ಕಲ್ಪ ಮೀಡಿಯಾ ಹೌಸ್ | ಹುಬ್ಬಳ್ಳಿ |
ದೀಪಾವಳಿ ಹಬ್ಬದ ಪ್ರಯುಕ್ತ ಹೆಚ್ಚುವರಿ ಪ್ರಯಾಣಿಕರ ದಟ್ಟಣೆಯನ್ನು ನಿವಾರಿಸಲು, ನೈಋತ್ಯ ರೈಲ್ವೆಯು ಶ್ರೀ ಸಿದ್ಧಾರೂಢ ಸ್ವಾಮೀಜಿ ಹುಬ್ಬಳ್ಳಿ-ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ನಡುವೆ ಮತ್ತು ಎಸ್‌ಎಂವಿಟಿ ಬೆಂಗಳೂರು-ವಿಜಯಪುರ ನಡುವೆ ವಿಶೇಷ ರೈಲು ಸೇವೆಗಳನ್ನು ಒದಗಿಸಲಿದೆ.
ಈ ಕುರಿತಂತೆ ನೈಋತ್ಯ ರೈಲ್ವೆ ಮಾಹಿತಿ ನೀಡಿದ್ದು, ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ಒತ್ತಡ ನಿವಾರಿಸಲು, ಪ್ರಯಾಣಿಕರ ಅನುಕೂಲಕ್ಕಾಗಿ ಈ ಸೌಲಭ್ಯ ಒದಗಿಸಲಾಗುತ್ತಿದೆ.
1. ಅಕ್ಟೋಬರ್ 17ರಂದು 07345 ಸಂಖ್ಯೆಯ ವಿಶೇಷ ರೈಲು ಹುಬ್ಬಳ್ಳಿಯಿಂದ ಬೆಳಗ್ಗೆ 11ಗಂಟೆಗೆ ಹೊರಟು, ಅದೇ ದಿನ ರಾತ್ರಿ 8 ಗಂಟೆಗೆ ಬೆಂಗಳೂರಿನ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ತಲುಪಲಿದೆ.
ಈ ವಿಶೇಷ ರೈಲು ಮಾರ್ಗದಲ್ಲಿ ಹಾವೇರಿ, ಹರಿಹರ, ದಾವಣಗೆರೆ, ಅರಸೀಕೆರೆ ಮತ್ತು ತುಮಕೂರು ನಿಲ್ದಾಣಗಳಲ್ಲಿ ನಿಲುಗಡೆ ನೀಡಲಿದೆ. ಈ ರೈಲು 18 ಬೋಗಿಗಳನ್ನು ಒಳಗೊಂಡಿರುತ್ತದೆ. ಅವುಗಳಲ್ಲಿ 01 ಎಸಿ 2-ಟೈರ್, 02 ಎಸಿ 3-ಟೈರ್, 09 ಸ್ಲೀರ್ಪ ಕ್ಲಾಸ್, 04 ಜನರಲ್ ಸೆಕೆಂಡ್ ಕ್ಲಾಸ್, ಮತ್ತು 02 ಎಸ್’ಎಲ್’ಆರ್/ಡಿ ಬೋಗಿಗಳು ಇರಲಿವೆ.
2. 06245 ಸಂಖ್ಯೆಯ ಎಸ್’ಎಂವಿಟಿ ಬೆಂಗಳೂರು-ವಿಜಯಪುರ ವಿಶೇಷ ಎಕ್ಸ್’ಪ್ರೆಸ್ ರೈಲು ಅಕ್ಟೋಬರ್ 17ರಂದು ಎಸ್’ಎಂವಿಟಿ ಬೆಂಗಳೂರಿನಿಂದ ರಾತ್ರಿ 10 ಗಂಟೆಗೆ ಹೊರಟು, ಮರುದಿನ ಮಧ್ಯಾಹ್ನ 2:05 ಗಂಟೆಗೆ ವಿಜಯಪುರ ತಲುಪಲಿದೆ.
ಅದೇ ರೀತಿ, 06246 ಸಂಖ್ಯೆಯ ವಿಜಯಪುರ-ಎಸ್‌ಎಂವಿಟಿ ಬೆಂಗಳೂರು ವಿಶೇಷ ಎಕ್ಸ್’ಪ್ರೆಸ್ ರೈಲು ಅಕ್ಟೋಬರ್ 22ರಂದು ವಿಜಯಪುರದಿಂದ ಸಂಜೆ 7 ಗಂಟೆಗೆ ಹೊರಟು, ಮರುದಿನ ಬೆಳಿಗ್ಗೆ 11:15 ಗಂಟೆಗೆ ಎಸ್’ಎಂವಿಟಿ ಬೆಂಗಳೂರನ್ನು ತಲುಪಲಿದೆ.
ಮಾರ್ಗದಲ್ಲಿ, ಈ ರೈಲುಗಳು (06245/46) ತುಮಕೂರು, ಅರಸೀಕೆರೆ, ಬೀರೂರು, ಚಿಕ್ಕಜಾಜೂರು, ಚಿತ್ರದುರ್ಗ, ರಾಯದುರ್ಗ, ಬಳ್ಳಾರಿ ಕಂಟೋನ್ಮೆAಟ್, ತೋರಣಗಲ್ಲು, ಹೊಸಪೇಟೆ, ಕೊಪ್ಪಳ, ಗದಗ, ಬದಾಮಿ, ಬಾಗಲಕೋಟೆ ಮತ್ತು ಆಲಮಟ್ಟಿ ನಿಲ್ದಾಣಗಳಲ್ಲಿ ನಿಲ್ಲಲಿವೆ. ಈ ರೈಲು ಸಹ ರೈಲು ಸಂಖ್ಯೆ 07345 ರಂತೆಯೇ 18 ಬೋಗಿಗಳ ಸಂಯೋಜನೆಯನ್ನು ಹೊಂದಿರಲಿವೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post