ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿವಾರಿಸಲು, ನೈಋತ್ಯ ರೈಲ್ವೆ ಬೆಂಗಳೂರು ಕಂಟೋನ್ಮೆಂಟ್ ಮತ್ತು ಬೀದರ್ ನಡುವೆ ಪ್ರತಿ ದಿಕ್ಕಿನಲ್ಲಿ ವಿಶೇಷ ಎಕ್ಸ್’ಪ್ರೆಸ್ ರೈಲು ಸೇವೆಯನ್ನು ಒದಗಿಸುತ್ತಿದೆ.
ಈ ಕುರಿತಂತೆ ರೈಲ್ವೆ ಇಲಾಖೆ ಮಾಹಿತಿ ಪ್ರಕಟಿಸಿದ್ದು, 07063 ಸಂಖ್ಯೆಯ ಬೀದರ್ – ಬೆಂಗಳೂರು ಕಂಟೋನ್ಮೆಂಟ್ ವಿಶೇಷ ಎಕ್ಸ್’ಪ್ರೆಸ್ ರೈಲು ಅ.4ರಂದು (ಶನಿವಾರ) ಬೀದರ್’ನಿಂದ ಮಧ್ಯಾಹ್ನ 2:40ಕ್ಕೆ ಹೊರಟು, ಮರುದಿನ ಬೆಳಿಗ್ಗೆ 5:00ಕ್ಕೆ ಬೆಂಗಳೂರು ಕಂಟೋನ್ಮೆಂಟ್ ತಲುಪಲಿದೆ.
ಹಿಂತಿರುಗುವ ದಿಕ್ಕಿನಲ್ಲಿ, 07064 ಸಂಖ್ಯೆಯ ಬೆಂಗಳೂರು ಕಂಟೋನ್ಮೆಂಟ್ – ಬೀದರ್ ವಿಶೇಷ ಎಕ್ಸ್’ಪ್ರೆಸ್ ರೈಲು ಅ. 5ರಂದು (ಭಾನುವಾರ) ರಾತ್ರಿ 10:30ಕ್ಕೆ ಬೆಂಗಳೂರು ಕಂಟೋನ್ಮೆಂಟ್’ನಿಂದ ಹೊರಟು, ಮರುದಿನ ಮಧ್ಯಾಹ್ನ 2:40ಕ್ಕೆ ಬೀದರ್ ತಲುಪಲಿದೆ.
ಎಲ್ಲೆಲ್ಲಿ ನಿಲುಗಡೆ?
ಈ ವಿಶೇಷ ರೈಲು ಮಾರ್ಗಮಧ್ಯೆ ರೈಲುಗಳಿಗೆ ಯಲಹಂಕ, ಧರ್ಮಾವರಂ, ಅನಂತಪುರ, ಗುಂತಕಲ್, ಆದೋನಿ, ಮಂತ್ರಾಲಯಂ ರೋಡ್, ರಾಯಚೂರು, ಯಾದಗಿರಿ, ವಾಡಿ, ಶಹಾಬಾದ್, ಕಲಬುರಗಿ, ಕಮಲಾಪುರ ಮತ್ತು ಹುಮನಾಬಾದ್ ನಿಲ್ದಾಣಗಳಲ್ಲಿ ನಿಲುಗಡೆಗಳನ್ನು ಕಲ್ಪಿಸಲಾಗಿದೆ.
ಎಷ್ಟು ಬೋಗಿಗಳಿವೆ?
ಈ ವಿಶೇಷ ರೈಲು 24 ಬೋಗಿಗಳ ಸಂಯೋಜನೆಯೊಂದಿಗೆ ಓಡಲಿದೆ. ಇದರಲ್ಲಿ – 1 ಎಸಿ ಟು ಟಯರ್, 2 ಎಸಿ ತ್ರಿ ಟಯರ್, 17 ಸಾಮಾನ್ಯ ದ್ವಿತೀಯ ದರ್ಜೆ ಬೋಗಿಗಳು, 2 ಸಾಮಾನ್ಯ ಬೋಗಿಗಳು ಹಾಗೂ 2 ಲಗೇಜ್ ಕಮ್ ದಿವ್ಯಾಂಗ ಸ್ನೇಹಿ ಬೋಗಿಗಳು ಇರಲಿವೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 
























