ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ನಡೆಸುತ್ತಿರುವ ಸಾಮಾಜಿಕ-ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ (ಜಾತಿ ಗಣತಿ)ಗೆ #Caste Census ತಡೆ ನೀಡಲು ಹೈಕೋರ್ಟ್ ನಿರಾಕರಿಸಿದ್ದು, ಇದರಿಂದ ರಾಜ್ಯ ಸರ್ಕಾರಕ್ಕೆ ಬಿಗ್ ರಿಲೀಫ್ ಸಿಕ್ಕಿದೆ.
ಜಾತಿ ಗಣತಿಗೆ ತಡೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಗಳ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಮತ್ತು ನ್ಯಾಯಮೂರ್ತಿ ಸಿ ಎಂ ಜೋಶಿ ಅವರನ್ನೊಳಗೊಂಡ ವಿಭಾಗೀಯ ಪೀಠ, ಎರಡು ದಿನ ವಿವರವಾದ ವಾದಗಳನ್ನು ಆಲಿಸಿತು. ಅಂತಿಮವಾಗಿ ಇಂದು ಜಾತಿ ಗಣತಿಗೆ ತಡೆ ನೀಡಲು ನಿರಾಕರಿಸಿ ಮಧ್ಯಂತರ ಆದೇಶ ಹೊರಡಿಸಿದೆ.

ಜನರು ಸ್ವಯಂಪ್ರೇರಣೆಯಿಂದ ಮಾಹಿತಿ ನೀಡಿದರಷ್ಟೇ ಪಡೆಯಬೇಕು. ಈ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕು. ಮಾಹಿತಿ ನೀಡುವಂತೆ ಯಾವುದೇ ಒತ್ತಡ ಹಾಕಬಾರದು ಎಂದು ಹೈಕೋರ್ಟ್ ಮಹತ್ವದ ಷರತ್ತು ವಿಧಿಸಿ, ವಿಚಾರಣೆಯನ್ನು ಡಿಸೆಂಬರ್ ಎರಡನೇ ವಾರಕ್ಕೆ ಮುಂದೂಡಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 


























Discussion about this post