃದ್ಧಿ: ಸಂಸದ ರಾಘವೇಂದ್ರ

ದೇಶ ಸಮೃದ್ಧಿಯಾದಾಗ ನಾವೆಲ್ಲರೂ ಸಮೃದ್ಧಿ: ಸಂಸದ ರಾಘವೇಂದ್ರ

April 9, 2026
`ನಾನು ಕರುಣಾಕರ್’ ಚಿತ್ರನೋಡಿ, ಹೊಸ ಪ್ರತಿಭೆಗಳನ್ನು ಬೆಂಬಲಿಸಿ: ನಿರ್ಮಾಪಕ ನಮನ್ ನಾರಾಯಣ್ ಸಂತೋಷ್

`ನಾನು ಕರುಣಾಕರ್’ ಚಿತ್ರನೋಡಿ, ಹೊಸ ಪ್ರತಿಭೆಗಳನ್ನು ಬೆಂಬಲಿಸಿ: ನಿರ್ಮಾಪಕ ನಮನ್ ನಾರಾಯಣ್ ಸಂತೋಷ್

April 9, 2026
ಪಿಯುಸಿ ರಿಸಲ್ಟ್ | ಕುಮದ್ವತಿ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ | ಹೆಮ್ಮೆಯ ವಿದ್ಯಾರ್ಥಿಗಳಿವರು

ಪಿಯುಸಿ ರಿಸಲ್ಟ್ | ಕುಮದ್ವತಿ ಕಾಲೇಜಿಗೆ ಶೇ.100 ರಷ್ಟು ಫಲಿತಾಂಶ | ಹೆಮ್ಮೆಯ ವಿದ್ಯಾರ್ಥಿಗಳಿವರು

April 9, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL