ಕಲ್ಪ ಮೀಡಿಯಾ ಹೌಸ್ | ಕಾರ್ಕಳ |
ಉಡುಪಿ ಜಿಲ್ಲಾ ಮಟ್ಟದ ಪದವಿಪೂರ್ವ ಕಾಲೇಜುಗಳ ಬಾಲಕರ ಈಜು ಸ್ಪರ್ಧೆಯಲ್ಲಿ ಕಾರ್ಕಳದ ಕೈಸ್ಟ್‌ಕಿಂಗ್ ಪದವಿಪೂರ್ವ ಕಾಲೇಜಿನ #Christ King PU College ಆರ್ಯನ್ ಆರ್ ಕೋಟ್ಯಾನ್ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ.
ಪದವಿ ಪೂರ್ವ ಶಿಕ್ಷಣ ಇಲಾಖೆ, ಉಡುಪಿ ಜಿಲ್ಲೆ ಹಾಗೂ ಸರಕಾರಿ ಪ.ಪೂ ಕಾಲೇಜು ಉಡುಪಿ ಇವರ ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಪದವಿಪೂರ್ವ ಕಾಲೇಜುಗಳ ಬಾಲಕರ ಈಜು ಸ್ಪರ್ಧೆಯಲ್ಲಿ #Swimming Competition ಕಾರ್ಕಳದ ಕೈಸ್ಟ್‌ಕಿಂಗ್ ಪದವಿಪೂರ್ವ ಕಾಲೇಜಿನ ದ್ವಿತೀಯ ವಾಣಿಜ್ಯ ವಿಭಾಗದ ಆರ್ಯನ್ ಆರ್ ಕೋಟ್ಯಾನ್ 1500 ಮೀ ಫ್ರೀ ಸ್ಟೈಲ್ ಮತ್ತು 400 ಮೀ ಫ್ರೀ ಸ್ಟೈಲ್‌ನಲ್ಲಿ ಪ್ರಥಮ ಸ್ಥಾನದೊಂದಿಗೆ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ.
ಉಳಿದಂತೆ ಪ್ರಥಮ ವಿಜ್ಞಾನ ವಿಭಾಗದ ಸ್ಟೆಲಿಯೊಸ್ ಡಾರ್ವಿನ್ ತಾವ್ರೋ 1500 ಮೀ ಮತ್ತು 400 ಮೀ ಫ್ರೀ ಸ್ಟೈಲ್‌ನಲ್ಲಿ ತೃತೀಯ ಸ್ಥಾನ, ಪ್ರಥಮ ವಿಜ್ಞಾನ ವಿಭಾಗದ ಗಗನ್ ಭಟ್ 200 ಮೀ ಫ್ರೀ ಸ್ಟೈಲ್‌ನಲ್ಲಿ ದ್ವಿತೀಯ ಸ್ಥಾನ. 400×100ಮೀ ರಿಲೇಯಲ್ಲಿ ಆರ್ಯನ್, ಗಗನ್ ಭಟ್, ಸಾರ್ಥಕ್, ಸ್ಟೆಲಿಯೊಸ್ ಡಾರ್ವಿನ್ ತಾವ್ರೋ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 






















