ಕಲ್ಪ ಮೀಡಿಯಾ ಹೌಸ್ | ಕಾರ್ಕಳ |
ವಿದ್ಯಾರ್ಥಿಗಳು ಕಠಿಣ ಪರಿಶ್ರಮದ ಮೂಲಕ ಯುಶಸ್ಸನ್ನು ಸಾಧಿಸುವ ಕಡೆಗೆ ಸದಾ ಕಾಲ ಗಮನ ಕೇಂದ್ರೀಕರಿಸಬೇಕು ಎಂದು ವಿಶ್ವದ ಅತ್ಯಂತ ಕಿರಿಯ ಮುಖ್ಯೋಪಾಧ್ಯಾಯ ಹಿರಿಮೆಯ, ಆನಂದ್ ಶಿಕ್ಷಾನಿಕೇತನ ಸಂಸ್ಥೆಯ ಸ್ಥಾಪಕರಾದ ಪಶ್ಚಿಮ ಬಂಗಾಳದ ಬಾಬರ್ ಅಲಿ ಕರೆ ನೀಡಿದರು.
ಕ್ರಿಯೇಟಿವ್ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ಕ್ರಿಯೇಟಿವ್ ಸ್ಪೂರ್ತಿ ಮಾತು `ಶಿಕ್ಷಣವೇ ಎಲ್ಲಾ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಶೈಕ್ಷಣಿಕ ವಿಚಾರಗಳ ಕುರಿತು ತಿಳಿಸಿದ ಅವರು ತಾವು ಬೆಳೆದು ಬಂದ ಹಾದಿಯ ರೋಚಕತೆಯನ್ನು ವಿವರಿಸಿ ಇತರರಿಗೂ ಸ್ಫೂರ್ತಿಯಾದರು.
ಕಠಿಣ ಪರಿಶ್ರಮದ ಮೂಲಕ ಯಶಸ್ಸನ್ನು ಗಳಿಸಲು ಸಾಧ್ಯ. ಇಂದು ಶ್ರದ್ದೆಯಿಂದ ಓದಿ ಗುರಿ ಸಾಧಿಸಬೇಕು. ಮುಂದೊಂದು ದಿನ ಹಿಂದೆ ಕಳೆದ ದಿನಗಳನ್ನು ಅವಲೋಕಿಸಿದಾಗ, ಹೋರಾಟದ ದಿನಗಳು ಕೂಡ ನಿಮಗೆ ಅತ್ಯಂತ ಸುಂದರವಾಗಿ ಕಾಣುತ್ತವೆ ಎಂದು ವಿದ್ಯಾರ್ಥಿಗಳನ್ನು ಹುರಿದುಂಬಿಸಿ ಮಾತನಾಡಿದರು.
ಸಹಸಂಸ್ಥಾಪಕರಾದ ವಿದ್ವಾನ್ ಗಣಪತಿ ಭಟ್ ಅವರು ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ಸ್ಮರಣಿಕೆಯನ್ನು ನೀಡಿ ಗೌರವಿಸಿದರು.
ಬೋಧಕ – ಬೋಧಕೇತರ ವರ್ಗದವರು, ವಿದ್ಯಾರ್ಥಿ – ವಿದ್ಯಾರ್ಥಿನಿಯರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಆಂಗ್ಲ ಭಾಷಾ ಉಪನ್ಯಾಸಕ ಯೋಗೀಶ್ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post