ಕಲ್ಪ ಮೀಡಿಯಾ ಹೌಸ್ | ಮೈಸೂರು |
ನಾಡದೇವತೆ ಚಾಮುಂಡೇಶ್ವರಿ ಬೆಟ್ಟದ ಶಿವಾರ್ಚಕ ವಿ. ರಾಜು ಎನ್ನುವವರು ನಿಧನರಾಗಿದ್ದು, ಈ ಹಿನ್ನೆಲೆಯಲ್ಲಿ ಇಂದು ಮಧ್ಯಾಹ್ನದವರೆಗೂ ದೇವಿಯ ದರ್ಶನಕ್ಕೆ ನಿರ್ಬಂಧ ವಿಧಿಸಲಾಗಿದೆ.
ವಿ. ರಾಜು ಅವರು ತಡರಾತ್ರಿ ಹಠಾತ್ ನಿಧನರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು ಮಧ್ಯಾಹ್ನದವರೆಗೂ ಚಾಮುಂಡೇಶ್ವರಿಯ ದರ್ಶನಕ್ಕೆ ಅವಕಾಶ ಇರುವುದಿಲ್ಲ. ರಾಜು ಅವರ ಅಂತ್ಯ ಸಂಸ್ಕಾರ ಆದ ನಂತರ ಬಹುತೇಕ ಸಂಜೆ ವೇಳೆಗೆ ಚಾಮುಂಡೇಶ್ವರಿಯ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗುತ್ತದೆ ಎಂದು ಹೇಳಲಾಗಿದೆ.
ನವರಾತ್ರಿ/ಮೈಸೂರು ದಸರಾ ಹಿನ್ನೆಲೆಯಲ್ಲಿ ಚಾಮುಂಡಿ ಬೆಟ್ಟಕ್ಕೆ ರಾಜ್ಯದ ವಿವಿಧ ಕಡೆಗಳಿಂದ ಭಕ್ತರ ದಂಡು ಹರಿದು ಬರುತ್ತಿದೆ. ಆದರೆ, ಇಂದು ಮಧ್ಯಾಹ್ನದವರೆಗೂ ದರ್ಶನಕ್ಕೆ ಅವಕಾಶ ಇಲ್ಲದೇ ಇರುವುದು ದೂರದಿಂದ ಬಂದ ಭಕ್ತರಿಗೆ ತೊಂದರೆಯಾಗಿದೆ. ಆದರೆ, ಇಂತಹ ಪರಿಸ್ಥಿತಿಯಲ್ಲಿ ಇದು ಅನಿವಾರ್ಯವಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post