ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಇಲ್ಲಿನ ರೈಲ್ವೆ ವಿಭಾಗದಲ್ಲಿ ಆಯೋಜಿಸಲಾಗಿದ್ದ ಸ್ವಚ್ಛತಾ ಹಿ ಸೇವಾ 2025 ಅಭಿಯಾನದ ಅಡಿಯಲ್ಲಿ ಶ್ರಮದಾನ ಯಶಸ್ವಿಯಾಗಿ ನಡೆಯಿತು.
ಸ್ವಚ್ಛತಾ ಹಿ ಸೇವಾ 2025 ಅಭಿಯಾನದ ಭಾಗವಾಗಿ, ನೈಋತ್ಯ ರೈಲ್ವೆಯ ಬೆಂಗಳೂರು ವಿಭಾಗವು ಏಕ್ ದಿನ್, ಏಕ್ ಘಂಟಾ, ಏಕ್ ಸಾಥ್ ಎಂಬ ಧ್ಯೇಯವಾಕ್ಯದಡಿಯಲ್ಲಿ ಶ್ರಮದಾನವನ್ನು ಆಚರಿಸಲಾಯಿತು.
ಕೆಎಸ್’ಆರ್ ಬೆಂಗಳೂರು ಸ್ಟೇಷನ್ ಯಾರ್ಡ್’ನಲ್ಲಿ ನಡೆದ ಈ ಕಾರ್ಯಕ್ರಮಕ್ಕೆ ಹೆಚ್ಚುವರಿ ವಿಭಾಗೀಯ ರೈಲ್ವೆ ವ್ಯವಸ್ಥಾಪಕ ಪ್ರವೀಣ್ ಕಾತರಕಿ ನೇತೃತ್ವ ವಹಿಸಿದ್ದರು. ಬೆಂಗಳೂರು ವಿಭಾಗದ ಅಧಿಕಾರಿಗಳು ಮತ್ತು ಸಿಬ್ಬಂದಿ ಸ್ವಚ್ಛತಾ ಅಭಿಯಾನದಲ್ಲಿ ಉತ್ಸಾಹದಿಂದ ಭಾಗವಹಿಸಿದರು.
ಈ ಶ್ರಮದಾನವನ್ನು ಸ್ವಚ್ಛತಾ ಹಿ ಸೇವಾ ಅಭಿಯಾನದ ಭಾಗವಾಗಿ ಆಯೋಜಿಸಲಾಗಿದ್ದು, ಇದನ್ನು ಸೆ.17 ರಿಂದ ಅ.2 ರವರೆಗೆ ವಿಭಾಗದಾದ್ಯಂತ ಆಚರಿಸಲಾಗುತ್ತಿದೆ.
ಸರ್.ಎಂ. ವಿಶ್ವೇಶ್ವರಯ್ಯ ಟರ್ಮಿನಲ್, ಬೆಂಗಳೂರು ಕಂಟೋನ್ಮೆಂಟ್, ಯಶವಂತಪುರ, ಯಲಹಂಕ, ಕೃಷ್ಣರಾಜಪುರಂ, ಬಂಗಾರಪೇಟೆ ಮತ್ತು ಹಿಂದೂಪುರ ಸೇರಿದಂತೆ ಹಲವಾರು ಇತರ ನಿಲ್ದಾಣಗಳಲ್ಲಿಯೂ ಶ್ರಮದಾನ ಚಟುವಟಿಕೆಗಳನ್ನು ನಡೆಸಲಾಯಿತು.
ಇದರ ಜೊತೆಗೆ, ಮುಖ್ಯ ವೈದ್ಯಕೀಯ ಅಧೀಕ್ಷಕಿ ಡಾ. ಪ್ರಭಾವತಿ ಗಜಲಕ್ಷ್ಮೀ ನೇತೃತ್ವದ ತಂಡವು ಬೆಂಗಳೂರಿನ ವಿಭಾಗೀಯ ರೈಲ್ವೆ ಆಸ್ಪತ್ರೆಯಲ್ಲಿ ಹೆಚ್ಚಿನ ಉತ್ಸಾಹದಿಂದ ಶ್ರಮದಾನವನ್ನು ನಡೆಸಿತು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post