ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ತ್ವರಿತ ಹಾಗೂ ಬದಲಾಗುತ್ತಿರುವ ಇಂದಿನ ಉದ್ಯೋಗ ಕ್ಷೇತ್ರದಲ್ಲಿ ನಿರಂತರವಾದ ಅನ್ವೇಷಣೆ, ಹೊಂದಾಣಿಕೆಯ ಅಗತ್ಯವನ್ನು ಮಾಡಿಕೊಳ್ಳಬೇಕು ಎಂದು ಬೆಂಗಳೂರು ಡಿಎಕ್ಸ್’ಸಿ ಟೆಕ್ನಾಲಜಿಯ ಮ್ಯಾನೇಜರ್ ಅಮಿತ್ ಮಧ್ಯಸ್ಥ ಸಲಹೆ ನೀಡಿದರು.
ಪಿಇಎಸ್’ಐಎಂಎಸ್ ಕಾಲೇಜಿನ ವಾಣಿಜ್ಯ ವಿಭಾಗ ಹಾಗೂ ಸಿಂಥೆಸಿಸ್ ಫೋರಂ ಸಹಯೋಗದಲ್ಲಿ ಆಯೋಜಿಸಲಾಗಿದ್ದ A Gateway to Global Career Opportunity ಎಂಬ ವಿಷಯದ ವಿಶೇಷ ಉಪನ್ಯಾಸದಲ್ಲಿ ಅವರು ಮಾತನಾಡಿದರು.
ಶೈಕ್ಷಣಿಕ ಮತ್ತು ಕಾರ್ಪೋರೇಟ್ ಜಗತ್ತಿನ ನಡುವಿನ ಅಂತರವನ್ನು ಹೇಗೆ ಮೀರಬೇಕಾಗಿದೆ. ವಿದ್ಯಾರ್ಥಿಗಳು ಜಾಗತಿಕ ಉದ್ಯೋಗಾವಕಾಶಗಳನ್ನು ಹೇಗೆ ಅನ್ವೇಷಿಸಬೇಕು, ಅದಕ್ಕೆ ಬೇಕಾದ ತಯಾರಿಗಳನ್ನು ಹೇಗೆ ಮಾಡಿಕೊಳ್ಳಬೇಕು ಎಂದು ಮಹತ್ವದ ವಿಚಾರಗಳನ್ನು ಹಂಚಿಕೊಂಡರು.


ಉತ್ತಮ ವ್ಯಕ್ತಿತ್ವ ವಿಕಸನವನ್ನು ರೂಪಿಸಿಕೊಂಡರೆ ಹಲವು ರೀತಿಯ ಸವಾಲುಗಳನ್ನು ಎದುರಿಸಿ ಸಮರ್ಥವಾದ ಗುರಿಯನ್ನು ತಲುಪಲು ಸಾಧ್ಯವಾಗುತ್ತದೆ. ಇಂದಿನ ಜಾಗತಿಕ ಕಾರ್ಪೋರೇಟ್ ವಲಯದಲ್ಲಿ ಅತೀ ಹೆಚ್ಚು ಅವಕಾಶಗಳು ಇದ್ದರೂ ಕೂಡ ಸಮರ್ಥ ಕೌಶಲ್ಯಗಳನ್ನು ಅಳವಡಿಸಿಕೊಂಡರೆ ಹಲವು ಅವಕಾಶಗಳನ್ನು ಹುಡುಕಲು, ವೃತ್ತಿ ಮಾರ್ಗಗಳನ್ನು ಅನ್ವೇಷಿಸಲು ಯಾವುದೇ ರೀತಿಯಲ್ಲಿ ಸಮಸ್ಯೆ ಬರುವುದಿಲ್ಲ ಎಂದರು.
ಇಂದಿನ ವಿದ್ಯಾರ್ಥಿಗಳು ಶೈಕ್ಷಣಿಕ ಮತ್ತು ವೃತ್ತಿಪರ ಕಾರ್ಯಕ್ರಮಗಳಲ್ಲಿ ಹೆಚ್ಚಾಗಿ ಪಾಲ್ಗೊಂಡು ಉತ್ತಮವಾದ ವೃತ್ತಿ ಪ್ರಯಾಣವನ್ನು ಕೈಗೊಳ್ಳಲು ಸಿದ್ಧತೆ ಮಾಡಿಕೊಳ್ಳಬೇಕು ಎಂದು ತಿಳಿಸಿದರು.
ಕಾಲೇಜಿನ ಪ್ರಾಂಶುಪಾಲರಾದ ಡಾ.ಜಿ.ಎಂ. ಸುದರ್ಶನ್, ವಾಣಿಜ್ಯ ವಿಭಾಗದ ಮುಖ್ಯಸ್ಥರಾದ ಡಾ. ಎಚ್.ಆರ್. ಮಂಜುನಾಥ, ಸಿಂಥೆಸಿಸ್ ಫೋರಂವಿಭಾಗದ ಸಂಚಾಲಕರಾದ ಜಿ.ಬಿ. ರವಿಕುಮಾರ್, ಕಾಲೇಜಿನ ಪ್ರಥಮ ವರ್ಷದ ಬಿಕಾಂ ಪದವಿ ವಿದ್ಯಾರ್ಥಿಗಳು ಹಾಜರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
















Discussion about this post