ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ರಾಜ್ಯದಲ್ಲೇ ಖ್ಯಾತಿ ಪಡೆದಿರುವ ಹಾಸನಾಂಬ ಉತ್ಸವದಲ್ಲಿ #Hasanamba Utsav ಈ ವರ್ಷದಿಂದ ವಿಐಪಿ ಸಂಪ್ರದಾಯಕ್ಕೆ ಬ್ರೇಕ್ ಹಾಕಿ, ಭಕ್ತರಿಗೆ ಸಹಾಯವಾಗುವ ರೀತಿಯಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಕೃಷ್ಣ ಬೈರೇಗೌಡ #Minister Krishna Byregowda ಹೇಳಿದ್ದಾರೆ.
ಈ ಕುರಿತಂತೆ ಹಾಸನ ಜಿಲ್ಲೆಯ ಶಾಸಕರು, ಸಂಸದರು ಹಾಗೂ ಅಧಿಕಾರಿಗಳ ಜೊತೆಗಿನ ಸಭೆಯ ನಂತರ ಅವರು ಮಾತನಾಡಿದರು.
ಹಾಸನಾಂಬ ಉತ್ಸವದಲ್ಲಿ ವಿಐಪಿ ಸಂಸ್ಕೃತಿಯಿಂದ ಸ್ಥಳೀಯರು ಬೇಸತ್ತಿದ್ದಾರೆ. ಕಳೆದ ವರ್ಷ ಸಾಕಷ್ಟು ಅಸಮಾಧಾನ ವ್ಯಕ್ತವಾಗಿದೆ. ಹೀಗಾಗಿ, ಈ ವರ್ಷದಿಂದ ಇದಕ್ಕೆ ಸಾಂಸ್ಕೃತಿಕ ತಿಲಾಂಜಲಿ ಹಾಡಿ, ಅಲ್ಲದೆ, ಜನಸ್ನೇಹಿ ಹಾಸನಾಂಬ ಉತ್ಸವಕ್ಕೆ ಕರೆ ನೀಡಲಾಗುವುದು ಎಂದು ಭರವಸೆ ನೀಡಿದರು.
ಕಳೆದ ವರ್ಷ ಹಾಸನದಲ್ಲಿ ವಿಐಪಿಗಳ ಎಸ್ಕಾರ್ಟ್’ಗಳದ್ದೇ ಸದ್ದು ಹೆಚ್ಚಾಗಿತ್ತು. ಆದರೆ, ಈ ವರ್ಷ ಇದಕ್ಕೆ ಅವಕಾಶ ನೀಡಲಾಗುವುದಿಲ್ಲ. ರಾಜ್ಯಪಾಲರು, ಮುಖ್ಯಮಂತ್ರಿಗಳು, ಉಪ ಮುಖ್ಯಮಂತ್ರಿಗಳು, ಗೃಹ ಸಚಿವರು, ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ, ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳು ಹಾಗೂ ಮಾಜಿ ಪ್ರಧಾನಿಗಳಿಗೆ ಮಾತ್ರ ಎಸ್ಕಾರ್ಟ್ ವ್ಯವಸ್ಥೆ ನೀಡಲಾಗುವುದು ಎಂದು ಮಾಹಿತಿ ನೀಡಿದರು.
ಶಾಸಕರು, ಸಚಿವರು, ನ್ಯಾಯಾಧೀಶರು, ಕ್ರೀಡಾಪಟುಗಳು, ಸಿನಿಮಾ ತಾರೆಯರು ಸೇರಿದಂತೆ ಉಳಿದ ಗಣ್ಯ ವ್ಯಕ್ತಿಗಳು ತಾವು ದೇವಾಲಯಕ್ಕೆ ಭೇಟಿ ನೀಡುವ ಬಗ್ಗೆ ಇ-ಮೇಲ್ ಅಥವಾ ಫೋನ್ ಕರೆಗಳ ಮೂಲಕ ಮೊದಲೇ ತಿಳಿಸಬೇಕು. ಮಾಹಿತಿ ನೀಡುವ ಗಣ್ಯವ್ಯಕ್ತಿಗಳನ್ನು ಜಿಲ್ಲಾಡಳಿತ ಏರ್ಪಡಿಸಿರುವ ವಾಹನದಲ್ಲಿ ದೇವಾಲಯಕ್ಕೆ ಕರೆತಂದು ದೇವರ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುವುದು ಎಂದು ತಿಳಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post