ಕಲ್ಪ ಮೀಡಿಯಾ ಹೌಸ್ | ಹುಬ್ಬಳ್ಳಿ |
ಮಹಾತ್ಮ ಗಾಂಧೀಜಿ ಅವರು ಸತ್ಯ ಹಾಗೂ ಅಹಿಂಸೆಯ ಮಾರ್ಗದ ಮೂಲಕ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಅಮೂಲ್ಯ ಕೊಡುಗೆ ಹಾಗೂ ವಿನಯ ಮತ್ತು ನಿಷ್ಠೆಯ ಪ್ರತೀಕವಾಗಿದ್ದ ಲಾಲ್ ಬಹಾದ್ದೂರ್ ಶಾಸ್ತ್ರಿ ಅವರು ದೇಶಕ್ಕೆ ನೀಡಿದ “ಜೈ ಜವಾನ್, ಜೈ ಕಿಸಾನ್” ಎಂಬ ಸ್ಫೂರ್ತಿದಾಯಕ ಘೋಷಣೆಯನ್ನು ಎಲ್ಲರೂ ಸ್ಮರಿಸಿಬೇಕು ಎಂದು ವಿಭಾಗೀಯ ರೈಲ್ವೆ ವ್ಯವಸ್ಥಾಪಕರಾದ (DRM) ಬೇಲಾ ಮೀನಾ ತಿಳಿಸಿದರು.
ಹುಬ್ಬಳ್ಳಿ ರೈಲ್ವೆ ವಿಭಾಗದ #Hubli Railway Division ವತಿಯಿಂದ ಇಂದು SSS ಹುಬ್ಬಳ್ಳಿ ರೈಲು ನಿಲ್ದಾಣದಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಮಾಜಿ ಪ್ರಧಾನಮಂತ್ರಿ ಲಾಲ್ ಬಹಾದ್ದೂರ್ ಶಾಸ್ತ್ರೀ #Mahathma Gandhi – LalBahadhur Shastri ಅವರ ಜಯಂತ್ಯೋತ್ಸವ ಮತ್ತು ಸ್ವಚ್ಛತಾ ಹಿ ಸೇವಾ – 2025 ಅಭಿಯಾನದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.

ಸಮಾರಂಭಕ್ಕೂ ಮೊದಲು ರೈಲ್ವೆ ನಿಲ್ದಾಣದ ಆವರಣದಲ್ಲಿ ಶ್ರಮದಾನ ಮಾಡಲಾಯಿತು. ನಂತರ DRM ಬೇಲಾ ಮೀನಾ ಅವರು ಹಾಗೂ ಹಿರಿಯ ಅಧಿಕಾರಿಗಳು ನಿಲ್ದಾಣದ ಆವರಣದಲ್ಲಿರುವ ಮಹಾತ್ಮ ಗಾಂಧಿ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿ ಗೌರವ ಸಲ್ಲಿಸಿದರು.
ಸಾಂಸ್ಕೃತಿಕ ಸಮಾರಂಭದಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ,ಫಾತಿಮಾ ಪದವಿ ಕಾಲೇಜ್ ರೈಲ್ವೆ ಹೈ -ಸ್ಕೂಲ್ ವಿದ್ಯಾರ್ಥಿಗಳು ಪ್ಲಾಸ್ಟಿಕ್ ಮುಕ್ತ ಪರಿಸರ ಸಂರಕ್ಷಣೆ ಕುರಿತು ಕಿರು ನಾಟಕ ಹಾಗೂ ನೃತ್ಯವನ್ನು ಪ್ರಸ್ತುತ ಪಡಿಸಿದರು. ಡ್ರಾಯಿಂಗ್, ಪ್ರಬಂಧ ಹಾಗೂ ರಸಪ್ರಶ್ನೆ ಸ್ಪರ್ಧೆಗಳಲ್ಲಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಕೊನೆಯಲ್ಲಿ ನಿಲ್ದಾಣದ ಪ್ರಯಾಣಿಕರಿಗೆ ಪರಿಸರ ಸ್ನೇಹಿ ಕೈಚೀಲ ವಿತರಿಸಲಾಯಿತು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news












Discussion about this post