ಕಲ್ಪ ಮೀಡಿಯಾ ಹೌಸ್ | ಕಾರ್ಕಳ |
ಹಿಂದಿ ಭಾಷೆಯಲ್ಲಿ ಪಾಂಡಿತ್ಯ ಹೊಂದಿದ್ದರೆ ಭಾರತ ದರ್ಶನ ಮಾಡಿಕೊಳ್ಳಬಹುದು ಎಂದು ಮೂಡಬಿದ್ರೆಯ ಆಳ್ವಾಸ್ ಕಾಲೇಜಿನ ಸಹಾಯಕ ಹಿಂದಿ ಪ್ರಾಧ್ಯಾಪಕಿ ಡಾ.ದೇವಕಿ ಪ್ರಸನ್ನ ಅಭಿಪ್ರಾಯಪಟ್ಟರು.
ಇಲ್ಲಿನ ಕ್ರೈಸ್ಟ್‌ಕಿಂಗ್ #Christ King ಶಿಕ್ಷಣ ಸಂಸ್ಥೆಗಳಲ್ಲಿ ಆಯೋಜಿಸಲಾಗಿದ್ದ ರಾಷ್ಟ್ರೀಯ ಹಿಂದಿ ದಿನಾಚರಣೆಯಲ್ಲಿ #Hindi Day ಅವರು ಮಾತನಾಡಿದರು.
ಎಲ್ಲಾ ಭಾಷೆಗಳಿಗೆ ತಮ್ಮದೇ ಆದ ಮಹತ್ವದೆ. ಭಾಷೆಗಳಲ್ಲಿ ಪರಿಪೂರ್ಣತೆಯಿದ್ದರೆ ನಮ್ಮಲ್ಲಿ ಆತ್ಮಶ್ವಾಸ ಹೆಚ್ಚಾಗುತ್ತದೆ. ಹಿಂದಿ ಭಾಷೆಯಲ್ಲಿ ಪಾಂಡಿತ್ಯದ್ದರೆ ಭಾರತ ದರ್ಶನ ಮಾಡಿಕೊಳ್ಳಬಹುದು ಎಂದು ತಿಳಿಸಿ ಹಿಂದಿ ಭಾಷೆಯ ವ್ಯಾಕರಣ ವಿಶೇಷತೆಯ ಬಗ್ಗೆ ತಿಳಿಸಿದರು.
ಸಂಸ್ಥೆಯ ಉಪ ಪ್ರಾಚಾರ್ಯ ಡಾ.ಪ್ರಕಾಶ್ ಭಟ್ ಅವರು ಮಾತನಾಡಿ, ಯಾವುದೇ ಭಾಷೆಯನ್ನು ಕಲಿತಾಗ ಜೀವನದಲ್ಲಿ ಅನಿವಾರ್ಯ ಸಂದರ್ಭದಲ್ಲಿ ನಮ್ಮ ಸಹಾಯಕ್ಕೆ ಬರುತ್ತದೆ ಎಂದರು.
ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕ ರುಡಾಲ್ಫ್ ಕಿಶೋರ್ ಲೋಬೊ, ಆಡಳಿತಾಧಿಕಾರಿ ಕಿರಣ್ ಕ್ರಾಸ್ತಾ, ಹಿಂದಿ ಉಪನ್ಯಾಸಕಿ ಶಾಹಿನಾ ಬಾನು ವೇದಿಕೆಯಲ್ಲಿರು. ಹಿಂದಿ ಉಪನ್ಯಾಸಕಿ ಶಮೀನಾ ಅಮೀರ್ ಪ್ರಾಸ್ತಾವಿಕವಾಗಿ ಮಾತನಾಡಿ, ವಿದ್ಯಾರ್ಥಿ ಬ್ರೋವಿನ್ ಅಗೇರಾ ಅತಿಥಿಗಳನ್ನು ಪರಿಚತಿಸಿದರು. ವಿದ್ಯಾರ್ಥಿಗಳಾದ ಸುದೀಕ್ಷಾ ಸ್ವಾಗತಿಸಿ, ಸ್ಲೀಟಾ ಪ್ರೀಮಲ್ ಫೆರ್ನಾಂಡಿಸ್ ನಿರೂಪಿಸಿ, ಶನ್ವಿತಾ ವಂದಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post