No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
  • Advertise With Us
  • Grievances
  • About Us
  • Contact Us
Friday, August 21, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಜಿಎಸ್’ಟಿ ಸುಧಾರಣೆ | ಜನರಿಗೂ, ವ್ಯಾಪಾರಿಗಳಿಗೂ ಲಾಭ: ಬಿ.ವೈ. ವಿಜಯೇಂದ್ರ

kalpa News by kalpa News
September 22, 2025
in ಶಿವಮೊಗ್ಗ
0
ಜಿಎಸ್’ಟಿ ಸುಧಾರಣೆ | ಜನರಿಗೂ, ವ್ಯಾಪಾರಿಗಳಿಗೂ ಲಾಭ: ಬಿ.ವೈ. ವಿಜಯೇಂದ್ರ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಜಿಎಸ್’ಟಿಯಿಂದ ದೇಶದ ಆರ್ಥಿಕ ಅಭಿವೃದ್ಧಿಯಾಗಿದ್ದು, ವಿಶ್ವದಲ್ಲೇ ಮೂರನೇ ಅತಿದೊಡ್ಡ ಆರ್ಥಿಕ ಶಕ್ತಿಯಾಗಿ ಭಾರತ ಮುಂದುವರೆಯುತ್ತಿದ್ದು, ವಿಶ್ವದ ಅನೇಕ ದೇಶಗಳ ಕೈಗಾರಿಕೆಗಳು ಭಾರತದತ್ತ ಮುಖ ಮಾಡಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ #B Y Vijayendra ಹೇಳಿದ್ದಾರೆ.

ಅವರು ಇಂದು ನಗರದ ಶಿವಪ್ಪನಾಯಕ ವೃತ್ತದಲ್ಲಿ ಜಿಎಸ್’ಟಿ ಕೌನ್ಸಿಲ್ ಹಾಗೂ ಕೇಂದ್ರ ಸರ್ಕಾರದಿಂದ ಪ್ರಧಾನ ಮಂತ್ರಿಗಳ ಆಶಯದಂತೆ ದೇಶದ ಜನರಿಗೆ ಜಿಎಸ್’ಟಿ 2.0ನಲ್ಲಿ ಐತಿಹಾಸಿಕ ಸುಧಾರಣೆಗಳನ್ನು ತಂದಿದ್ದು, ದೇಶದ ಜನತೆಗೆ ದಿನಬಳಕೆ ವಸ್ತುಗಳ ದರ ಇಳಿಕೆಗೆ ಕಾರಣರಾದ ಪ್ರಧಾನಿ ಮೋದಿ ಅವರಿಗೆ ಧನ್ಯವಾದ ಸಮರ್ಪಣಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಗಾಂಧಿ ಬಜಾರ್ ನ ವ್ಯಾಪಾರಸ್ಥರಿಗೆ ಸಿಹಿ ತಿನ್ನಿಸಿ ಜಿಎಸ್’ಟಿ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಜಿಎಸ್’ಟಿ 2.0 #GST 2.0 ಒಂದು ಐತಿಹಾಸಿಕ ನಿರ್ಧಾರವಾಗಿದೆ. ಕಾಂಗ್ರೆಸ್ ಅಪಪ್ರಚಾರ ಮಾಡುತ್ತಿದೆ. ಜಿಎಸ್’ಟಿ ಕೌನ್ಸಿಲ್ ನಿರ್ಧಾರ ತೆಗೆದುಕೊಳ್ಳುವ ಮೊದಲು ಎಲ್ಲಾ ರಾಜ್ಯಗಳ ವಿತ್ತ ಸಚಿವರು ಅಲ್ಲಿ ಇದ್ದು ಅನುಮೋದನೆ ನೀಡಿದರೆ ಮಾತ್ರ ಜಿಎಸ್’ಟಿ ಕೌನ್ಸಿಲ್ ಹಸಿರು ನಿಶಾನೆ ತೋರಿಸುತ್ತದೆ. ಈಗಿನ ನಿರ್ಧಾರ ಇಡೀ ದೇಶದಲ್ಲಿ ಬಡ ಮಧ್ಯಮ ವರ್ಗದ ಸಾಮಾನ್ಯ ಜನರಿಗೆ ಅನುಕೂಲವಾಗಲಿದ್ದು, ದಿನಬಳಕೆಯ ಪ್ರಮುಖ ವಸ್ತುಗಳ ಮತ್ತು ಜೀವ ಉಳಿಸುವ ವೈದ್ಯಕೀಯ ವೆಚ್ಚಗಳ ಮೇಲೆ ಅತ್ಯಂತ ಪರಿಣಾಮ ಬೀರಲಿದೆ. ಜನಸಾಮಾನ್ಯರಿಗೆ ದರಗಳಲ್ಲಿ ಕಡಿಮೆಯಾಗುವುದರ ಜೊತೆಗೆ ಎಲ್ಲಾ ವ್ಯಾಪಾರಿಗಳಿಗೂ ತಮ್ಮ ಉತ್ಪಾದನೆಯ ಬೇಡಿಕೆ ಹೆಚ್ಚಲಿದೆ. ವರ್ತಕರಿಗೆ ಹೆಚ್ಚಿನ ಲಾಭವಾಗಲಿದೆ ಎಂದರು.

ವಿಕಸಿತ ಭಾರತದ ಕನಸು ನನಸಾಗಲು ಜಿಎಸ್’ಟಿ ಬೆಂಬಲ ನೀಡಿದೆ. ಇಂದಿನಿAದ ಜಿಎಸ್’ಟಿ ಐತಿಹಾಸಿಕವಾಗಿ ಜಾರಿಯಾಗಿದೆ. ಇದಕ್ಕಾಗಿ ಜಿಲ್ಲೆಯ ಕಾರ್ಯಕರ್ತರು, ಮುಖಂಡರು, ಪ್ರಧಾನಿಯವರಿಗೆ ಧನ್ಯವಾದ ತಿಳಿಸಿದರಲ್ಲದೇ ಜನರಿಗೂ ಕೂಡ ಜಿಎಸ್’ಟಿ ಸುಧಾರಣೆಯ ಬಗ್ಗೆ ತಿಳಿಸುತ್ತಿದ್ದೇವೆ. ಇವತ್ತಿನಿಂದಲೇ ಕೆಲವು ಗೊಂದಲಗಳು ಕೂಡ ಸರಿಯಾಗಲಿವೆ ಎಂದರು.
ಮುಖ್ಯಮಂತ್ರಿ ಸಿದ್ಧರಾಮಯ್ಯ #CM Siddaramaiah ಅವರು ಹಿಂದೂ ಸಮಾಜ ಒಡೆಯುವ ಕೆಲಸಕ್ಕೆ ಮುಂದಾಗಿದ್ದಾರೆ. ಇದು ದುರ್ದೈವವಾಗಿದೆ. ಈ ಬಗ್ಗೆ ಹಿಂದೂ ಸಮಾಜ ಜಾಗೃತವಾಗಬೇಕಾಗಿದೆ. ಜಾತಿ ಗಣತಿ ಮಾಡುವ ಅಧಿಕಾರ ರಾಜ್ಯ ಸರ್ಕಾರಕ್ಕೆ ಇಲ್ಲ. ಇದು ಈಗಾಗಲೇ ರಾಜ್ಯದ ಉಚ್ಛ ನ್ಯಾಯಾಲಯದ ಮೆಟ್ಟಿಲೇರಿದೆ ಎಂದರು.

ಹಿಂದೂಗಳ ಹಬ್ಬ ಹರಿದಿನ ಮಾಡಲು ದೇಶದ ಯಾವ ರಾಜ್ಯದಲ್ಲೂ ಗೊಂದಲವಿಲ್ಲ. ನಮ್ಮ ರಾಜ್ಯದಲ್ಲಿ ಮಾತ್ರ ಈ ಗೊಂದಲ. ಇದಕ್ಕೆ ಸಿಎಂ ಅವರೇ ಕಾರಣ ಎಂದ ಅವರು ದಸರಾ ಉದ್ಘಾಟನೆ ವಿಚಾರದಲ್ಲಿ ಸುಪ್ರೀಂ ಕೋರ್ಟ್ನಲ್ಲಿ ಏನಾಗಿದೆ ಎನ್ನುವುದು ಮುಖ್ಯವಲ್ಲ ಸಿಎಂ ಹುಚ್ಚಾಟ ಆಡಿದರು ಅಷ್ಟೇ. ದಸರಾ ಉದ್ಘಾಟನೆ ಯಾರಾದರೂ ಮಾಡಲಿ ಎಂದರು.
ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಗೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಅವರು ಇದು ಎಲ್ಲರೂ ಕುಳಿತು ಚರ್ಚೆ ಮಾಡಬೇಕು. ಶಾಸಕರು, ಸಂಸದರು ಈ ಬಗ್ಗೆ ಚರ್ಚೆ ನಡೆಸಿ ಸೂಕ್ತ ನಿರ್ಧಾರ ಕೈಗೊಳ್ಳಲಿದ್ದಾರೆ. ಪಕ್ಷ ನಂತರ ತೀರ್ಮಾನ ಕೈಗೊಳ್ಳಲಿದೆ ಎಂದರು.

ಶಿವಪ್ಪನಾಯಕ ವೃತ್ತದಲ್ಲಿ ಪಟಾಕಿ ಸಿಡಿಸಿ ಸಿಹಿ ಹಂಚಿ ಗಾಂಧಿ ಬಜಾರ್ ವರ್ತಕರಿಗೆ ಜಿಎಸ್’ಟಿ ಬಗ್ಗೆ ಮಾಹಿತಿ ನೀಡಿ ಪ್ರಧಾನಿ ಮೋದಿ #PM Modi ಪರ ಘೋಷಣೆ ಕೂಗಿ ಸಂಭ್ರಮಾಚರಣೆ ನಡೆಸಿದರು.

ಈ ಸಂದರ್ಭದಲ್ಲಿ ಶಾಸಕರಾದ ಡಿ.ಎಸ್. ಅರುಣ್, ಡಾ. ಧನಂಜಯ ಸರ್ಜಿ, ಬಿಜೆಪಿ ಜಿಲ್ಲಾಧ್ಯಕ್ಷ ಎನ್.ಕೆ. ಜಗದೀಶ್, ಪ್ರಮುಖರಾದ ಮೋಹನ್ ರೆಡ್ಡಿ, ಮಂಜುನಾಥ್, ಮಾಲತೇಶ್, ಸುರೇಖಾ ಮುರಳೀಧರ್, ಮಂಗಳಾ ನಾಗೇಂದ್ರ, ಸುಮಿತ್ರಾ, ಚೈತ್ರಾ ಪೈ, ಶಿವಾನಂದ್, ಹರಿಕೃಷ್ಣ, ಶಿಲ್ಪಾ ಶ್ರೀನಿವಾಸ್, ಸುಮಾ ಭೂಪಾಳಂ, ವಿಶ್ವನಾಥ್ ಮತ್ತಿತರರು ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

https://kalpa.news/wp-content/uploads/2025/09/Vedic-Maths-New.mp4

https://kalpa.news/wp-content/uploads/2024/04/VID-20240426-WA0008.mp4

Tags: B Y VijayendraCM SiddaramaiahGST 2.0Kannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaPM ModiShimogaShivamoggaNewsಜಿಎಸ್'ಟಿ 2.0ಪ್ರಧಾನಿ ಮೋದಿಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರಮಲೆನಾಡು_ಸುದ್ಧಿಮುಖ್ಯಮಂತ್ರಿ ಸಿದ್ಧರಾಮಯ್ಯಶಿವಮೊಗ್ಗಶಿವಮೊಗ್ಗ_ನ್ಯೂಸ್
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಹಬ್ಬಗಳ ಆಚರಣೆ ನಮ್ಮ ಸಂಸ್ಕೃತಿಯ ಜೀವಂತಿಕೆಗೆ ಸಾಕ್ಷಿ

Next Post

ಐತಿಹಾಸಿಕ ಮೈಲಿಗಲ್ಲು: ಮುಂಬೈ-ಅಹಮದಾಬಾದ್ ಬುಲೆಟ್ ರೈಲು ಯೋಜನೆಯಲ್ಲಿ ಮಹತ್ವದ ಹೆಜ್ಜೆ | ಏನದು?

kalpa News

kalpa News

Next Post
Historic Milestone: Major Tunnel breakthrough achieved in Mumbai-Ahmedabad Bullet Train Project

ಐತಿಹಾಸಿಕ ಮೈಲಿಗಲ್ಲು: ಮುಂಬೈ-ಅಹಮದಾಬಾದ್ ಬುಲೆಟ್ ರೈಲು ಯೋಜನೆಯಲ್ಲಿ ಮಹತ್ವದ ಹೆಜ್ಜೆ | ಏನದು?

Leave a Reply Cancel reply

Your email address will not be published. Required fields are marked *

No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL